ರಿಯಲ್‌ ಎಸ್ಟೇಟ್‌ ಕಾಯ್ದೆಗೆ ಕೇಂದ್ರ ಸಮರ್ಥನೆ


Team Udayavani, May 3, 2017, 10:18 AM IST

naidu.jpg

ಬೆಂಗಳೂರು: ರಿಯಲ್‌ ಎಸ್ಟೇಟ್‌ (ನಿಯಂತ್ರಣ ಮತ್ತು ಅಭಿವೃದ್ಧಿ) ಕಾಯ್ದೆಯನ್ನು ಬಲವಾಗಿ ಸಮರ್ಥಿಸಿಕೊಂಡಿರುವ ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯನಾಯ್ಡು, ನಿವೇಶನ, ಫ್ಲ್ಯಾಟ್‌ ಮಾರಾಟ ಹೆಸರಿನಲ್ಲಿ ಸಾರ್ವಜನಿಕರಿಗೆ ವಂಚನೆ ಮಾಡುವ ಕಂಪನಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಹದಿನಾಲ್ಕು ರಾಜ್ಯಗಳು ರಿಯಲ್‌ ಎಸ್ಟೇಟ್‌ ಕಾಯ್ದೆ ಸಂಬಂಧ ಸ್ಥಳೀಯವಾಗಿ ನಿಯಮಾವಳಿ ರೂಪಿಸಿವೆ ಎಂದು ಪರೋಕ್ಷವಾಗಿ ಕರ್ನಾಟಕದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಕರ್ನಾಟಕ ಸರ್ಕಾರ ಹದಿನೈದು ದಿನಗಳಲ್ಲಿ ಕಾಯ್ದೆ ಸಂಬಂಧ ನಿಯಮಾವಳಿ ರೂಪಿಸುವುದಾಗಿ ತಿಳಿಸಿದೆ. ನನಗೆ ಆ ಭರವಸೆ ಇದೆ ಎಂದು ಹೇಳಿದ ಅವರು, ದಯವಿಟ್ಟು ಕೇಂದ್ರದ ಕಾಯ್ದೆ ಉದ್ದೇಶ ಅರ್ಥ ಮಾಡಿಕೊಳ್ಳಿ ಎಂದು ಹೇಳಿದರು.

ರಿಯಲ್‌ ಎಸ್ಟೇಟ್‌ ಹಾಗೂ ಬಿಲ್ಡರ್ಗಳು ಬಣ್ಣ ಬಣ್ಣದ ಜಾಹೀರಾತು ನೀಡುತ್ತಾರೆ. ನಾವು ಅವರನ್ನು ದೂಷಣೆ
ಮಾಡುವುದಿಲ್ಲ. ಆದರೆ, ಸಾರ್ವಜನಿಕರಿಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳಿ ಎಂಬುದಷ್ಟೇ ನಮ್ಮ ಆಶಯ ಎಂದು
ತಿಳಿಸಿದರು. ನಿವೇಶನ ಅಥವಾ ಫ್ಲ್ಯಾಟ್‌ ವಿಚಾರದಲ್ಲಿ ಅಳತೆ, ಗುಣಮಟ್ಟದ ಕಾಮಗಾರಿ ಹಾಗೂ ಕಚ್ಚಾ ಸಾಮಗ್ರಿಗಳ
ಬಳಕೆ, ಮೂಲಸೌಕರ್ಯ ಒದಗಿಸುವಿಕೆ, ಸೆಟ್‌ ಬ್ಯಾಕ್‌ ಬಿಟ್ಟು ಪರಿಸರ ಸಂರಕ್ಷಣೆ ಕ್ರಮ ಇವೆಲ್ಲವನ್ನೂ ಚಾಚೂ ತಪ್ಪದೆ
ಪಾಲಿಸಬೇಕು. ಇದಕ್ಕಾಗಿಯೇ ಕಾಯ್ದೆ ತಂದಿದ್ದೇವೆ ಎಂದು ಹೇಳಿದರು.

