ಕಾರು ಪಲ್ಟಿ: ಮೂವರು ಸಾವು
Team Udayavani, Aug 16, 2019, 3:03 AM IST
ಬ್ಯಾಡಗಿ: ರಸ್ತೆ ತಿರುವಿನಲ್ಲಿ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಉರುಳಿ ಬಿದ್ದ ಪರಿಣಾಮ, ಮೂವರು ಮೃತಪಟ್ಟು ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಮೋಟೆಬೆನ್ನೂರ ಬಳಿ ರಾಷ್ಟ್ರೀಯ ಹೆದ್ದಾರಿ-4ರ ಕೋಟೆಗುಡ್ಡದ ಬಳಿ ಗುರುವಾರ ಮಧ್ಯಾಹ್ನ ನಡೆದಿದೆ.
ಮೃತರನ್ನು ಬಳ್ಳಾರಿ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕು ಬೆಣಗಲ್ ಗ್ರಾಮದ ಕೊಟ್ರೇಶ್ ಸಿದ್ರಾಮಪ್ಪ (45), ಚಿತ್ರದುರ್ಗ ಜಿಲ್ಲೆ ಹೊಸದುರ್ಗ ಪಟ್ಟಣದ ಪಿ.ಎಸ್.ಸತೀಶಕುಮಾರ (32), ದಾವಣಗೆರೆ ನಿಟ್ಟುವಳ್ಳಿಯ ಎಸ್.ಕೆ.ಆನಂದಕುಮಾರ್ (38) ಎಂದು ಗುರುತಿಸಲಾಗಿದೆ. ಇವರೆಲ್ಲಾ ಇಂಡಸ್‌ಮನಿ ಗೋಲ್ಡ್ ಲೋನ್ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.
ದುರ್ಘಟನೆ ಯಲ್ಲಿ ಕೊಟ್ರೇಶ್ ಸ್ಥಳದಲ್ಲೇ ಅಸುನೀಗಿದ್ದು, ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಸತೀಶ್ ಕುಮಾರ್‌ನನ್ನು ರಾಣಿಬೆನ್ನೂರ ಸರ್ಕಾರಿ ಆಸ್ಪತ್ರೆ, ಚಾಲಕ ಆನಂದಕುಮಾರ ಅವರನ್ನು ದಾವಣಗೆರೆ ಎಸ್.ಎಸ್.ಆಸ್ಪತ್ರೆಗೆ ದಾಖಲಿಸ ಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ತೀವ್ರ ಗಾಯಗೊಂಡಿದ್ದ ದಾವಣಗೆರೆ ವಿದ್ಯಾನಗರದ ಬಿ.ಎಸ್. ಪ್ರದೀಪ್ ಅವರನ್ನು ಎಸ್‌ಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಾಲ್ವರೂ ಕಂಪನಿ ಕೆಲಸದ ನಿಮಿತ್ತ ದಾವಣಗೆರೆಯಿಂದ ಗೋವಾಕ್ಕೆ ಫೋರ್ಡ್ ಇಕೋ ನ್ಪೋರ್ಟ್ ಕಾರಿನಲ್ಲಿ ತೆರಳುತ್ತಿದ್ದರು. ಕೋಟೆಗುಡ್ಡದ ಬಳಿಯ ತಿರುವಿನಲ್ಲಿ ಕಾರು ನಿಯಂತ್ರಣ ತಪ್ಪಿದ್ದರಿಂದ ದುರ್ಘಟನೆ ನಡೆದಿದೆ. ಈ ಸಂಬಂಧ ಬ್ಯಾಡಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davanagere; ಹೊಸ ವರ್ಷ ಆಚರಣೆ ವೇಳೆ ಅಪಘಾ*ತ: ಯುವಕ ಸಾ*ವು,ಇನ್ನೋರ್ವ ಗಂಭೀರ
Gundlupete: ವಿದ್ಯುತ್ ಕಂಬಕ್ಕೆ ಗುದ್ದಿದ್ದ ಕಾರು: ಸ್ಥಳದಲ್ಲೇ ಇಬ್ಬರು ಸಾವು
Lucknow; ಯುವಕನಿಂದ ತಾಯಿ ಮತ್ತು ನಾಲ್ವರು ಸಹೋದರಿಯರ ಬರ್ಬರ ಹ*ತ್ಯೆ!
Aranthodu;ಅರಣ್ಯದಲ್ಲಿ ಹೊಸ ವರ್ಷ ಪಾರ್ಟಿ: 40 ಮಂದಿ ಅರಣ್ಯ ಇಲಾಖೆಯ ವಶಕ್ಕೆ!
BJP ತಪ್ಪುಗಳನ್ನು ಆರ್‌ಎಸ್‌ಎಸ್ ಬೆಂಬಲಿಸುತ್ತದೆಯೇ? ಭಾಗವತ್ ರನ್ನು ಪ್ರಶ್ನಿಸಿದ ಕೇಜ್ರಿವಾಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.