ಸಂಗೀತ ವಿವಿಯಿಂದ ಸರ್ಟಿಫಿಕೇಟ್ ಕೋರ್ಸ್
Team Udayavani, Feb 15, 2019, 1:21 AM IST
ಮೈಸೂರು : ಮೈಸೂರಿನಲ್ಲಿರುವ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿವಿ ಕಾರ್ಯ ಚಟುವಟಿಕೆಯನ್ನು ರಾಜ್ಯವ್ಯಾಪಿ ವಿಸ್ತರಿಸಲು ಬೆಂಗಳೂರು, ದಕ್ಷಿಣ ಕನ್ನಡ(ಮಂಗಳೂರು), ಧಾರವಾಡ, ಕಲಬುರಗಿ, ಬೆಳಗಾವಿ ಜಿಲ್ಲೆಗಳಲ್ಲಿ ಅಧ್ಯಯನ ಕೇಂದ್ರಗಳನ್ನು ಸ್ಥಾಪಿಸಿ, ವಿವಿಧ ವಿಷಯಗಳಲ್ಲಿ 6 ತಿಂಗಳ ಸರ್ಟಿಫಿಕೇಟ್ ಕೋರ್ಸ್ ಆರಂಭಿಸಲು ಉದ್ದೇಶಿಸಲಾಗಿದೆ ಎಂದು ವಿವಿ ಪ್ರಭಾರ ಕುಲಪತಿ ಪ್ರೊ.ನಾಗೇಶ್ ವಿ.ಬೆಟ್ಟಕೋಟೆ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ಮೈಸೂರು, ಮಂಡ್ಯ ನಗರಗಳಲ್ಲಿ ನಡೆಯುತ್ತಿರುವ ಭಕ್ತಿ ಸಂಗೀತ, ಸುಗಮ ಸಂಗೀತ, ಜಾನಪದ ಸಂಗೀತ, ಹಾರ್ಮೋನಿಯಂ, ತಬಲ, ಯಕ್ಷಗಾನ, ಗಮಕ, ಯೋಗ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಸೇರಿದಂತೆ ವಿವಿಧ ವಿಷಯಗಳ ಸರ್ಟಿಫಿಕೇಟ್ ಕೋರ್ಸ್‌ಗಳನ್ನು ರಾಜ್ಯವ್ಯಾಪಿ ಆರಂಭಿಸಲು ವಿಶ್ವವಿದ್ಯಾಲಯದ ಪ್ರಶಾಸನ ಸಭೆ ಅನುಮೋದನೆ ಪಡೆಯಲಾಗಿದ್ದು, ಆರು ತಿಂಗಳ ಈ ಕೋಸ್ìಗಳಿಗೆ ವಾರದಲ್ಲಿ ಮೂರು ದಿನ ತರಗತಿಗಳು ನಡೆಯಲಿವೆ ಎಂದರು.
ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಈ ಕೋರ್ಸ್ ಮಾಡಲು ಅರ್ಹರು. ಒಬ್ಬರು ಎರಡು ವಿಷಯದಲ್ಲಿ ಪ್ರವೇಶಾತಿ ಪಡೆಯಬಹು ದಾಗಿದೆ. ಫೆ. 18ರಿಂದ ಅರ್ಜಿ ಪಡೆದು ಮಾ. 20 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದರು.
ಕೆಲ ತೊಡಕುಗಳಿಂದ ಡಿ.ಲಿಟ್ ಪದವಿಯನ್ನು ನಿಲ್ಲಿಸಲಾಗಿತ್ತು. ಈಗ ಪುನಾರಂಭಿಸಲು ವಿಶ್ವವಿದ್ಯಾಲಯಗಳ ಕುಲಾಧಿಪತಿಗಳಾದ ರಾಜ್ಯಪಾಲರ ಒಪ್ಪಿಗೆ ದೊರೆತಿದೆ ಎಂದರು. ಮಾಹಿತಿಗೆ ದೂ.0821-2419443, 2402141,ವೆಬ್‌ಸೈಟ್: www.musicuniversity ಸಂಪರ್ಕಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ
Dinesh Gundu Rao; ಬಾಣಂತಿಯರ ಸಾ*ವು ಪ್ರಕರಣ ನ್ಯಾಯಾಂಗ ತನಿಖೆಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ
Electricity theft: ಎಸ್ಪಿ, ಸಂಸದನ ವಿರುದ್ಧ ದೂರು ದಾಖಲು
Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.