Cast Census: ಜಾತಿಗಣತಿ ವರದಿ ಚರ್ಚೆಯ ಈಗಿನ ವಿಚಾರ, ಅಂಕಿ-ಅಂಶಗಳೆಲ್ಲ ಊಹಾಪೋಹವಷ್ಟೇ: ಸಿಎಂ
ನಾಳೆಯ ಸಂಪುಟ ಸಭೆಯಲ್ಲಿ ವರದಿ ಮಂಡನೆ ಬಗ್ಗೆ ದಿಲ್ಲಿಯಲ್ಲಿ ಸಿದ್ದರಾಮಯ್ಯ ಹೇಳಿದ್ದೇನು? ವಿಡಿಯೋ ನೋಡಿ
Team Udayavani, Jan 15, 2025, 5:59 PM IST
ಹೊಸದಿಲ್ಲಿ: ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಲ್ಲಿಸಿರುವ ಜಾತಿಗಣತಿ ವರದಿಯಲ್ಲಿರುವ ಅಂಕಿ-ಅಂಶ ಇನ್ನೂ ಸಾರ್ವಜನಿಕವಾಗಿಯೇ ಇಲ್ಲ, ಈಗ ಕೇಳಿ ಬರುತ್ತಿರುವ ವಿಚಾರಗಳು ಕೇವಲ ಊಹಾಪೋಹಗಳಾಗಿರುವುದರಿಂದ, ಈ ವಿಚಾರದ ಬಗ್ಗೆ ವಿರೋಧ ಅನಾವಶ್ಯಕ. ಗುರುವಾರ (ನಾಳೆ) ನಡೆಯುವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿಯ ವಿಷಯ ಮಂಡಿಸಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ದಿಲ್ಲಿಗೆ ಎಐಸಿಸಿ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಸುದ್ದಿಗಾರರೊಂದಿಗೆ ಮಾತನಾಡಿ ಜಾತಿಗಣತಿ ಅಧ್ಯಯನ ವರದಿ ನಾಳೆ ಮಂಡಿಸಬೇಕೆಂದು ಇದ್ದೇವು. ಆದರೆ ಕೆಲವು ಅನಾನುಕೂಲಗಳಿಂದ ಮುಂದಿನ ಸಂಪುಟ ಸಭೆಯಲ್ಲಿ ವಿಷಯ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಂಡು ಮಂಡಿಸಲಾಗುವುದು. ಬೇರೆ ಸಮುದಾಯಗಳ ವಿರೋಧದ ಕಾರಣಕ್ಕೆ ಅಲ್ಲ, ಸಂಪುಟದಲ್ಲಿ ಇನ್ನು ಚರ್ಚೆಯಾಗಿಲ್ಲ, ಸಾರ್ವಜನಿಕವಾಗಿಯೂ ಬಹಿರಂಗವಾಗಿಲ್ಲ. ಸಂಪುಟದಲ್ಲಿ ಚರ್ಚೆಯಾದ ಬಳಿಕ ಎಲ್ಲರ ಅಭಿಪ್ರಾಯ ಪಡೆದು ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಹೇಳಿದರು.
ವರದಿ ನಾಳೆ ಮಂಡಿಸುವ ಲೆಕ್ಕಚಾರವಿತ್ತು:
ಗುರುವಾರದ ಸಚಿವ ಸಂಪುಟ ಸಭೆಯಲ್ಲಿ ಹಲವು ವಿರೋಧಗಳ ನಡುವೆಯೂ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಲ್ಲಿಸಿರುವ ಜಾತಿಗಣತಿ ವರದಿಯ ಸ್ವೀಕರಿಸಿದ್ದ ರಾಜ್ಯ ಸರಕಾರವು ಮುಚ್ಚಿದ ಲಕೋಟೆ ತೆರೆಯಲು ನಿರ್ಧರಿಸಿತ್ತು. ಸಿದ್ದರಾಮಯ್ಯ ನೇತೃತ್ವದ ಅಂದಿನ ಕಾಂಗ್ರೆಸ್ ಸರಕಾರ ಕಾಂತರಾಜು ಅಧ್ಯಕ್ಷತೆಯಲ್ಲಿ 2015ರಲ್ಲಿ ಆಯೋಗ ರಚಿಸಿತ್ತು.
ಸುಮಾರು 169 ಕೋಟಿ ರೂ. ವ್ಯಯಿಸಿ 1,351 ಜಾತಿ, ಉಪಜಾತಿಗಳ ಸಾಮಾಜಿಕ ಮತ್ತು ಶೈಕ್ಷಣಿಕ ಹಿಂದುಳಿದಿರುವಿಕೆಯ ಬಗ್ಗೆ ಅಧ್ಯಯನ ನಡೆಸಿತ್ತು. ಆದರೆ ವರದಿ ಸಿದ್ಧಗೊಳ್ಳುವುದ ರೊಳಗಾಗಿಯೇ ಸಿದ್ದರಾಮಯ್ಯ ಸರಕಾರದ ಅವಧಿ ಪೂರ್ಣಗೊಂಡು ಬೇರೆ ಸರಕಾರ ಅಸ್ತಿತ್ವಕ್ಕೆ ಬಂದಿತ್ತು. 2020ರಲ್ಲಿ ಕೆ. ಜಯಪ್ರಕಾಶ್ ಹೆಗ್ಡೆ ನೇತೃತ್ವದಲ್ಲಿ ಆಯೋಗ ರಚಿಸಿ, ಆಯೋಗದ ಅವಧಿ ವಿಸ್ತರಣೆ ಮಾಡಿ ಕೊನೆಗೂ 2024ರಲ್ಲಿ ವರದಿಯನ್ನು ಸರಕಾರ ಪಡೆದುಕೊಂಡಿತ್ತು.
