ಕನಕಪುರ ನ್ಯಾಯಾಲಯದಲ್ಲೇ ಯತ್ನಾಳ್ ವಿರುದ್ಧದ ಕೇಸ್ ವಿಚಾರಣೆ: ಹೈಕೋರ್ಟ್
ಯತ್ನಾಳ್ ವಿರುದ್ಧ ಪ್ರಕರಣ ದಾಖಲಿಸಿದ್ದ ಡಿಕೆಶಿ
Team Udayavani, Mar 27, 2024, 9:15 PM IST
ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನನ್ನ ವಿರುದ್ಧ ಕನಕಪುರ ಸಿವಿಲ್ ನ್ಯಾಯಾಲಯದಲ್ಲಿ ದಾಖಲಿಸಿರುವ ಮಾನಹಾನಿ ಮೊಕದ್ದಮೆಯನ್ನು ಬೆಂಗಳೂರಿನ ನ್ಯಾಯಾಲಯಕ್ಕೆ ವರ್ಗಾಯಿಸಬೇಕೆಂದು ಕೋರಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.
ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿಯನ್ನು ತಿರಸ್ಕರಿಸಿ ಆದೇಶ ನೀಡಿತು. ಅಲ್ಲದೆ ಅರ್ಜಿದಾರರು (ಬಸನಗೌಡ ಪಾಟೀಲ್ ಯತ್ನಾಳ್) ವಿಚಾರಣೆಗಾಗಿ ಕನಕಪುರಕ್ಕೆ ಹೋದ ಸಂದರ್ಭದಲ್ಲಿ ಸೂಕ್ತ ಭದ್ರತೆ ಒದಗಿಸಬೇಕು ಎಂದು ಪೊಲೀಸ್ ಇಲಾಖೆಗೆ ಸೂಚನೆ ನೀಡಿ ಅರ್ಜಿ ಇತ್ಯರ್ಥಪಡಿಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ನಮ್ಮ ಕಕ್ಷಿದಾರರಿಗೆ ಕಿರುಕುಳ ನೀಡುವ ಉದ್ದೇಶದಿಂದ ಡಿ.ಕೆ.ಶಿವಕುಮಾರ್ ಅವರು ಕನಕಪುರದ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ಸಿಯಲ್ಲಿ ದಾವೆ ಹೂಡಿ¨ªಾರೆ. ಅರ್ಜಿದಾರರು ವಿಜಯಪುರದ ಶಾಸಕರಾಗಿದ್ದು ವಿಜಯಪುರ-ಕನಕಪುರದ ನಡುವಿನ ಅಂತರ 565 ಕಿ.ಮೀ. ಹೀಗಾಗಿ ಪ್ರಕರಣವನ್ನು ಕನಕಪುರದಿಂದ ಬೆಂಗಳೂರಿಗೆ ವರ್ಗಾಯಿಸಬೇಕು. ಅರ್ಜಿದಾರರು ಕನಕಪುರಕ್ಕೆ ಭೇಟಿ ನೀಡಿದರೆ ತನ್ನ ಮೇಲೆ ದಾಳಿಯಾಗುವ ಸಂಭವವಿದೆ. 2008ರಿಂದ ಡಿ.ಕೆ.ಶಿವಕುಮಾರ್ ಅವರು ಕನಕಪುರದ ಶಾಸಕರಾಗಿದ್ದು ಸಾಕ್ಷಿ ತಿರುಚುವ ಸಾಧ್ಯತೆ ಇದೆ. ನಾನು ವಿಜಯಪುರದಲ್ಲಿ ಹೇಳಿಕೆ ನೀಡಿದ್ದು ಕನಕಪುರದಲ್ಲಿ ದಾವೆ ಹೂಡಲಾಗಿದೆ. ಹೀಗಾಗಿ ಪ್ರಕರಣವನ್ನು ಬೆಂಗಳೂರಿಗೆ ವರ್ಗಾಯಿಸಬೇಕು ಎಂದು ಕೋರಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.