CET ಗೊಂದಲ: ಎಬಿವಿಪಿಯಿಂದ ಪ್ರತಿಭಟನೆ
Team Udayavani, Apr 22, 2024, 10:45 PM IST
ಬೆಂಗಳೂರು: ಸಿಇಟಿ- 2024ರ ಪ್ರಶ್ನೆ ಪತ್ರಿಕೆ ರಚನೆಯಲ್ಲಿ ಆಗಿರುವ ಅವಾಂತರಗಳನ್ನು ಸರಿಪಡಿಸಿ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಿ ಕೊಡದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಹೇಳಿದೆ.
ಸಿಇಟಿ ಪರೀಕ್ಷೆಯನ್ನು ನಿರ್ವಹಿಸುವ ಹೊಣೆ ಹೊತ್ತಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)ದ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದ ಎಬಿವಿಪಿ ಕಾರ್ಯಕರ್ತರು ತಪ್ಪಿತಸ್ಥ ಅಧಿಕಾರಿಗಳನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದರು.
ಸುಮಾರು ಮೂರು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅವರ ಭವಿಷ್ಯ ಅತಂತ್ರವಾಗಿದೆ. ಪಠ್ಯ
ದಿಂದ ಹೊರಗಿನ (ಔಟ್ ಆಫ್ ಸಿಲೆಬಸ್) 59 ಪ್ರಶ್ನೆಗಳು ಬಂದಿರುವುದು ವಿದ್ಯಾರ್ಥಿಗಳಿಗೆ ಸಮಸ್ಯೆಯ ನ್ನುಂಟು ಮಾಡಿದೆ. ಇದನ್ನು ಎಬಿವಿಪಿ ತೀವ್ರವಾಗಿ ಖಂಡಿಸುತ್ತದೆ. ಕೆಇಎ ತನ್ನ ಮೂಲಭೂತ ಚಟುವಟಿಕೆಯನ್ನೇ ಸರಿಯಾಗಿ ಮಾಡದೆ ವಿದ್ಯಾರ್ಥಿಗಳ ಭವಿಷ್ಯದ ಜತೆ ಚೆಲ್ಲಾಟವಾಡಿದೆ. ಇದೊಂದು ಅಕ್ಷಮ್ಯ ಅಪರಾಧ ಎಂದು ಪ್ರತಿಭಟನಕಾರರು ಆಗ್ರಹಿಸಿದರು.
ಪ್ರತಿಭಟನಾಕಾರರು ಪ್ರತಿಭ ಟನೆ ನಡೆಸಲು ಪೊಲೀಸರು ಅವಕಾಶ ನೀಡಲಿಲ್ಲ. ಸ್ವಾತಂತ್ರÂ ಉದ್ಯಾನದಲ್ಲಿ ಮಾತ್ರ ಪ್ರತಿಭಟನೆ ನಡೆಸಬೇಕು. ಇಲ್ಲಿ ಪ್ರತಿಭಟನೆ ನಡೆಸಲು ಅವಕಾಶವಿಲ್ಲವೆಂದು ಬ್ಯಾರಿಕೇಡ್ ಹಾಕಿದ್ದರು. ಆದರೆ ಎಬಿವಿಪಿ ಕಾರ್ಯಕರ್ತರು ಕೆಇಎ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ವಾಗ್ವಾದಕ್ಕೆ ಕಾರಣವಾಯಿತು. ಪ್ರತಿಭಟನೆಗೆ ಅಡ್ಡಿಪಡಿಸಬೇಡಿ ಶಾಂತಯುತ ಪ್ರತಿಭಟನೆ ನಡೆಸುತ್ತೇವೆಂದು ಮನವಿ ಮಾಡಿದರೂ ಪೊಲೀಸರು ಅವಕಾಶ ಕಲ್ಪಿಸದೆ ಕಾರ್ಯಕರ್ತರನ್ನು ವಶಕ್ಕೆ ತೆಗೆದುಕೊಂಡರು.
ಮನವಿ ಸ್ವೀಕರಿಸದ ಕೆಇಎ ವಿರುದ್ಧ ಅಸಮಾಧಾನ ಕೆಇಎ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರೂ ಕೆಇಎ ಕಾರ್ಯ ನಿರ್ವಾಹಕ ನಿರ್ದೇಶಕರು ಮನವಿ ಸ್ವೀಕರಿಸಲು ಬಾರದಿರುವುದಕ್ಕೆ ಎಬಿವಿಪಿ ಕಾರ್ಯಕರ್ತರು ಅಸಮಾ ಧಾನ ವ್ಯಕ್ತಪಡಿಸಿದರು. ಅಧಿಕಾರಿಗಳು ಹೋರಾಟಗಾರರ ಮನವಿ ಸ್ವೀಕರಿಸು ವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಧಿಕಾರಿಗಳು ಮಾಡಬೇಕಾದ ಕೆಲಸ ವಾಗಿದೆ. ಆದರೆ, ಅಧಿಕಾರಿಗಳು ಯಾವುದೇ ರೀತಿಯಲ್ಲಿ ಸ್ಪಂದಿಸದಿರು ವುದು ಸರಿಯಲ್ಲ. 3 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಈ ಪರಿಯ ನಿರ್ಲಕ್ಷ್ಯ ಸರಿಯಲ್ಲ ಎಂದು ಟೀಕಿಸಿದರು.
