ರಾಜತಾಂತ್ರಿಕತೆ, ವಿದೇಶಾಂಗ ವ್ಯವಹಾರಗಳಲ್ಲಿ ಕೇಂದ್ರ ಸಂಪೂರ್ಣ ವಿಫಲ : ಯು.ಟಿ. ಖಾದರ್
Team Udayavani, Mar 2, 2022, 10:30 PM IST
ಬೆಂಗಳೂರು: ಕೇಂದ್ರ ಸರಕಾರದ ನಿರ್ಲಕ್ಷ್ಯ ಹಾಗೂ ವೈಫಲ್ಯವೇ ಉಕ್ರೇನ್‌ನಲ್ಲಿ ನವೀನ್ ಸಾವಿಗೆ ಪ್ರಮುಖ ಕಾರಣ ಎಂದು ವಿಧಾನಸಭೆಯ ವಿಪಕ್ಷ ಉಪ ನಾಯಕ ಯು.ಟಿ. ಖಾದರ್ ಹೇಳಿದರು.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜತಾಂತ್ರಿಕತೆ ಹಾಗೂ ವಿದೇಶಾಂಗ ವ್ಯವಹಾರಗಳಲ್ಲಿ ಕೇಂದ್ರ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದರು. ಉಕ್ರೇನ್‌ನಲ್ಲಿ ನಮ್ಮ ರಾಜ್ಯದಿಂದ ಬಹಳ ವಿದ್ಯಾರ್ಥಿಗಳಿದ್ದರೂ ರಾಜ್ಯ ಸರಕಾರ ಕೇಂದ್ರ ಸರಕಾರದ ಮೇಲೆ ಒತ್ತಡ ಹಾಕಿ ಕನ್ನಡಿಗರನ್ನು ಕರೆ ತರುವಲ್ಲಿ ವಿಫಲವಾಗಿದೆ. ಕೇಂದ್ರ ಸರಕಾರ ಕೇವಲ ಪ್ರಚಾರ ವಿಚಾರದಲ್ಲಿ ಗಮನಹರಿಸುತ್ತಿದೆಯೇ ಹೊರತು, ಮಾಡಬೇಕಿರುವ ಕೆಲಸದ ಬಗ್ಗೆ ಯೋಚಿಸುತ್ತಿಲ್ಲ ಎಂದು ಹೇಳಿದರು.
ಈ ಯುದ್ಧ ಕುವೈತ್ ಮೇಲೆ ಆದ ರಾತ್ರೋರಾತ್ರಿ ಆದ ಯುದ್ಧವಲ್ಲ. ಕುವೈತ್ ಮೇಲೆ ಏಕಾಏಕಿ ದಾಳಿ ಆದಾಗಲೂ ಭಾರತೀಯರನ್ನು ಸುರಕ್ಷಿತವಾಗಿ ವಾಪಸ್ ಕರೆತರಲಾಗಿತ್ತು. ನಾಗರಿಕ ದಂಗೆ ಎದ್ದಾಗ ರಕ್ಷಣೆ ಕಷ್ಟ. ಲಿಬಿಯಾದಲ್ಲಿ ನಾಗರಿಕ ದಂಗೆ ಎದ್ದಾಗಲೂ ಮನಮೋಹನ್ ಸಿಂಗ್ ಅವರ ಸರಕಾರ ಭಾರತೀಯರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದರು. ಆಗ ಯಾವುದೇ ಪ್ರಚಾರ ಮಾಡಲಿಲ್ಲ. ಈಗ ಪ್ರಯಾಣಿಕರ ವಿಮಾನಕ್ಕೆ ರಕ್ಷಣೆಯಾಗಿ ಜೆಟ್ ವಿಮಾನಗಳನ್ನು ಕಳುಹಿಸುವ ಸೌಕರ್ಯಗಳಿದ್ದರೂ ಕೇಂದ್ರ ಸರಕಾರ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ. ಈ ಯುದ್ಧ ನಡೆಯಲಿದೆ ಎಂದು ಒಂದು ತಿಂಗಳ ಮುಂಚಿಯೇ ಗೊತ್ತಾಗಿದೆ. ಮಾಧ್ಯಮಗಳು ಕೂಡ ಯುದ್ಧ ನಡೆಯುವ ಮುನ್ಸೂಚನೆ ಬಗ್ಗೆ ವರದಿ ಮಾಡುತ್ತಲೇ ಇದ್ದವು. ಆದರೆ ಸರಕಾರ ಏನು ಮಾಡುತ್ತಿತ್ತು ಎಂದು ಪ್ರಶ್ನಿಸಿದರು.
ಸರಕಾರದ ಬಳಿ ಮಾಹಿತಿ ಇಲ್ಲ
ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ಉಕ್ರೇನ್‌ನಲ್ಲಿ ಇದುವರೆಗೂ 406 ಕನ್ನಡಿಗರು ನೋಂದಣಿ ಮಾಡಿದ್ದರೆ, ಅದರಲ್ಲಿ 125 ಜನ ಬೆಂಗಳೂರಿಗರು. ನೋಂದಣಿ ಮಾಡದೇ ಇರುವ ಸಾವಿರಾರು ಜನ ಅಲ್ಲಿ ಇದ್ದಾರೆ. ವಿದ್ಯಾವಂತ ಯುವಕರಿಗೆ ರಾಜ್ಯ ಸರಕಾರ ಈ ಮಾಹಿತಿ ತಿಳಿದಿಲ್ಲ ಎಂದರೆ ಇವರು ಎಷ್ಟರ ಮಟ್ಟಿಗೆ ಕಾರ್ಯಪ್ರವೃತ್ತರಾಗಿದ್ದಾರೆ ಎಂಬುದು ತಿಳಿಯುತ್ತದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.