ಇಂದಿರಾ ಕ್ಯಾಂಟೀನ್, ಬಿಸಿಯೂಟಕ್ಕೆ ಸಿರಿಧಾನ್ಯ: ಅಂತಾರಾಷ್ಟ್ರೀಯ ಮೇಳದಲ್ಲಿ ಸಿಎಂ ಘೋಷಣೆ
ಕೆಣಕಿದ ಶಾಸಕ; ಗದರಿದ ಸಚಿವೆ..ರಾಮಮಂದಿರ ಉದ್ಘಾಟನೆಗೆ ಮುಖ್ಯಮಂತ್ರಿಗೆ ಆಹ್ವಾನ
Team Udayavani, Jan 6, 2024, 1:01 AM IST
ಬೆಂಗಳೂರು : ಸಮಾಜದ ಪ್ರತಿಯೊಬ್ಬ ರಿಗೂ ಪೌಷ್ಟಿಕ ಆಹಾರ ನೀಡುವ ಗುರಿ ರಾಜ್ಯ ಸರಕಾರಕ್ಕಿದೆ. ಆದ್ದರಿಂದ ಅಂಗನವಾಡಿ, ಶಾಲೆಗಳಲ್ಲಿ ನೀಡುವ ಮಧ್ಯಾಹ್ನದ ಬಿಸಿಯೂಟ, ಇಂದಿರಾ ಕ್ಯಾಂಟೀನ್, ಪಡಿತರ ವಿತರಣೆಯಲ್ಲಿ ಶೀಘ್ರ ಸಿರಿಧಾನ್ಯ ಆಹಾರವನ್ನು ಪರಿಚಯಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ಕೃಷಿ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಮೂರು ದಿನಗಳ ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳಕ್ಕೆ ಶುಕ್ರವಾರ ಚಾಲನೆ ನೀಡಿ ಅವರು ಮಾತನಾಡಿದರು.
ಹಲವು ಪೌಷ್ಟಿಕಾಂಶಗಳನ್ನು ಸಿರಿಧಾನ್ಯಗಳು ಹೊಂದಿವೆ. ರಾಜ್ಯದ ಜನ ಮತ್ತು ಶಾಲಾಮಕ್ಕಳಿಗೆ ಇದು ದೊರೆಯುವಂತಾಗಬೇಕು. ಈ ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟೀನ್ಗಳು, ನ್ಯಾಯಬೆಲೆ ಅಂಗಡಿಗಳ ಮೂಲಕ ವಿತರಿಸುವ ಪಡಿತರ, ಅಂಗನವಾಡಿ ಮತ್ತು ಶಾಲೆಗಳಲ್ಲಿ ವಿತರಿಸುವ ಮಧ್ಯಾಹ್ನದ ಬಿಸಿಯೂಟದಲ್ಲಿ ಸಿರಿಧಾನ್ಯಗಳನ್ನು ಪರಿಚಯಿಸಲಾಗುವುದು ಎಂದರು.
ಕೆಣಕಿದ ಶಾಸಕ; ಗದರಿದ ಸಚಿವೆ
ರಾಜ್ಯ ಸರಕಾರಕ್ಕೆ ಸಲಹೆಗಳನ್ನು ನೀಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು, “ಇಷ್ಟೆಲ್ಲ ಹೇಳುವ ನೀವು ಬರ ಪರಿಹಾರದ ಬಗ್ಗೆಯೂ ಸ್ವಲ್ಪ ಹೇಳಿ’ ಎಂದು ಶಾಸಕ ವಿನಯ ಕುಲಕರ್ಣಿ ಕೆಣಕಿದರು. ಇದಕ್ಕೆ ಪ್ರತಿಯಾಗಿ ಸಚಿವೆ, “ಇಲ್ಲಿ ರಾಜಕೀಯ ಮಾಡಲು ಬರಬೇಡಿ. ಹೋಗಿ ಕುಳಿತುಕೊಳ್ಳಿ’ ಎಂದು ಗದರಿದ ಪ್ರಸಂಗ ನಡೆಯಿತು.
ರಾಮಮಂದಿರ ಉದ್ಘಾಟನೆಗೆ ಮುಖ್ಯಮಂತ್ರಿಗೆ ಆಹ್ವಾನ
ಅಯೋಧ್ಯೆಯ ರಾಮಮಂದಿರ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಿತ ಎಲ್ಲ ಸಚಿವರಿಗೂ ಉತ್ತರ ಪ್ರದೇಶದ ಕೃಷಿ ಸಚಿವ ಸೂರ್ಯಪ್ರತಾಪ್ ಸಾಹಿ ಆಹ್ವಾನ ನೀಡಿದರು.
ನಗರದ ಅರಮನೆ ಮೈದಾನದಲ್ಲಿ ಕೃಷಿ ಇಲಾಖೆ ಸಹಯೋಗದಲ್ಲಿ ನಡೆದ ಸಿರಿಧಾನ್ಯ ಮೇಳ ಉದ್ಘಾಟನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸೂರ್ಯಪ್ರತಾಪ್ ಸಾಹಿ ಅವರು, ಜ. 22ರಂದು ರಾಮ ಮಂದಿರ ಉದ್ಘಾಟನೆ ಆಗಲಿದೆ. ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಹಿತ ಎಲ್ಲರೂ ಆಗಮಿಸುವ ಮೂಲಕ ಸಾಕ್ಷಿಯಾಗಬೇಕು ಎಂದು ಇದೇ ಸಂದರ್ಭದಲ್ಲಿ ಆಹ್ವಾನಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸ್ಮರಣಿಕೆ ನೀಡಿ ಶಾಲು ಹೊದೆಸಿ ಗೌರವಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.