ಆನ್‌ಲೈನ್‌ನಲ್ಲಿ ಜಾತಿ, ಆದಾಯ ಪ್ರಮಾಣ ಪತ್ರ
Team Udayavani, Jan 31, 2018, 9:42 AM IST
ಬೆಂಗಳೂರು: ಜಾತಿ ಹಾಗೂ ಆದಾಯ ಪ್ರಮಾಣ ಪತ್ರ, ವಾಸ ದೃಢೀಕರಣ ಪತ್ರ ಇನ್ಮುಂದೆ ಆನ್‌ಲೈನ್‌ನಲ್ಲೇ ಪಡೆಯಬಹುದು. ಜಾತಿ ಹಾಗೂ ಆದಾಯ ಪ್ರಮಾಣ ಪತ್ರ, ವಾಸ ದೃಢೀಕರಣ ಪತ್ರ ಆನ್‌ಲೈನ್ ಮೂಲಕ ತಾವಿರುವ ಸ್ಥಳದಲ್ಲೇ ಅಥವಾ ಸೈಬರ್ ಕೆಫೆಯಲ್ಲಿ ಪಡೆಯಲು ಅನುಕೂಲವಾಗುವಂತೆ ಕಂದಾಯ ಇಲಾಖೆ ಸಾಫ್ಟ್ವೇರ್ ಸಿದ್ಧಪಡಿಸಿದೆ. ಅಲ್ಲದೇ, ರಾಜ್ಯದ 30 ಜಿಲ್ಲೆಗಳ ನಾಲ್ಕು ಕೋಟಿ ವೈಯಕ್ತಿಕ ಹಾಗೂ 80 ಲಕ್ಷ ಕುಟುಂಬಗಳ ಜಾತಿ, ಆದಾಯ, ವಾಸ ದೃಢೀಕರಣ ಪತ್ರ ಸಿದ್ಧಪಡಿಸಿದೆ.
ದೇಶದಲ್ಲೇ ಮೊದಲ ಬಾರಿಗೆ ಇಂತದ್ದೊಂದು ವ್ಯವಸ್ಥೆ ಜಾರಿಗೆ ತರಲಾಗಿದ್ದು, ಸಾರ್ವಜನಿಕರು ದಿನದ 24 ಗಂಟೆ ಎಲ್ಲೇ ಇದ್ದರೂ ತಮಗೆ ಬೇಕಾದ ಜಾತಿ, ಆದಾಯ ಪ್ರಮಾಣ ಪತ್ರ ಹಾಗೂ ವಾಸ ದೃಢೀಕರಣ ಪತ್ರ ಪಡೆಯಬಹುದು ಎಂದು ಕಂದಾಯ ಇಲಾಖೆಯ
ಭೂಮಿ ವಿಭಾಗದ ನಿರ್ದೇಶಕ ಮುನೀಷ್ ಮೌದ್ಗಿಲ್ ತಿಳಿಸಿದ್ದಾರೆ. ಈ ಹಿಂದೆ ಕಂದಾಯ ಇಲಾಖೆ ಪ್ರತಿವರ್ಷ 800 ನಾಡಕಚೇರಿಗಳ ಮೂಲಕ ಒಂದು ಕೋಟಿಯಷ್ಟು ಜಾತಿ, ಆದಾಯ ಪ್ರಮಾಣ ಪತ್ರ, ವಾಸ ದೃಢೀಕರಣ ಪತ್ರ ವಿತರಿಸುತ್ತಿತ್ತು. ಅರ್ಜಿ ಸ್ವೀಕರಿಸಿದ ನಂತರ ಗ್ರಾಮ ಲೆಕ್ಕಿಗ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರವೇ ನೀಡಲಾಗುತ್ತಿತ್ತು. ಆದರೆ, ಇದೀಗ ನಾಗರಿಕರು ತಾವಿರುವ
ಸ್ಥಳದಲ್ಲೇ ಆನ್‌ಲೈನ್ ಮೂಲಕ ಪಡೆಯಬಹುದು ಎಂದು ಹೇಳಿದ್ದಾರೆ. ಹೆಚ್ಚಿನ ಮಾಹಿತಿಗೆ www.nadakacheri.karnataka.gov.in/ ಸಂಪರ್ಕಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Gujarat: 200 ರೂ ಆಸೆಗಾಗಿ ಪಾಕಿಸ್ತಾನಕ್ಕೆ ನೌಕಾಪಡೆ ಮಾಹಿತಿ ನೀಡಿದಾತನ ಬಂಧನ
Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!
Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ
Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ
Daily Horoscope: ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.