ಜಾನುವಾರು ಹತ್ಯೆ ಪ್ರಕರಣ: 33ಕ್ಕೂ ಅಧಿಕ ಜನರು ವಶಕ್ಕೆ
Team Udayavani, Sep 3, 2017, 12:15 PM IST
ಹುನಗುಂದ(ಬಾಗಲಕೋಟೆ): ಪಟ್ಟಣದಲ್ಲಿ ಬಕ್ರೀದ್ ನಿಮಿತ್ತ ನಡೆದಿದೆ ಎನ್ನಲಾದ ಜಾನುವಾರು ಹತ್ಯೆ ಪ್ರಕರಣದ ಗಲಾಟೆ ವಿಕೋಪಕ್ಕೆ ತಿರುಗಿದ್ದು, ಎರಡು ಗುಂಪುಗಳ ಮಧ್ಯೆ ಕಲ್ಲು ತೂರಾಟ ನಡೆದಿದೆ. ಇದರಿಂದ ಓರ್ವ ವ್ಯಕ್ತಿ
ಗಾಯಗೊಂಡಿದ್ದು, ಪೊಲೀಸರು 33ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದಿದ್ದಾರೆ.
ಪಟ್ಟಣದ ಬಸ್ ನಿಲ್ದಾಣ ಹಿಂಬದಿಯ ಶಹಾನ್ ಷಾ ಓಣಿಯಲ್ಲಿ ಬಕ್ರೀದ್ ಹಬ್ಬದ ನಿಮಿತ್ತ ಜಾನುವಾರು ಬಲಿಕೊಡುತ್ತಿದ್ದರು. ಈ ವೇಳೆ ಅಲ್ಲಿಗೆ ಆಗಮಿಸಿದ ಹಿಂದೂ ಪರ ಸಂಘಟನೆ ಯುವಕರು, ಜಾನುವಾರು ನಿಷೇಧ ಕಾಯ್ದೆ ಜಾರಿಯಲ್ಲಿದೆ, ಜಾನುವಾರು ಹತ್ಯೆ ಮಾಡಬೇಡಿ ಎಂದು ತಕರಾರು ತೆಗೆದಿದ್ದಾರೆ. ಇದಕ್ಕೆ ಸೊಪ್ಪು ಹಾಕದಿದ್ದಾಗ ಯುವಕರು, ಆ ದೃಶ್ಯಗಳನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದಾರೆ, ಇದು ಗಲಾಟೆ ತೀವ್ರಗೊಳ್ಳಲು ಕಾರಣವಾಗಿದೆ ಎಂದು ತಿಳಿದು ಬಂದಿದೆ.
ಸುದ್ದಿ ಹರಡುತ್ತಿದ್ದಂತೆ ಮತ್ತಷ್ಟು ಜನ ಸೇರಿ ಕಲ್ಲು ತೂರಾಟ ನಡೆಸಿದ್ದಾರೆ. ಅದರಲ್ಲಿ ಓರ್ವ ಯುವಕನ ತಲೆಗೆ ಪೆಟ್ಟಾಗಿ,
ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷಯ ತಿಳಿದ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಹಿಂದೂ ಪರ ಸಂಘಟನೆಯ 5 ಹಾಗೂ ಮುಸ್ಲಿಂ ಸಮುದಾಯದ 28ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ವಿಚಾರಣೆ
ನಡೆಸಿದ್ದಾರೆ. ಜತೆಗೆ ಶಾಂತಿ ಸುವ್ಯವಸ್ಥೆಗೆ ಸೂಚಿಸಿದ್ದು, ಘಟನೆಗೆ ಕಾರಣರಾದವರ ವಿರುದಟಛಿ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
MUST WATCH
ಹೊಸ ಸೇರ್ಪಡೆ
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.