ಕಾರು ಅಪಘಾತದಲ್ಲಿ ನವ ವಿವಾಹಿತೆ ಸಾವು!
Team Udayavani, Apr 3, 2021, 5:27 PM IST
ಪುತ್ತೂರು : ಬೆಂಗಳೂರಿನ ನೆಲಮಂಗಲದಲ್ಲಿ ಕೋಳಿ ಸಾಗಾಟದ ಲಾರಿ ಮತ್ತು ವ್ಯಾಗನರ್ ಕಾರು ನಡುವೆ ಡಿಕ್ಕಿ ಸಂಭವಿಸಿ ಪುತ್ತೂರಿನ ನವ ವಿವಾಹತೆಯೊಬ್ಬರು ಮೃತಪಟ್ಟ ಘಟನೆ ಏ.3ರ ಬೆಳಿಗ್ಗೆ ನಡೆದಿದೆ. ಕಾರಿನಲ್ಲಿದ್ದ ಮೂವರು ಗಂಭೀರ ಗಾಯಗೊಂಡಿದ್ದಾರೆ.
ಚಿಕ್ಕಮುಡ್ನೂರು ಗ್ರಾಮದ ದಾರಂದಕುಕ್ಕು ನಿವಾಸಿ ಗೋಪಿಕ್ ಎಂಬವರ ಪತ್ನಿ ಧನುಷಾ(23ವ)ರವರು ಮೃತಪಟ್ಟವರು. ದಾರಂದಕುಕ್ಕು ನಿವಾಸಿ ಸವಿತಾ ಉದಯ ಕುಮಾರ್ ನಾಯ್ಕ್ ಅವರ ಪುತ್ರ ಗೋಪಿಕ್ ಮತ್ತು ಬೆಳ್ತಂಗಡಿ ಗೇರುಕಟ್ಟೆ ಕುಂಟಿನಿ ನಿವಾಸಿ ರೂಪಾ ಮತ್ತು ಪದ್ಮನಾಭ ಶೆಟ್ಟಿಯವರ ಪುತ್ರಿ ಧನುಷಾ ಅವರ ವಿವಾಹ ಫೆ.21ರಂದು ಗುರುವಾಯನಕೆರೆ ಬಂಟರ ಭವನದಲ್ಲಿ ನಡೆದಿತ್ತು.
ವಿವಾಹದ ಬಳಿಕ ದಾರಂದಕುಕ್ಕು ಮನೆಯಲ್ಲಿದ್ದ ನವ ದಂಪತಿ ತನ್ನ ಸಂಬಂಧಿಕರಾದ ಶುಭಲಕ್ಷ್ಮೀ ಮತ್ತು ರೂಪಾ ವೇಣುಗೋಪಾಲ್ ಅವರ ಜೊತೆ ಎ.3ರಂದು ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ನಡೆಯುವ ಕಾರ್ಯಕ್ರಮಕ್ಕೆಂದು ನಸುಕಿನ ಜಾವ ಮಾರುತಿ ವ್ಯಾಗನರ್ ಕಾರಿನಲ್ಲಿ ಹೊರಟ್ಟಿದ್ದರು. ಕಾರು ಬೆಂಗಳೂರು ನೆಲಮಂಗಲಕ್ಕೆ ತಲುಪುತ್ತಿದ್ದಂತೆ ಕೋಳಿ ಸಾಗಾಟದ ಲಾರಿ ಕಾರಿಗೆ ಡಿಕ್ಕಿಯಾಗಿದೆ.
ಡಿಕ್ಕಿಯ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಗೋಪಿಕ್ ಅವರ ಪತ್ನಿ ಧನುಷಾ ಅವರು ಮೃತಪಟ್ಟಿದ್ದರು. ಉಳಿದಂತೆ ಗೋಪಿಕ್ ಮತ್ತು ಸಂಬಂಧಿಕರು ತೀವ್ರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್
Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ
Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್.ಷಡಾಕ್ಷರಿ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್‌ಗೆ ಬಿಜೆಪಿ ದೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಎರಡು ಸೈಬರ್ ವಂಚನೆ ಪ್ರಕರಣ: ಸೆನ್ ಪೊಲೀಸರಿಂದ ಇಬ್ಬರ ಬಂಧನ
High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್
Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ
Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್.ಷಡಾಕ್ಷರಿ
Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.