ರಿಯಲ್‌ ಎಸ್ಟೇಟ್‌ ಕಂಪನಿಗಳು ಒಳ್ಳೆಯ ಹೆಸರು ಹೊಂದಿದ್ದರೆ ಅವರಿಗೆ ಬ್ಯಾಂಕ್‌ಗಳಿದ ಸಾಲ ಸಿಗಲಿದೆ. ನೋಟು
ಅಮಾನ್ಯ ನಂತರ ಏನೋ ಆಗಿ ಹೋಯಿತು ಎಂದು ಗುಲ್ಲೆಬ್ಬಿಸಲಾಯಿತು. ಆದರೆ, ದೇಶದಲ್ಲಿದ್ದ ಎಲ್ಲ ಹಣ ಬ್ಯಾಂಕಿಗೆ
ಜಮೆ ಆಗಿದೆ. ಹಾಗೂ ಅದರ ವಾರಸುದಾರರು ಪತ್ತೆಯಾಗಿದ್ದಾರೆ. ಹೀಗಾಗಿ, ಸಾಲ ಸಿಗುವುದಿಲ್ಲ, ಬ್ಯಾಂಕುಗಳಲ್ಲಿ ಹಣ
ಇಲ್ಲವೆಂಬ ಆತಂಕ ಬೇಡ ಎಂದು ತಿಳಿಸಿದರು. ಭೂ ಪರಿವರ್ತನೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ವೈಯಕ್ತಿಕ ಅಥವಾ ಅಭಿವೃದ್ಧಿ ಯೋಜನೆಗಳಿಗೆ ಭೂ ಪರಿವರ್ತನೆ ಆದಷ್ಟು ಶೀಘ್ರ ಆಗುವಂತೆ ಕ್ರಮ ಕೈಗೊಳ್ಳ ಬೇಕಿದೆ. ಈ ನಿಟ್ಟಿನಲ್ಲಿ ಕಂದಾಯ, ನಗರಾಭಿವೃದ್ಧಿ ಹಾಗೂ ಕಾನೂನು ಇಲಾಖೆಗಳು ಸಮನ್ವಯತೆಯಿಂದ ಏಕ ಗವಾಕ್ಷಿ ವ್ಯವಸ್ಥೆ ಜಾರಿಗೊಳಿಸಬೇಕು. 60 ದಿನಗಳಲ್ಲಿ ನಿರ್ಮಾಣಕ್ಕೆ ಅನುಮತಿ ಹಾಗೂ ಸಾಲ ಮರುಪಾವತಿ ಸಾಮರ್ಥ್ಯ, ಜಮೀನು ಒಡೆತನದ ಪತ್ರ ವಿಚಾರದಲ್ಲಿ ಹೆಚ್ಚು ಗಮನ ಹರಿಸಬೇಕು ಎಂದು ಹೇಳಿದರು.

ನೋ ಪಾಲಿಟಿಕ್ಸ್‌
ಸಭೆಯ ನಂತರ ರಾಜ್ಯ ಬಿಜೆಪಿ ಬೆಳವಣಿಗೆ ಕುರಿತು ಮಾಧ್ಯಮದವರು ಪ್ರಸ್ತಾಪಿಸುತ್ತಿದ್ದಂತೆ ಆಸನದಿಂದ ಮೇಲೆದ್ದ ವೆಂಕಯ್ಯನಾಯ್ಡು, ನೋ ಪಾಲಿಟಿಕ್ಸ್‌, ಓನ್ಲಿ ಡೆವಲಪ್‌ಮೆಂಟ್‌, ವಿ ಕಮ್‌ ಫಾರ್‌ ಡೆವಲಪ್‌ಮೆಂಟ್‌ ಎಂದು ಹೇಳಿದರು. ಮಾಧ್ಯಮದವರು ಪದೇಪದೆ ಯಡಿಯೂರಪ್ಪ- ಈಶ್ವರಪ್ಪ ನಡುವಿನ ಜಗಳ ಪ್ರಸ್ತಾಪಿಸಿದಾಗ ಏನೂ ಆಗುವುದಿಲ್ಲ, ಇಬ್ಬರೂ ಸೇರಿಯೇ ಚುನಾವಣೆ ಎದುರಿಸುತ್ತಾರೆ ಎಂದಷ್ಟೇ ಹೇಳಿ ನಿರ್ಗಮಿಸಿದರು.

ಪಾಕ್‌ ಸಮಸ್ಯೆ
ಪಾಕ್‌ ಸಮಸ್ಯೆ ಕುರಿತು ಮಾಧ್ಯಮದವರು ಪ್ರಶ್ನಿಸಿದಾಗ, ಆ ಬಗ್ಗೆ ಕೇಂದ್ರ ಸರ್ಕಾರ ಮತ್ತು ಅಲ್ಲಿನ ರಾಜ್ಯ ಸರ್ಕಾರ
ಜತೆಗೂಡಿ ಗಮನಹರಿಸಲಿದೆ. ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್‌-ಪಿಡಿಪಿ, ಕಾಂಗ್ರೆಸ್‌- ಎನ್‌ಸಿ ಮೈತ್ರಿ ಸರ್ಕಾರ
ಇದ್ದಾಗಲೂ ಸಮಸ್ಯೆ ಇತ್ತು. ಇದೀಗ ಬಿಜೆಪಿ-ಪಿಡಿಪಿ ಸರ್ಕಾರ ಇದೆ, ಈಗಲೂ ಸಮಸ್ಯೆಯಿದೆ. ಯಾವುದೇ ಸಮಸ್ಯೆ ಒಮ್ಮಿಂದೊಮ್ಮೆಲೇ ಬಗೆಹರಿಸಲಾಗದು ಎಂದು ವೆಂಕಯ್ಯನಾಯ್ಡು ಹೇಳಿದರು.

ಟಾಪ್ ನ್ಯೂಸ್

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Koppal-Bjp

Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-dam

ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ

1-ran

National Anthem Controversy:ಭಾಷಣ ಮಾಡದೆ ಹೋದ ತಮಿಳುನಾಡು ರಾಜ್ಯಪಾಲ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppal-Bjp

Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ

satish jarakiholi

60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

siddanna-2

HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Koppal-Bjp

Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ

1-shiv

ಪಟ್ನಾದಲ್ಲಿ ಸುಮಾರು 500 ವರ್ಷಗಳ ಹಿಂದಿನ ದೇಗುಲ ಪತ್ತೆ

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-devvvi

ಕಂದಹಾರ್‌ ಹೈಜಾಕ್‌ ವೇಳೆಯ ಪೈಲಟ್‌ ದೇವಿ ಶರಣ್‌ ನಿವೃತ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.