ಮೋಹನ್ ಭಾಗವತ್ ಹೇಳಿಕೆ ಸ್ವಾತಂತ್ರ್ಯ ಹೋರಾಟಗಾರರಿಗೆ ಅಪಮಾನ:
ಅಯೋಧ್ಯೆಯ ರಾಮಮಂದಿರ ಪ್ರಾರಂಭವಾದ ದಿನ ದೇಶಕ್ಕೆ ನಿಜ ಅರ್ಥದಲ್ಲಿ ಸ್ವಾತಂತ್ರ್ಯ ಲಭಿಸಿದೆ ಎಂಬ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಹೇಳಿಕೆ ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನಗೈದ ಹೋರಾಟಗಾರರಿಗೆ ಮಾಡಿದ ಅವಮಾನ. ಈ ಬಗ್ಗೆ ರಾಹುಲ್ ಗಾಂಧಿಯವರು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ್ದರು. ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸದ ಆರ್‌ಎಸ್‌ಎಸ್ ಹಾಗೂ ಬಿಜೆಪಿಯವರು ಬ್ರಿಟಿಷರೊಂದಿಗೆ ಶಾಮೀಲಾಗಿದ್ದರು ಎಂದು ಆರೋಪಿಸಿದರು.
ಬಾಕಿ ಪಾವತಿಗೆ ಕ್ರಮ:
ಕಿಯೋನಿಕ್ಸ್ ಅಸೋಸಿಯೇಷನ್ ಅವರು ಬಾಕಿ ಇರುವ ಬಿಲ್ಲುಗಳು ಪಾವತಿಯಾಗದಿರುವ ಬಗ್ಗೆ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರದವರು ದೊಡ್ಡ ಮೊತ್ತದ ಬಿಲ್ಲುಗಳನ್ನು ಪಾವತಿ ಮಾಡದೇ ಬಾಕಿ ಉಳಿಸಿದ್ದಾರೆ. ಈ ಬಿಲ್ಲುಗಳನ್ನು ಹಂತ ಹಂತವಾಗಿ ಪಾವತಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ದೆಹಲಿಯಲ್ಲಿ ಮಾಧ್ಯಮಗಳಿಗೆ ಮುಖ್ಯಮಂತ್ರಿ @siddaramaiah ಅವರು ಪ್ರತಿಕ್ರಿಯಿಸಿದರು. pic.twitter.com/cZfYDL1JTM
— CM of Karnataka (@CMofKarnataka) January 15, 2025
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಕಟಾವಿವೆ ಬಂದಿದ್ದ 50 ಎಕರೆ ಕಬ್ಬು ಬೆಂಕಿಗಾಹುತಿ… ಕಂಗಾಲಾದ ರೈತರು
ಗುಜರಾತ್‌ಗೆ ತಲುಪಿಸಬೇಕಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ಅಡಿಕೆಯ ವಂಚಿಸಿದ ಖದೀಮರ ಸೆರೆ
Bidar: ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ: ಐವರು ಮತ್ತೆ ಮೂರು ದಿನ ಸಿಐಡಿ ಕಸ್ಟಡಿಗೆ
MUDA Case: ಸಿಎಂ ಸಿದ್ದು ಮುಡಾ ಹಗರಣ… ಜ.27ಕ್ಕೆ ಮುಂದೂಡಿದ ಧಾರವಾಡ ಹೈಕೋರ್ಟ್
ಮೀಟರ್ ಬಡ್ಡಿ ದಂಧೆಗೆ ಮನನೊಂದು ವಿಎಸ್‌ಕೆ ವಿವಿ ಅಟೆಂಡರ್ ಆತ್ಮಹತ್ಯೆ… ಪೊಲೀಸರಿಂದ ತನಿಖೆ
MUST WATCH
ಹೊಸ ಸೇರ್ಪಡೆ
Wayanad Landslide: ನಾಪತ್ತೆ ಆದವರು ಮೃತರೆಂದು ಘೋಷಣೆಗೆ ಕೇರಳ ತೀರ್ಮಾನ
Dharwad: ಕಟಾವಿವೆ ಬಂದಿದ್ದ 50 ಎಕರೆ ಕಬ್ಬು ಬೆಂಕಿಗಾಹುತಿ… ಕಂಗಾಲಾದ ರೈತರು
ಗುಜರಾತ್‌ಗೆ ತಲುಪಿಸಬೇಕಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ಅಡಿಕೆಯ ವಂಚಿಸಿದ ಖದೀಮರ ಸೆರೆ
Los Angeles Wildfires: ಇನ್ನೂ 60 ಲಕ್ಷ ಜನರಿಗೆ ಸಂಕಷ್ಟ, ಸಾವಿನ ಸಂಖ್ಯೆ 25ಕ್ಕೇರಿಕೆ
Bidar: ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ: ಐವರು ಮತ್ತೆ ಮೂರು ದಿನ ಸಿಐಡಿ ಕಸ್ಟಡಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.