ಆಯುಷ್ಮಾನ್ – ಆರೋಗ್ಯ ಕರ್ನಾಟಕ ಯೋಜನೆಗೆ ಕೇಂದ್ರ ಹೆಚ್ಚಿನ ನೆರವು ನೀಡಲಿ: ದಿನೇಶ್ ಗುಂಡೂರಾವ್
Team Udayavani, Jul 15, 2023, 7:30 PM IST
ಬೆಂಗಳೂರು: ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಆರೋಗ್ಯ ವಿಮೆ ಯೋಜನೆಗೆ ಕೇಂದ್ರ ಸರ್ಕಾರ ಶೇ 60 ರಷ್ಟು ಅನುದಾನ ನೀಡಬೇಕು ಎಂದು ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಕೇಂದ್ರ ಆರೋಗ್ಯ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ.
ಡೆಹ್ರಾಡೂನ್ ಸ್ವಾಸ್ಥ್ಯ ಚಿಂತನ ಶಿಬಿರದಲ್ಲಿ ಪಾಲ್ಗೊಂಡಿರುವ ಸಚಿವರು, ಆಯುಷ್ಮಾನ್ ಭಾರತ್ ಯೋಜನೆಗೆ ಕೇಂದ್ರದಿಂದ ಹೆಚ್ಚಿನ ನೆರವಿನ ಅಗತ್ಯತೆಯ ಕುರಿತು ಕೇಂದ್ರ ಆರೋಗ್ಯ ಸಚಿವರ ಗಮನ ಸೆಳೆದರು.
ABPMJAY ಸ್ಕೀಮ್ ನಲ್ಲಿ ಕರ್ನಾಟಕವು ಉತ್ತಮ ಪ್ರಗತಿಯನ್ನು ಸಾಧಿಸುತ್ತಿದೆ. ಅದರೂ ಆಯುಷ್ಮಾನ್ ಯೋಜನೆಯಡಿ ಆರೋಗ್ಯ ಕರ್ನಾಟಕ ಫಲಾನುಭವಿಗಳಿಗೆ ಕೇಂದ್ರ ಸರ್ಕಾರದಿಂದ ನಿರೀಕ್ಷಿತ ಹಣಕಾಸಿನ ನೆರವು ದೊರೆಯುತ್ತಿಲ್ಲ ಎಂದು ಸಚಿವ ಗುಂಡೂರಾವ್ ಅವರು ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಅವರಿಗೆ ವಿವರಿಸಿದರು.
ಪ್ರಸ್ತುತ ರಾಜ್ಯ ಸರ್ಕಾರ ಶೇ 64 ರಷ್ಟು ಹಣಕಾಸಿನ ನೆರವು ನೀಡುತ್ತಿದ್ದು, ಕೇಂದ್ರ ಸರ್ಕಾರ ಶೇ 36 ರಷ್ಟು ಮಾತ್ರ ಅನುದಾನ ಒದಗಿಸುತ್ತಿದೆ. ಶೇ 64 ರಷ್ಟು ಹಣಕಾಸನ್ನು ರಾಜ್ಯ ಸರ್ಕಾರವೇ ಭರಿಸುತ್ತಿದೆ ಎಂದರು.
ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಗೆ ಕೇಂದ್ರ ಸರ್ಕಾರ ಶೇ 60 ರಷ್ಟು ಹಣಕಾಸಿನ ನೆರವು ನೀಡದರೆ ಪರಿಣಾಮಕಾರಿಯಾಗಿ ಹೆಚ್ಚಿನ ಜನರಿಗೆ ಯೋಜನೆಯನ್ನ ತಲುಪಿಸಬಹುದು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಶೇ 60 ರಾಜ್ಯ ಸರ್ಕಾರ ಶೇ 40 ಪಾಲುದಾರಿಕೆಯಲ್ಲಿ ಕಾರ್ಯನಿರ್ವಹಿಸುವ ಅಗತ್ಯವಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.
ಸಾರ್ವಜನಿಕರ ಆರೋಗ್ಯ ಭದ್ರತೆ ದೃಷ್ಟಿಕೋನದಲ್ಲಿ ಆರಂಭ ಆಗಿರುವ ಆಯುಷ್ಮಾನ್ ಭಾರತ್ ಮಹತ್ವದ ಯೋಜನೆಗೆ ಈ ಬಗ್ಗೆ ಶೀಘ್ರ ನಿರ್ಣಯ ಕೈಗೊಳ್ಳುವಂತೆ ಸಚಿವರು ಮನವಿ ಮಾಡಿದರು. ಸ್ವಾಸ್ಥ್ಯ ಚಿಂತನ ಶಿಬಿರದ ಎರಡನೇ ದಿನವಾದ ಇಂದು ಆಯುಷ್ಮಾನ್ ಭವ ವಿಚಾರ ಸಂಕಿರಣದಲ್ಲಿ ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೋ ಚೇರ್ಮೆನ್ ಆಗಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.