2 ತಂಡಗಳ ಮಾಲೀಕರಿಗೆ ಸಿಸಿಬಿ ನೋಟಿಸ್
Team Udayavani, Sep 23, 2019, 3:00 AM IST
ಬೆಂಗಳೂರು: ಕರ್ನಾಟಕ ಪ್ರೀಮಿಯರ್ ಲೀಗ್(ಕೆಪಿಎಲ್) ಪಂದ್ಯಾವಳಿಗಳಲ್ಲಿ ಮ್ಯಾಚ್ ಫಿಕ್ಸಿಂಗ್ ನಡೆದಿರುವ ಆರೋಪದ ತನಿಖೆಯನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಚುರುಕುಗೊಳಿಸಿದೆ. ಪ್ರಕರಣದ ವಿಚಾರಣೆ ಸಲುವಾಗಿ ಹುಬ್ಬಳ್ಳಿ ಟೈಗರ್ಸ್ ಹಾಗೂ ಬಳ್ಳಾರಿ ಟಸ್ಕರ್ಸ್ ತಂಡದ ಮಾಲೀಕರಿಗೆ ನೋಟಿಸ್ ಜಾರಿಗೊಳಿಸಿದೆ. ಮ್ಯಾಚ್ ಫಿಕ್ಸಿಂಗ್, ಬೆಟ್ಟಿಂಗ್ ಆರೋಪ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಹುಬ್ಬಳ್ಳಿ ಟೈಗರ್ಸ್, ಬಳ್ಳಾರಿ ಟಸ್ಕರ್ಸ್ ತಂಡದ ಮಾಲೀಕರಿಗೆ ನೋಟಿಸ್ ನೀಡಲಾಗಿದ್ದು, ಸೋಮವಾರ ವಿಚಾರಣೆಗೆ ಹಾಜರಾಗಲಿದ್ದಾರೆ.
ಅಷ್ಟೇ ಅಲ್ಲದೆ ಕೆಲವು ಆಟಗಾರರನ್ನು ಕೂಡ ವಿಚಾರಣೆ ನಡೆಸಲಾಗುತ್ತದೆ ಎಂದು ಉನ್ನತ ಮೂಲಗಳು ಹೇಳಿವೆ. ಬೆಳಗಾವಿ ಪ್ಯಾಂಥರ್ಸ್ ಮಾಲೀಕ ಅಲಿ ಅಶ್ಫಾಕ್ ತಹ್ರಾ ಹಾಗೂ ಇತರೆ ತಂಡದ ಮಾಲೀಕರು ಹಾಗೂ ಆಟಗಾರರ ಜತೆ ಸಂಪರ್ಕ ಹೊಂದಿದ್ದರೆಂಬ ಮಾಹಿತಿ ತನಿಖೆಯಲ್ಲಿ ಲಭ್ಯವಾಗಿದೆ. ಅನುಮಾನವಿರುವ ಕೆಲವು ಆಟಗಾರರು ಹಾಗೂ ತಂಡಗಳ ಮಾಲೀಕರನ್ನು ವಿಚಾರಣೆಗೆ ಕರೆಯಿಸಿ, ಸ್ಪಷ್ಟೀಕರಣ ಪಡೆಯಬೇಕಿದೆ. ಹೀಗಾಗಿ, ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಮೂಲಗಳು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.