Congress ಪಕ್ಷಕ್ಕೆ ಮುಜುಗರ ತರುವ ಕೆಲಸ ಮಾಡಲಾರೆ: ಡಿ.ಕೆ. ಶಿವಕುಮಾರ್
Team Udayavani, Aug 14, 2023, 11:46 PM IST
ಬೆಂಗಳೂರು: ಪಕ್ಷ ಅಥವಾ ಸರಕಾರಕ್ಕೆ ಮುಜುಗರ ಉಂಟುಮಾಡುವ ಹಾಗೂ ಕಾರ್ಯಕರ್ತರ ಸ್ವಾಭಿಮಾನಕ್ಕೆ ಧಕ್ಕೆ ತರುವ ಯಾವುದೇ ಕೆಲಸವನ್ನು ನಾನು ಮಾಡುವುದಿಲ್ಲ. ನನ್ನ ಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗುಡುಗಿದರು.
ಕ್ವಿನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಪಕ್ಷದ ಸಾಮಾನ್ಯ ಸಭೆಯಲ್ಲಿ ತಮ್ಮ ವಿರುದ್ಧ ವಿಪಕ್ಷಗಳು ಮಾಡಿರುವ ಆರೋಪ ಗಳಿಗೆ ತಿರುಗೇಟು ನೀಡಿದ ಅವರು, ಬೇರೆಯವರಂತೆ ಹೆದರಿಸಿದಂತೆ ನನ್ನನ್ನು ಹೆದರಿಸಲು ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ಬಿಜೆಪಿ ಆಡಳಿತದ ಭ್ರಷ್ಟಾಚಾರಗಳನ್ನು ಬಯಲು ಮಾಡುತ್ತೇನೆ ಎಂದು ಹೇಳಿದರು.
ಸರಕಾರ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ಇದನ್ನು ಸಹಿಸಲಾಗದೆ ಬಿಜೆಪಿ ನಾಯಕರು ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದಾರೆ. ಅವರ ಆರೋಪ ಸಾಬೀತಾದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಭ್ರಷ್ಟಾಚಾರದ ಬಗ್ಗೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ನಮಗೆ ನೈಜತೆ ನೋಡಿ ಬಿಲ್ ಪಾವತಿ ಮಾಡಿ ಎಂದು ಹೇಳಿದ್ದಾರೆ. ಅದಕ್ಕೆ ನಾವು ತನಿಖೆ ಆರಂಭಿಸಿದ್ದೇವೆ. ಈ ತನಿಖೆ ಆರಂಭಿಸಿದ ತತ್ಕ್ಷಣ ನಮ್ಮ ವಿರುದ್ಧ ಕಮಿಷನ್ ಆರೋಪ ಮಾಡುತ್ತಿದ್ದಾ ರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್.ಯಡಿಯೂರಪ್ಪ
Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ
BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.