ಬೆಂಗಳೂರು ಸೇರಿ ವಿವಿಧೆಡೆ ಡಿಕೆಶಿ ಆಪ್ತರ ಮನೆಗಳ ಮೇಲೆ ಸಿಬಿಐ ದಾಳಿ
Team Udayavani, May 31, 2018, 12:34 PM IST
ಬೆಂಗಳೂರು: ‘ನಮ್ಮ ಮೇಲೆ ಕೇಂದ್ರ ಸರ್ಕಾರ ಸಂಚು ಹೂಡಿದೆ,11 ಮಂದಿ ನಮ್ಮ ಆಪ್ತರ ಮನೆ ಮೇಲೆ ಸರ್ಚ್ ವಾರಂಟ್ ಹೊರಡಿಸಲಾಗಿದೆ’ ಎಂದು ಕಾಂಗ್ರೆಸ್ ನಾಯಕ ಡಿ.ಕೆ.ಶಿಕುಮಾರ್ ಮತ್ತು ಸಂಸದ ಡಿ.ಕೆ.ಸುರೇಶ್ ಅವರು ಸುದ್ದಿಗೋಷ್ಠಿ ನಡೆಸಿ ಹೇಳಿಕೆ ನೀಡಿದ ಬೆನ್ನಲ್ಲೇ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ಶಾಕ್ ನೀಡಿದ್ದಾರೆ.
ಡಿ.ಕೆ.ಶಿವಕುಮಾರ್ ಅವರ ಕೆಲ ವ್ಯವಹಾರದ ಪಾಲುದಾರರ ನಿವಾಸಗಳ ಮೇಲೆ ಮೇಲೆ ಸಿಬಿಐ ಅಧಿಕಾರಿಗಳು ಗುರುವಾರ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಬೆಂಗಳೂರು ನಗರ, ಕನಕಪುರ , ರಾಮನಗರ , ನೆಲಮಂಗಲದಲ್ಲಿ ದಾಳಿ ನಡೆದಿರುವ ಬಗ್ಗೆ ವರದಿಯಾಗಿದೆ.
ಕನಕಪುರ ತಾಲೂಕು ಕಚೇರಿಯ ಮೇಲೂ ದಾಳಿ ನಡೆಸಿದ್ದು, ಚುನಾವಣಾ ವಿಭಾಗದಲ್ಲಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿರುವ ಬಗ್ಗೆ ವರದಿಯಾಗಿದೆ.
ನೆಲಮಂಗಲದ ಟಿ.ಬೇಗೂರಿನಲ್ಲಿರುವ ಡಿ.ಕೆ.ಶಿವಕುಮಾರ್ ಅವರ ಆಪ್ತ ಪದ್ಮನಾಭಯ್ಯ ಅವರ ನಿವಾಸದ ಮೇಲೆ ದಾಳಿ ನಡೆಸಿರುವ ಬಗ್ಗೆ ವರದಿಯಾಗಿದ್ದು, ದಾಳಿ ವೇಳೆ ಮನೆಯಲ್ಲಿ ಪದ್ಮನಾಭಯ್ಯ ಅವರ ತಂದೆ ಮಾತ್ರ ಇದ್ದರು ಎಂದು ತಿಳಿದುಬಂದಿದೆ.
ಬುಧವಾರ ಸಿಬಿಐ 11 ಮಂದಿಯ ವಿರುದ್ಧ ಕೋರ್ಟ್‌ನಲ್ಲಿ ಸರ್ಚ್ ವಾರೆಂಟ್ ಪಡೆದಿರುವ ಬಗ್ಗೆ ವರದಿಯಾಗಿದೆ.
ನೋಟು ಅಪನಗದೀಕರಣದ ವೇಳೆ ಲಕ್ಷಾಂತರ ರೂಪಾಯಿ ಹಣವನ್ನು ಬದಲಾವಣೆಯನ್ನು ಅಕ್ರಮವಾಗಿ ಮಾಡಿಕೊಂಡಿರುವ ಆರೋಪದಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದೆ.
ಗುರುವಾರ ಬೆಳ್ಳಂಬೆಳಗ್ಗೆ ಡಿ.ಕೆ.ಶಿವಕುಮಾರ್ ಅವರು ಸಹೋದರ ಸುರೇಶ್ ಜೊತೆ ತುರ್ತು ಸುದ್ದಿಗೋಷ್ಠಿ ನಡೆಸಿ ದಾಳಿ ನಡೆಯುವ ಬಗ್ಗೆ ನಮಗೆ ಮಾಹಿತಿ ದೊರಕಿದೆ, ಇದಕ್ಕೆ ನಾವು ಜಗ್ಗುವುದಿಲ್ಲ ಎಂದು ಹೇಳಿಕೆ ನೀಡಿದ್ದರು.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ
Oscars 2025: ಹೀನಾಯವಾಗಿ ಸೋತರೂ ʼಆಸ್ಕರ್ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ
Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್ ಸೇವೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.