![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Apr 19, 2022, 7:40 AM IST
ಬೆಂಗಳೂರು: ಮುಖ್ಯಮಂತ್ರಿ ನಿವಾಸಕ್ಕೆ ಘೆರಾವ್ ಹಾಕಲು ಹೋಗಿದ್ದಕ್ಕೆ ನಮ್ಮ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಈಶ್ವರಪ್ಪ ಅವರು ಮೆರವಣಿಗೆ ಮೂಲಕ ಸಿಎಂ ನಿವಾಸಕ್ಕೆ ಹೋಗಿ ರಾಜೀನಾಮೆ ನೀಡಿದ್ದರು. ಆಗಲೂ ಜನ ಸೇರಿದ್ದರು. ಅವರ ಮೇಲೆ ಯಾಕೆ ಪ್ರಕರಣ ದಾಖಲಿಸಲಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಈಶ್ವರಪ್ಪ ಅವರು ರಾಜೀನಾಮೆ ನೀಡಲು ಬಂದಾಗ ಬಿಜೆಪಿ ನಾಯಕರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ಅವರು ಕೂಗಾಟ, ಚೀರಾಟ ಮಾಡಿದರು. ಆದರೂ ಪ್ರಕರಣ ದಾಖಲಿಸಲಿಲ್ಲ ಇದು ರಾಜಕೀಯ ಅಲ್ಲವೇ ಎಂದು ಕೇಳಿದರು.
ಈಶ್ವರಪ್ಪನವರು ಶಿವಮೊಗ್ಗದಲ್ಲಿ ಸೆಕ್ಷನ್ 144 ಉಲ್ಲಂಘನೆ ಮಾಡಿ ಹರ್ಷ ಶವಯಾತ್ರೆ ಮಾಡಿದರೂ ಕೇಸ್ ಹಾಕಲಿಲ್ಲ. ಬಿಜೆಪಿ ನಾಯಕರು ಸಾಕಷ್ಟು ಬಾರಿ ಕಾನೂನು ಉಲ್ಲಂ ಸಿದರೂ ಅವರ ಮೇಲೆ ಕೇಸ್ ಹಾಕದೆ, ನಮ್ಮ ಮೇಲೆ ಮಾತ್ರ ದಾಖಲಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಳೆದ ಒಂದು ವರ್ಷದಲ್ಲಿ ನೈತಿಕ ಪೊಲೀಸ್ ಗಿರಿ ಹೆಸರಲ್ಲಿ ಭಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರು ಅನೇಕ ಬಾರಿ ಕಾನೂನು ಕೈಗೆತ್ತಿಕೊಂಡಿದ್ದಾರೆ. ನೈತಿಕ ಪೊಲೀಸ್ ಗಿರಿ ಮಾಡಿದರೆ ತಪ್ಪೇನು ಎಂದು ಮುಖ್ಯಮಂತ್ರಿಗಳೇ ಪ್ರೋತ್ಸಾಹ ನೀಡುತ್ತಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ:ಮಸೀದಿಯಲ್ಲಿ ಸತ್ಯನಾರಾಯಣ ಪೂಜೆ ನಡೆಯುತ್ತದೆಯೋ? ಇನ್ನೂ ತಗ್ಗಿಬಗ್ಗಿ ಇರಬೇಕೆ: ಪೇಜಾವರ ಶ್ರೀ
ಪೊಲೀಸ್ ಠಾಣೆಯಲ್ಲಿ ಅಧಿಕಾರಿಗಳು ಸಮವಸ್ತ್ರ ತ್ಯಜಿಸಿ ಕೇಸರಿ ವಸ್ತ್ರ ಧರಿಸಿದರೂ ಸಿಎಂ, ಗೃಹಮಂತ್ರಿ ಸುಮ್ಮನಿದ್ದರು.ಹುಬ್ಬಳ್ಳಿ ಚರ್ಚ್ ಗೆ ನುಗ್ಗಿ ಬಲವಂತವಾಗಿ ಭಜನೆ ಮಾಡಿದರು. ಅನ್ಯಧರ್ಮಿಯರು ಜಾತ್ರೆಗಳಲ್ಲಿ ವ್ಯಾಪಾರ ಮಾಡಬಾರದು ಎಂದು ನಿರ್ಬಂಧ ಹೇರಿದರು ಇದೆಲ್ಲವನ್ನೂ ಸರ್ಕಾರ ನೋಡಿಕೊಂಡು ಸುಮ್ಮನಿದೆ ಎಂದು ತಿಳಿಸಿದರು.
ಹುಬ್ಬಳ್ಳಿಯಲ್ಲಿ ನಡೆದಿರುವ ಘಟನೆಯನ್ನು ಕಾಂಗ್ರೆಸ್ ಪಕ್ಷ ಉಗ್ರವಾಗಿ ಖಂಡಿಸುತ್ತದೆ. ಯಾರೂ ಕಾನೂನು ಕೈಗೆ ತೆಗೆದುಕೊಳ್ಳಬಾರದು. ಪೊಲೀಸ್ ಅಧಿಕಾರಿಗಳು ನಿಷ್ಪಕ್ಷಪಾತವಾಗಿ ಕೆಲಸ ಮಾಡಿ ಪರಿಸ್ಥಿತಿ ನಿಭಾಯಿಸಿದ್ದಾರೆ. ನಾವು ಅವರನ್ನು ಗೌರವಿಸುತ್ತೇವೆ, ಅಭಿನಂದಿಸುತ್ತೇವೆ ಎಂದು ಹೇಳಿದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.