ಜಾತಿ ಗಣತಿ: ಸಹಿ ಹಾಕದ ಸದಸ್ಯ ಕಾರ್ಯದರ್ಶಿಗೆ ನೋಟಿಸ್‌

Team Udayavani, Mar 16, 2023, 6:27 AM IST

ಜಾತಿ ಗಣತಿ: ಸಹಿ ಹಾಕದ ಸದಸ್ಯ ಕಾರ್ಯದರ್ಶಿಗೆ ನೋಟಿಸ್‌

ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸಲ್ಲಿಸಿದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ (ಜಾತಿ ಗಣತಿ)ಗೆ ಸಹಿ ಹಾಕದ ಅಂದಿನ ಸದಸ್ಯ ಕಾರ್ಯದರ್ಶಿಗೆ ಈಗಾಗಲೇ ಕಾರಣ ಕೇಳಿ ನೋಟಿಸ್‌ ನೀಡಲಾಗಿದೆ ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ ಹೆಗ್ಡೆ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸದಸ್ಯ ಕಾರ್ಯದರ್ಶಿ ಸಹಿ ಮಾಡದ ಹಿನ್ನೆಲೆಯಲ್ಲಿ ವರದಿ ಸ್ವೀಕೃತವಾಗಿಲ್ಲ. ಆದರೆ, ಸಹಿ ಹಾಕದಿರಲು ಕಾರಣ ಏನು ಎಂದು ಅಂದಿನ ಸದಸ್ಯ ಕಾರ್ಯದರ್ಶಿಗೆ ನೋಟಿಸ್‌ ನೀಡಲಾಗಿದೆ ಎಂದರು.

ಮೀಸಲಾತಿಗೆ 133 ಮನವಿ
ರಾಜ್ಯಾದ್ಯಂತ ಹಲವಾರು ಜಾತಿ, ಜನಾಂಗ ಹಾಗೂ ಸಮುದಾಯಗಳಿಂದ ಹಿಂದುಳಿದ ವರ್ಗಗಳ ಮೀಸಲು ಪಟ್ಟಿಯ ವಿವಿಧ ಪ್ರವರ್ಗಗಳಿಗೆ ಸೇರ್ಪಡೆಗೊಳಿಸುವಂತೆ 133 ಮನವಿಗಳು ಸಲ್ಲಿಕೆಯಾಗಿದ್ದು, ಇವುಗಳ ವಿಚಾರಣೆ ನಡೆಸಿ ಒಟ್ಟು 34 ವರದಿಗಳನ್ನು ಸಿದ್ಧಪಡಿಸಲಾಗಿದೆ. ಮನವಿ ಮೇರೆಗೆ ಆಯಾ ಜನಾಂಗಗಳು ವಾಸವಾಗಿರುವ ಸ್ಥಳಗಳಿಗೆ ಪ್ರವಾಸ ಕೈಗೊಂಡು, ಸಾಮಾಜಿಕ-ಶೈಕ್ಷಣಿಕ ಸ್ಥಿತಿಗತಿಗಳನ್ನು ಕೂಲಂಕಷವಾಗಿ ಪರಿಶೀಲಿಸಿ 34 ವರದಿಗಳನ್ನು ತಯಾರಿಸಲಾಗಿದೆ. ಉಳಿದ 42 ಮನವಿಗಳ ವರದಿ ಬಾಕಿ ಇದ್ದು, ಸುಮಾರು 57 ಮನವಿಗಳಿಗೆ ಸಂಬಂಧಿಸಿದಂತೆ ಸರಕಾರಕ್ಕೆ ವರದಿ ಸಲ್ಲಿಸಲಾಗಿದೆ ಎಂದು ಹೆಗ್ಡೆ ತಿಳಿಸಿದರು.

ಈಗಾಗಲೇ ಹಿಂದುಳಿದ ವರ್ಗಗಳ ಮೀಸಲಾತಿ ಜಾತಿ ಪಟ್ಟಿಯಲ್ಲಿರುವ 46 ಅಲೆಮಾರಿ/ಅರೆ ಅಲೆಮಾರಿ ಜಾತಿಗಳಿಗೆ ಜಾತಿ ಪ್ರಮಾಣ ಪತ್ರ ನೀಡುವ ಸಂದರ್ಭದಲ್ಲಿ ಆಯಾ ಜಾತಿಯ ಮುಂದೆ ಅಲೆಮಾರಿ/ಅರೆ ಅಲೆಮಾರಿ ಎಂದು ನಮೂದಿಸಿ ಜಾತಿ ಪ್ರಮಾಣ ಪತ್ರವನ್ನು ನೀಡುವಂತೆ ಶಿಫಾರಸು ಮಾಡಲು ಆಯೋಗ ತೀರ್ಮಾನಿಸಿದೆ ಎಂದರು.

