![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 2, 2021, 6:26 AM IST
ಬೆಂಗಳೂರು: ಸಿ.ಡಿ. ಪ್ರಕರಣದ ತನಿಖೆ ಚುರುಕುಗೊಳಿಸಿರುವ ವಿಶೇಷ ತನಿಖಾ ತಂಡ ಯುವತಿಯನ್ನು ಕರೆದೊಯ್ದು ಸ್ಥಳ ಮಹಜರು ಮಾಡಿದೆ. ಜತೆಗೆ ಒಂದೆರಡು ದಿನಗಳಲ್ಲಿ ವಿಚಾರಣೆಗೆ ಹಾಜರಾಗಲು ರಮೇಶ್ ಜಾರಕಿಹೊಳಿಗೆ ಎಸ್‌ಐಟಿ ನೋಟಿಸ್ ನೀಡಲಿದೆ ಎಂದು ತಿಳಿದು ಬಂದಿದೆ.
ಗುರುವಾರ ಬೆಳಗ್ಗೆ ತಮ್ಮ ಪರ ವಕೀಲರ ಜತೆ ಆಗಮಿಸಿದ ಸಂತ್ರಸ್ತೆಯನ್ನು ತನಿಖಾಧಿಕಾರಿ ಕವಿತಾ ನೇತೃತ್ವದ ತಂಡ ಹಾಗೂ ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಆರ್.ಟಿ.ನಗರದ ಗಂಗಾನಗರದಲ್ಲಿರುವ ಪಿ.ಜಿ.ಗೆ ಕರೆದೊಯ್ದು 11 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ತಪಾಸಣೆ ನಡೆಸಿದರು.
ತಾನು 2 ವರ್ಷಗಳಿಂದ ಪಿಜಿಯಲ್ಲಿದ್ದೆ. ನಗರದ ಸಾಫ್ಟ್ವೇರ್ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದು, 45 ಸಾ. ರೂ. ಸಂಬಳ ಬರುತ್ತಿತ್ತು. ಇದರೊಂದಿಗೆ ಎನ್‌ಜಿಒ ಸಂಸ್ಥೆಯೊಂದರ ಪ್ರಾಜೆಕ್ಟ್‌ನಲ್ಲಿ ಕೆಲಸ ಮಾಡುತ್ತಿದ್ದೆ. ಈ ವೇಳೆಯೇ ರಮೇಶ್ ಜಾರಕಿಹೊಳಿ ಪರಿಚಯವಾಗಿದೆ. ನಾನು ಪಿಜಿಯ ಕೊಠಡಿಯಲ್ಲೇ ಕುಳಿತು ಅವರೊಂದಿಗೆ ವೀಡಿಯೋ ಕರೆಯಲ್ಲಿ ಮಾತನಾಡಿದ್ದೆ ಎಂದು ಯುವತಿ ಹೇಳಿದ್ದಾಳೆ ಎನ್ನಲಾಗಿದೆ.
ಮಂತ್ರಿ ಅಪಾರ್ಟ್ಮೆಂಟ್ನಲ್ಲಿ
ಮಲ್ಲೇಶ್ವರದಲ್ಲಿರುವ ಮಂತ್ರಿ ಅಪಾರ್ಟ್‌ಮೆಂಟ್‌ನ 7ನೇ ಮಹಡಿಯಲ್ಲಿರುವ ರಮೇಶ್ ಜಾರಕಿಹೊಳಿಗೆ ಸೇರಿದ 107ನೇ ಫ್ಲ್ಯಾಟ್‌ನಲ್ಲಿ ತಡರಾತ್ರಿವರೆಗೂ ಯುವತಿಯೊಂದಿಗೆ ಅಧಿಕಾರಿಗಳು ಮಹಜರು ನಡೆಸಿದರು.
