ಕ್ರಿಕೆಟಿಗ ಮಿಶ್ರಾ ವಿರುದ್ಧ ಪ್ರಕರಣ: ಮಧ್ಯಂತರ ತಡೆ
Team Udayavani, Feb 23, 2019, 1:29 AM IST
ಬೆಂಗಳೂರು: ಯುವತಿಯೊಬ್ಬಳ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಕ್ರಿಕೆಟಿಗ ಅಮಿತ್ ಮಿಶ್ರಾ ವಿರುದಟಛಿದ ಪ್ರಕರಣಕ್ಕೆ ಹೈಕೋರ್ಟ್ ಶುಕ್ರವಾರ ಮಧ್ಯಂತರ ತಡೆ ನೀಡಿದೆ.
ತಮ್ಮ ವಿರುದಟಛಿದ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಅಮಿತ್ ಮಿಶ್ರಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಅರವಿಂದ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿ ಆದೇಶಿಸಿತು. ಅಮಿತ್ ಮಿಶ್ರಾ 2015ರ ಸೆ.25ರಂದು ನಗರದ ಖಾಸಗಿ ಹೊಟೇಲ್ನಲ್ಲಿ ತಂಗಿದ್ದಾಗ ಈ ಘಟನೆ ನಡೆದಿತ್ತು. ಅವರ ಗೆಳತಿಯೆಂದು ಪರಿಚಯಿಸಿಕೊಂಡ ವಂದನಾ ಜೈನ್ ಮಿಶ್ರಾ ಅನುಪ ಸ್ಥಿತಿಯಲ್ಲಿ ಹೊಟೇಲ್ ಕೋಣೆ ಪ್ರವೇಶಿಸಿತ್ತಾಳೆ. ಬಳಿಕ ತನ್ನ ಮೇಲೆ ಅಮಿತ್ ಮಿಶ್ರಾ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಆಕೆ ಸೆ.27ಕ್ಕೆ ಅಶೋಕನಗರ ಪೊಲೀಸ್ ಠಾಣೆಯಲ್ಲಿ
ದೂರು ದಾಖಲಿಸುತ್ತಾಳೆ, ಇದನ್ನು ಆಧರಿಸಿ ಪೊಲೀಸ್ ಎಫ್ಐಆರ್ ದಾಖಲಿಸಿಕೊಂಡಿರುತ್ತಾರೆ. ಅದನ್ನು ರದ್ದುಗೊಳಿಸುವಂತೆ ಕೋರಿ ಮಿಶ್ರಾ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.