Cauvery ನೀರು ತಮಿಳುನಾಡಿಗೆ; ಬಿಜೆಪಿ ಪ್ರತಿಭಟನೆ: ಸಂಸದೆ ಸುಮಲತಾ ಭಾಗಿ
ಸರ್ವಪಕ್ಷ ಸಭೆ ಕರೆದ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್
Team Udayavani, Aug 21, 2023, 4:41 PM IST
ಮಂಡ್ಯ: ಕೆಆರ್‌ಎಸ್ ಅಣೆಕಟ್ಟಿನಿಂದ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವುದನ್ನು ವಿರೋಧಿಸಿ ಮಂಡ್ಯದಲ್ಲಿ ಬಿಜೆಪಿ ಸೋಮವಾರ ಬೃಹತ್ ಪ್ರತಿಭಟನೆ ನಡೆಸಿ ರಾಜ್ಯ ಸರಕಾರದ ವಿರುದ್ಧ ತೀವ್ರ ಆಕ್ರೋಶ ಹೊರ ಹಾಕಿದೆ.
ಸಂಜಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿದರು. ಹೆದ್ದಾರಿಯಲ್ಲಿ ಟೈರ್ಗಳಿಗೆ ಬೆಂಕಿ ಹಾಕಿ ಆಕ್ರೋಶ ಹೊರ ಹಾಕಿದರು.
ಇದನ್ನೂ ಓದಿ : Cauvery; ಡಿಎಂಕೆ ಒತ್ತಡಕ್ಕೆ ಮಣಿದು ತಮಿಳುನಾಡಿಗೆ ನೀರು: ರಾಜೀವ್ ಚಂದ್ರಶೇಖರ್ ಕಿಡಿ
”ಕಾವೇರಿ ಒಡಲನ್ನು ಬರಿದು ಮಾಡಿಯೇ ಸಿದ್ದ ಎಂದು ರಾಜ್ಯದ ಕಾಂಗ್ರೆಸ್ ಸರ್ಕಾರ ಸಂಕಲ್ಪ ತೊಟ್ಟಂತಿದೆ.ಕಾವೇರಿಗಾಗಿ ಹೋರಾಟ ನಡೆಯುತ್ತಿರುವಾಗಲೇ, ಕೇವಲ 4,900 ಕ್ಯೂಸೆಕ್ಸ್ ಒಳಹರಿವು ಇರುವಾಗ ತಮಿಳುನಾಡಿಗೆ 12,631 ಕ್ಯೂಸೆಕ್ಸ್ ಕಾವೇರಿ ಹರಿಸಿ ರಾಜ್ಯದ ರೈತರನ್ನೇ ಲೇವಡಿ ಮಾಡಲಾಗುತ್ತಿದೆ. ಮುಂದಿನ ಬೇಸಿಗೆಯಲ್ಲ, ಚಳಿಗಾಲದಲ್ಲೇ ಕೆ.ಆರ್.ಎಸ್. ಬರಿದು ಮಾಡುವುದು ಸಿದ್ದರಾಮಯ್ಯ ಅವರ ಸರ್ಕಾರದ ದುಷ್ಟ ಗುರಿಯಂತಿದೆ!” ಎಂದು ರಾಜ್ಯ ಬಿಜೆಪಿ ಸರಣಿ ಟ್ವೀಟ್ ಮಾಡಿದೆ.
ಸರ್ವಪಕ್ಷ ಸಭೆ ಕರೆದ ಡಿಸಿಎಂ
ಜಲಸಂಪನ್ಮೂಲ ಸಚಿವ,ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಕೋರ್ಟ್ ಆದೇಶದಂತೆ ನೀರು ಬಿಟ್ಟಿದ್ದೇವೆ. ಬುಧವಾರ ಸರ್ವಪಕ್ಷ ನಾಯಕರ ಸಭೆ ಕರೆದಿದ್ದೇವೆ. ಕೇಂದ್ರ ಸರಕಾರದ ಬಳಿ ಸರ್ವಪಕ್ಷ ನಿಯೋಗ ಕೊಂಡೊಯ್ದು, ಅಲ್ಲಿಮಹದಾಯಿ ವಿಚಾರವನ್ನೂ ಚರ್ಚೆ ಮಾಡಬೇಕು ಎಂದು ಹೇಳಿದ್ದಾರೆ.
ಸರ್ವಪಕ್ಷ ಸಭೆಯಲ್ಲಿ ಭಾಗಿಯಾಗುತ್ತೇವೆ ಎಂದು ಬಿಜೆಪಿ ಹಿರಿಯ ನಾಯಕರಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಆರ್.ಅಶೋಕ್ ಹೇಳಿಕೆ ನೀಡಿದ್ದಾರೆ. ಈ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು, ಜನರ ಒಳಿತಿಗಾಗಿ ಕೆಲಸ ಮಾಡಬೇಕು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.