ಹೆತ್ತವರ ಭೇಟಿಗಾಗಿ ಕಣ್ಣೀರು! :
ಸ್ಥಳ ಮಹಜರು ಸಂದರ್ಭದಲ್ಲಿ ಯುವತಿ ವಿಚಾರಣೆಗೆ ವಿಚಲಿತಗೊಂಡು, ತನ್ನ ಪೋಷಕರ ಭೇಟಿಗೆ ಪಟ್ಟು ಹಿಡಿದಿದ್ದರು ಎನ್ನಲಾಗಿದೆ. ಈ ವೇಳೆ ಪೋಷಕರ ಭೇಟಿಗೆ ಅವಕಾಶ ನೀಡಿದರೆ ತನಿಖಾ ಸಂಸ್ಥೆ ಮೇಲೆ ಅನುಮಾನ ಬರುತ್ತದೆ ಎಂದು ತನಿಖಾಧಿಕಾರಿಗಳು ಹೇಳಿದರು. ಆದರೂ ಪಟ್ಟು ಬಿಡದ ಯುವತಿ ಭೇಟಿಗೆ ಮನವಿ ಮಾಡಿ ಕಣ್ಣೀರು ಹಾಕಿದರು. ತಮ್ಮ ಪರ ವಕೀಲರ ಮೂಲಕ ಪತ್ರ ಕಳುಹಿಸಿದರೆ ಅವಕಾಶ ನೀಡುವುದಾಗಿ ಅಧಿಕಾರಿಗಳು ಹೇಳಿದ್ದಾರೆಂದು ತಿಳಿದು ಬಂದಿದೆ.
ಯುವತಿ ಕೊಠಡಿ ಮೊದಲೇ ಸೀಲ್ :
ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಯುವತಿ ವಾಸವಾಗಿದ್ದ ಪಿ.ಜಿ. ಕೊಠಡಿ ಮೇಲೆ ದಾಳಿ ನಡೆಸಿದ್ದ ಎಸ್‌ಐಟಿ ಅಧಿಕಾರಿಗಳು, 9 ಲ.ರೂ. ಹಾಗೂ ಕೆಲವು ವಸ್ತುಗಳನ್ನು ವಶಕ್ಕೆ ಪಡೆದು ಕೊಠಡಿಯನ್ನು ಸೀಲ್ ಮಾಡಲಾಗಿತ್ತು.
ಇಬ್ಬರು ಎಸ್ಪಿಪಿ : ಸಿ.ಡಿ. ಪ್ರಕರಣದಲ್ಲಿ ಎಸ್‌ಐಟಿ ಪರ ವಾದ ಮಂಡನೆಗೆ ಹೈಕೋರ್ಟ್ ವಕೀಲ ಎಸ್. ಕಿರಣ ಜವಳಿ ಮತ್ತು ಸಿಬಿಐ ಪರ ರಾಜ್ಯದ ವಕೀಲ ಪಿ. ಪ್ರಸನ್ನಕುಮಾರ್ ಅವರನ್ನು ವಿಶೇಷ ಅಭಿಯೋಜಕರನ್ನಾಗಿ ನೇಮಿಸಲಾಗಿದೆ.
ಜಗದೀಶ್ ರಾಜ್ಯದ ಬಾರ್ ಕೌನ್ಸಿಲ್ನಲ್ಲಿ ನೋಂದಾಯಿಸಿಕೊಂಡಿಲ್ಲ :
ಬೆಂಗಳೂರು: ಯುವತಿ ಪರ ವಕಾಲತ್ತು ವಹಿಸಿರುವ ಕೆ.ಎನ್ ಜಗದೀಶ್ ಕುಮಾರ್ ಹೊಸ ವಿವಾದಕ್ಕೆ ಸಿಲುಕಿದ್ದು, ಅವರು ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನಲ್ಲಿ (ಬಾರ್ ಕೌನ್ಸಿಲ್) ನೋಂದಾಯಿಸಿಕೊಂಡಿಲ್ಲ ಎನ್ನಲಾಗಿದೆ. ಜತೆಗೆ ಈ ಹೆಸರಿನಲ್ಲಿ ಯಾವುದೇ ವಕೀಲಿಕೆ ಸನ್ನದು ವರ್ಗಾವಣೆ ಕೋರಿ ಮನವಿ ಬಂದಿಲ್ಲ ಎಂದು ರಾಜ್ಯ ವಕೀಲರ ಪರಿಷತ್ತು ತಿಳಿಸಿದೆ.