ಯಾವ ಜಾತಿಯಲ್ಲಿ
ಎಷ್ಟು ಸರಕಾರಿ ನೌಕರರು?
ರಾಜ್ಯದಲ್ಲಿ ಯಾವ ಜಾತಿಯ ಎಷ್ಟು ಜನ ಸರಕಾರಿ ಉದ್ಯೋಗದಲ್ಲಿದ್ದಾರೆ? ಯಾವ ಹುದ್ದೆಗಳಲ್ಲಿದ್ದಾರೆ? ಸಮು ದಾಯದ ವಿದ್ಯಾರ್ಥಿಗಳು ಎಷ್ಟು ಶಿಕ್ಷಣ ಪಡೆದಿದ್ದಾರೆ? ಇಂತಹ ಹಲವು ಮಹತ್ವದ ಮಾಹಿತಿಗಳನ್ನು ಕಲೆಹಾಕಲು ಮುಂದಾಗಿರುವ ಹಿಂದುಳಿದ ವರ್ಗಗಳ ಆಯೋಗ, ಈ ಸಂಬಂಧ ವಿವಿಧ ಇಲಾಖೆಗಳು ಮತ್ತು ವಿಶ್ವವಿದ್ಯಾಲಯಗಳಿಗೆ ಮಾಹಿತಿ ನೀಡುವಂತೆ ಕೋರಿದೆ. ಈ ಮಾಹಿತಿ ಲಭ್ಯವಾದರೆ, ಯಾವ ಸಮುದಾಯಕ್ಕೆ ಎಷ್ಟು ಶಿಕ್ಷಣ ದೊರಕಿದೆ? ಯಾರಿಗೆ ಎಷ್ಟು ಸರ್ಕಾರಿ ಉದ್ಯೋಗ ದೊರಕಿದೆ ಎಂಬುದು ಸುಲಭವಾಗಿ ಗೊತ್ತಾಗಲಿದೆ. ಈ ಎಲ್ಲ ಮಾಹಿತಿಗಳ ಸಂಗ್ರಹಕ್ಕೆ ಬಿಇಎಲ್‌ (ಭಾರತ್‌ ಅರ್ತ್‌ಮೂವರ್ಸ್‌ ಲಿ.)ನಿಂದ ಸಾಫ್ಟ್ವೇರ್‌ ಕೂಡ ಸಿದ್ಧಪಡಿಸಲು ಮನವಿ ಮಾಡಲಾಗಿದೆ. ಆದರೆ, ಎಂಟು ತಿಂಗಳ ಹಿಂದಿನಿಂದ ಹಲವು ಬಾರಿ ಪತ್ರ ಬರೆದರೂ ಇದುವೆಗೆ ಶೇ. 50ರಷ್ಟು ಮಾಹಿತಿ ಮಾತ್ರ ಲಭ್ಯವಾಗಿದೆ ಎಂದು ಜಯಪ್ರಕಾಶ ಹೆಗ್ಡೆ ಬೇಸರ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

13

ಕಾಪು ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನೂತನ ಭಂಡಿ ರಥ, ರಜತ ಗರುಡ ವಾಹನ, ಶೇಷ ವಾಹನ ಸಮರ್ಪಣೆ

12

Politics: ಖರ್ಗೆ ತಳ್ಳಿದ ಡಿಕೆಶಿ; ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಟೀಕಿಸಿದ ಬಿಜೆಪಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

State BJP: ತೀವ್ರ ಕುತೂಹಲ ಮೂಡಿಸಿದ ವಿಜಯೇಂದ್ರ -ಸಿ.ಟಿ.ರವಿ ಭೇಟಿ 

State BJP: ತೀವ್ರ ಕುತೂಹಲ ಮೂಡಿಸಿದ ವಿಜಯೇಂದ್ರ -ಸಿ.ಟಿ.ರವಿ ಭೇಟಿ 

H. D. Deve Gowda: ದೇಶದ ಅರ್ಥ ವ್ಯವಸ್ಥೆ ಸರಿದಾರಿಗೆ ತಂದವರು ಸಿಂಗ್‌: ದೇವೇಗೌಡ

H. D. Deve Gowda: ದೇಶದ ಅರ್ಥ ವ್ಯವಸ್ಥೆ ಸರಿದಾರಿಗೆ ತಂದವರು ಸಿಂಗ್‌: ದೇವೇಗೌಡ

MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ

MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ

12

Politics: ಖರ್ಗೆ ತಳ್ಳಿದ ಡಿಕೆಶಿ; ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಟೀಕಿಸಿದ ಬಿಜೆಪಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1

Kasaragod Crime News: ಅವಳಿ ಪಾಸ್‌ಪೋರ್ಟ್‌; ಕೇಸು ದಾಖಲು

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Australian Open:  ಹಿಂದೆ ಸರಿದ ಸಿಮೋನಾ ಹಾಲೆಪ್‌

Australian Open: ಹಿಂದೆ ಸರಿದ ಸಿಮೋನಾ ಹಾಲೆಪ್‌

5

Kasaragod: ಚಂದ್ರಗಿರಿ ಸೇತುವೆಯಿಂದ ಹೊಳೆಗೆ ಹಾರಿದ ಯುವಕ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.