Puneeth Kerehalli: ಹಿಂದೂ ಕಾರ್ಯಕರ್ತ ಪುನೀತ್ ವಿರುದ್ಧ ಆತ್ಮಹತ್ಯೆ ಯತ್ನ ಕೇಸು
Team Udayavani, Oct 9, 2023, 11:58 AM IST
ಬೆಂಗಳೂರು: ತಮ್ಮ ವಿರುದ್ಧ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳ ಸ್ಪಷ್ಟೀಕರಣ ನೀಡವಂತೆ ಕಳೆದ 8 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ವಿರುದ್ಧ ಉಪ್ಪಾರಪೇಟೆ ಠಾಣೆಯಲ್ಲಿ ಆತ್ಮಹತ್ಯೆ ಯತ್ನ ಪ್ರಕರಣ ದಾಖಲಾಗಿದೆ.
ಅ.3ರಂದು ಉಪ್ಪಾರಪೇಟೆ ಠಾಣೆ ಪೊಲೀಸರು ಸ್ವಾತಂತ್ರ್ಯ ಉದ್ಯಾನದಲ್ಲಿ ಉಪವಾಸ ಸತ್ಯಾಗ್ರಹ ನಡೆಸಿದ್ದ ಪುನೀತ್ ಕೆರೆಹಳ್ಳಿ ಅವರನ್ನು ವಶಕ್ಕೆ ಪಡೆದು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆಯಲ್ಲಿ ಉಪವಾಸ ಅಂತ್ಯಗೊಳಿಸಿ ಆಹಾರ-ನೀರು ಸೇವಿಸುವಂತೆ ವೈದ್ಯರು ಮನವೊಲಿಸಲು ಪ್ರಯತ್ನಿಸಿದ್ದಾರೆ. ಆಹಾರ-ನೀರು ಸೇವಿಸದಿದ್ದಲ್ಲಿ ಜೀವಕ್ಕೆ ಅಪಾಯವಾಗಲಿದೆ ಎಂದು ವೈದ್ಯರು ಹೇಳಿದ್ದಾರೆ.
ಆದರೂ ಪುನೀತ್ ಕೆರೆಹಳ್ಳಿ, ಸರ್ಕಾರ ತಮ್ಮ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳನ್ನು ದಾಖಲಿಸಿದೆ. ಈ ಪ್ರಕರಣಗಳ ಸಂಬಂಧ ಸ್ಪಷ್ಟೀಕರಣ ನೀಡುವವರೆಗೂ ನಾನು ಆಹಾರ-ನೀರು ಸೇವಿಸುವುದಿಲ್ಲ. ನಾನು ಯಾವುದೇ ವೈದ್ಯಕೀಯ ಚಿಕಿತ್ಸೆ ಪಡೆಯುವುದಿಲ್ಲ. ನನ್ನ ಪ್ರಾಣ ಹೋದರೂ ಪರವಾಗಿಲ್ಲ. ನಾನು ಹೀಗೆಯೇ ಇರುತ್ತೇನೆ ಎಂದು ಪುನೀತ್ ಪಟ್ಟು ಹಿಡಿದಿದ್ದಾರೆ. ಈ ಬಗ್ಗೆ ವಿಕ್ಟೋರಿಯಾ ಆಸ್ಪತ್ರೆ ವೈದ್ಯರು ನೀಡಿದ ವರದಿ ಮೇರೆಗೆ ಉಪ್ಪಾರಪೇಟೆ ಠಾಣೆ ಪೊಲೀಸರು, ಪುನೀತ್ ಕೆರೆಹಳ್ಳಿ ವಿರುದ್ಧ ಆತ್ಮಹತ್ಯೆಗೆ ಯತ್ನ ಪ್ರಕರಣ ದಾಖಲಿಸಿದ್ದಾರೆ. ಕೊಲೆ, ಬೆದರಿಕೆ, ಸುಲಿಗೆ ಸೇರಿ 10 ಪ್ರಕರಣಗಳ ಆರೋಪಿಯಾಗಿರುವ ಪುನೀತ್ ಕೆರೆಹಳ್ಳಿ ವಿರುದ್ಧ ಸಿಸಿಬಿ ಪೊಲೀಸರು ಗೂಂಡಾ ಕಾಯ್ದೆ ಜಾರಿಗೊಳಿಸಿ ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಜೈಲಿನಿಂದ ಹೊರಗಡೆ ಬಂದ ಪುನೀತ್ ಕೆರೆಹಳ್ಳಿ ಸರ್ಕಾರ ತನ್ನ ವಿರುದ್ಧ ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು
Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gangavathi: ಕ್ಲಿಫ್ ಜಂಪಿಂಗ್ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…
ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು
Udupi: ವಾಹನ ದಟ್ಟಣೆ ನಿಯಂತ್ರಣ ಕ್ರಮ ಎಷ್ಟು ಫಲಪ್ರದ?
Gold Scam; ವೈದ್ಯ ದಂಪತಿಗೂ ₹6.2 ಕೋಟಿ ವಂಚಿಸಿದ್ದ ಐಶ್ವರ್ಯ
Udupi: ವಾರಾಹಿ ನೀರು ನಗರಕ್ಕೆ ಇನ್ನೂ ಬಂದಿಲ್ಲ, ಅಗೆಯುವುದೂ ನಿಂತಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.