ಸಿಇಟಿ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕಟ
Team Udayavani, Jul 17, 2017, 3:50 AM IST
ಬೆಂಗಳೂರು: ಎಂಜಿನಿಯರಿಂಗ್ ಕೋರ್ಸ್ಗಳ ಸರ್ಕಾರಿ ಕೋಟದ ಸೀಟಿಗೆ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)-2017ನೇ ಸಾಲಿನ ಎರಡನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ನಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ತಮಗೆ ಹಂಚಿಕೆಯಾಗಿರುವ ಸೀಟು ವಿವರವನ್ನು
ಪ್ರಾಧಿಕಾರದ ವೆಬ್ ಸೈಟ್ ಜಠಿಠಿಟ://http://kea.kar.nic.in ಮೂಲಕ ಪಡೆಯಬಹುದು.
ಸೀಟು ಹಂಚಿಕೆ ಫಲಿತಾಂಶದ ಜತೆಗೆ ಕಟ್ ಆಫ್ ರ್ಯಾಂಕ್ ಕೂಡ ನೋಡಬಹುದಾಗಿದೆ. ಸೀಟು ಹಂಚಿಕೆಯ ಫಲಿತಾಂಶವನ್ನು ಅಭ್ಯರ್ಥಿಗಳು ವೆಬ್ ಸೈಟ್ನಲ್ಲಿ ಪರಿಶೀಲಿಸಿದ ನಂತರ ನಿಗದಿಪಡಿಸಿರುವ ನಾಲ್ಕು ಆಯ್ಕೆಗಳಲ್ಲಿ(ಚಾಯ್ಸ) ಯಾವುದಾದರೂ ಒಂದನ್ನು ಆಯ್ಕೆ ಮಾಡಿಕೊಳ್ಳಬೇಕು. ಪ್ರಾಧಿಕಾರವು ವೈದ್ಯಕೀಯ ಮತ್ತು
ದಂತವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಬ್ರೋಷರ್ನಲ್ಲಿರುವ ಮಾಹಿತಿಯನ್ನು ಓದಿ ಅರ್ಥಮಾಡಿಕೊಂಡು ಸುತ್ತುಗಳಲ್ಲಿ ಭಾಗವಹಿಸಲು ನಿಗದಿಪಡಿಸಿರುವ ಅರ್ಹತೆ ಮತ್ತು ಮುಂದಿನ ಸುತ್ತುಗಳಲ್ಲಿ ಬರಬಹುದಾದ ಸೀಟುಗಳನ್ನು ಗಮನದಲ್ಲಿಟ್ಟುಕೊಂಡು ಪೋಷಕರ ಜತೆ ಚರ್ಚಿಸಿ ಸೂಕ್ತವಾದ ಆಯ್ಕೆ ಮಾಡಬೇಕು. ಎರಡನೇ ಸುತ್ತಿನ ಫಲಿತಾಂಶ ಪ್ರಕಟಣೆ ನಂತರ ಅಭ್ಯರ್ಥಿಗಳಿಗೆ ಯಾವುದೇ ಆಯ್ಕೆ ಮಾಡಿಕೊಳ್ಳುವ ಅವಕಾಶವಿಲ್ಲ. ಅಭ್ಯರ್ಥಿಗಳು ಎರಡನೇ ಸುತ್ತಿನಲ್ಲಿ ಹಂಚಿಕೆಯಾದ ಕಾಲೇಜಿಗೆ ಕಡ್ಡಾಯವಾಗಿ ಪ್ರವೇಶ
ಪಡೆಯಬೇಕಾಗುತ್ತದೆ. ಎರಡನೇ ಮುಂದುವರಿದ ಸುತ್ತಿನ ಪರಿಷ್ಕೃತ ವೇಳಾಪಟ್ಟಿ ಸದ್ಯದಲ್ಲೇ ಪ್ರಕಟಿಸಲಾಗುತ್ತದೆ. ಮಾಹಿತಿಗಾಗಿ ಪ್ರಾಧಿಕಾರದ ವೆಬ್ಸೈಟ್ ಪರಿಶೀಲಿಸಲು ನಿರ್ದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್ನಲ್ಲಿ ಲಾಬಿ ಆರಂಭ
Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ
Temperature; ಮುಂದಿನ 20 ವರ್ಷ ಮಳೆ ಜಾಸ್ತಿ, ಉಷ್ಣಾಂಶ ಏರಿಕೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.