ಒಂದು ವೇಳೆ ಜಗದೀಶ್ ಬೇರೆ ಯಾವುದೇ ರಾಜ್ಯ ವಕೀಲರ ಪರಿಷ ತ್ತಿನಲ್ಲಿ ನೋಂದಾಯಿಸಿಕೊಂಡಿದ್ದರೆ, ಅವರು ಭಾರತೀಯ ವಕೀಲರ ಪರಿಷತ್ತಿನ ನಿಯಮಗಳ ಪ್ರಕಾರ 6 ತಿಂಗಳ ಬಳಿಕ ರಾಜ್ಯದಲ್ಲಿ ವಕೀಲಿಕೆ ಮುಂದುವರಿಸುವಂತಿಲ್ಲ ಎಂದು ರಾಜ್ಯ ವಕೀಲರ ಪರಿಷತ್ತು ಸ್ಪಷ್ಟನೆ ನೀಡಿದೆ.
ವಕೀಲ ಕೆ.ಎನ್ ಜಗದೀಶ್ ರಾಜ್ಯ ವಕೀಲರ ಪರಿಷತ್ತಿನಲ್ಲಿ ನೋಂದಾಯಿಸಿಕೊಂಡಿರುವ ಕುರಿತು ಮಾಹಿತಿ ನೀಡುವಂತೆ ರಾಜ್ಯ ವಕೀಲರ ಪರಿಷತ್ತಿನ ಹಿರಿಯ ಸದಸ್ಯರಾದ ಎಸ್. ಬಸವರಾಜು ಮನವಿ ಸಲ್ಲಿಸಿದ್ದರು. ಅದಕ್ಕೆ ಮಾಹಿತಿ ನೀಡಿರುವ ಪರಿಷತ್ತು ಕೆ.ಎನ್ ಜಗದೀಶ್ ಕುಮಾರ್ ರಾಜ್ಯದ ಬಾರ್ ಕೌನ್ಸಿಲ್‌ನಲ್ಲಿ ನೋಂದಣಿ ಮಾಡಿಸಿಕೊಂಡಿಲ್ಲ ಎಂದು ಮಾಹಿತಿ ನೀಡಿದೆ.
ಜಗದೀಶ್ ಸ್ಪಷ್ಟನೆ :
ಕರ್ನಾಟಕ ಬಾರ್ ಕೌನ್ಸಿಲ್‌ನಲ್ಲಿ ನೋಂದಣಿ ವಿಚಾರ ಸಂಬಂಧಿಸಿ ಕೆ.ಎನ್.ಜಗದೀಶ್ ಸ್ಪಷ್ಟನೆ ನೀಡಿದ್ದು, ಯುವತಿ ಪರ ವಕಾಲತ್ತು ಹಾಕಲು ನಾವು ಯೋಗ್ಯರಿದ್ದೇವೆ. ಆಲ್ ಇಂಡಿಯಾ ಬಾರ್ ಪರೀಕ್ಷೆ ಪಾಸ್ ಮಾಡಿದ್ದೇನೆ.ಯಾರಾದರೂ ತೋಳಿನಲ್ಲಿ ತಾಕತ್ತು ಇದ್ದರೆ ದೂರು ನೀಡಬಹುದು ಮಕ್ಕಳೇ. ಅವರಿಗೆ ಮುಂದಿನ ದಿನಗಳಲ್ಲಿ ಉತ್ತರಿಸುತ್ತೇನೆ ಎಂದರು. ಕರ್ನಾಟಕ ಕಾನೂನು ವಿಶ್ವವಿದ್ಯಾನಿಲಯದಿಂದ ಎಲ್‌ಎಲ್‌ಬಿ ಪದವಿ ಪಡೆದುಕೊಂಡಿದ್ದೇನೆ. ದಿಲ್ಲಿ ಬಾರ್ ಕೌನ್ಸಿಲ್‌ನಲ್ಲಿ ನೋಂದಣಿಯಾಗಿದೆ ಎಂದು ಸ್ಪಷ್ಟಪಡಿಸಿದರು.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.