ಕೆಇಎ ವಿರುದ್ಧ ಪ್ರತಿಭಟನೆ ನಡೆಸಿದ ಪ್ರತಿಭಟನಕಾರರನ್ನು ಪೊಲೀಸರು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದರು. ಅಲ್ಲಿಗೆ ಭೇಟಿ ನೀಡಿದ ಮಲ್ಲೇಶ್ವರ ಶಾಸಕ ಡಾ| ಸಿ.ಎನ್. ಅಶ್ವತ್ಥ ನಾರಾಯಣ ಕಾರ್ಯಕರ್ತರಿಗೆ ಧೈರ್ಯ ತುಂಬಿದರು.
ಸಿಇಟಿ ಪಠ್ಯೇತರ ಪ್ರಶ್ನೆ:
ವಿಷಯವಾರು ತಜ್ಞರ ಸಮಿತಿ ರಚನೆ
ಬೆಂಗಳೂರು: ಸಿಇಟಿಯಲ್ಲಿ ಪಠ್ಯಕ್ಕೆ ಹೊರತಾದ ಪ್ರಶ್ನೆಗಳನ್ನು ಕೇಳಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಸಮೂಹದಲ್ಲಿ ಉಂಟಾಗಿರುವ ಆಕ್ರೋಶ ಮತ್ತು ಗೊಂದಲಗಳ ಪರಿಹಾರಕ್ಕೆ ಕೊನೆಗೂ ಎಚ್ಚೆತ್ತಕೊಂಡಿರುವ ಉನ್ನತ ಶಿಕ್ಷಣ ಇಲಾಖೆ ಯಾವ್ಯಾವ ವಿಷಯದಲ್ಲಿ ಎಷ್ಟೆಷ್ಟು ಪಠ್ಯೇತರ ಪ್ರಶ್ನೆಗಳನ್ನು ಕೇಳಲಾಗಿದೆ ಎಂದು ಖಚಿತಪಡಿಸಿಕೊಳ್ಳಲು ವಿಷಯವಾರು ಪ್ರತ್ಯೇಕ ತಜ್ಞರ ಸಮಿತಿ ರಚಿಸಿದೆ. ಸೋಮವಾರ ಈ ಬಗ್ಗೆ ಪತ್ರಿಕಾ ಪ್ರಕಟನೆ ನೀಡಿರುವ ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಂ.ಎಸ್.ಶ್ರೀಕರ್, ಈ ಸಮಿತಿಗಳ ವರದಿ ಬಂದ ಕೂಡಲೇ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಭರವಸೆ ನೀಡಿದ್ದಾರೆ.
ಜೀವಶಾಸ್ತ್ರ, ಗಣಿತ, ರಸಾಯನಶಾಸ್ತ್ರ ಮತ್ತು ಭೌತಶಾಸ್ತ್ರ ಈ ಎಲ್ಲ ನಾಲ್ಕೂ ವಿಷಯಗಳಿಗೂ ಪ್ರತ್ಯೇಕ ತಜ್ಞರ ಸಮಿತಿ ರಚಿಸಲಾಗಿದೆ. ಈ ನಾಲ್ಕೂ ಸಮಿತಿಗಳು ಸಿಇಟಿಯಲ್ಲಿ ಪಠ್ಯಕ್ರಮದಿಂದ ಹೊರತಾಗಿರುವ ಪ್ರಶ್ನೆಗಳನ್ನು ಖಚಿತಪಡಿಸಿಕೊಂಡು ತತ್‌ಕ್ಷಣವೇ ಸರಕಾರಕ್ಕೆ ತನ್ನ ವರದಿ ಸಲ್ಲಿಸಬೇಕು. ವರದಿ ಆಧರಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಎ.18 ಮತ್ತು 19ರಂದು ನಡೆಸಲಾದ ಈ ಬಾರಿಯ ಸಿಟಿಇ ಪರೀಕ್ಷೆಯನ್ನು 3.5 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರೆದಿದ್ದಾರೆ. ಪರೀಕ್ಷೆಗಳ ಬಳಿಕ ಪಠ್ಯಕ್ರಮದ ಹೊರತಾಗಿ ಹಲವಾರು ಪ್ರಶ್ನೆಗಳನ್ನು ಕೇಳಲಾಗಿದೆ ಎಂದು ಪತ್ರಿಕಾ ವರದಿಗಳು ಉಲ್ಲೇಖಿಸಿವೆ. ಪಠ್ಯೇತರ ಪ್ರಶ್ನೆಗಳಿಂದ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಲಿದೆ. ಹಾಗಾಗಿ ಕೃಪಾಂಕಗಳನ್ನು ನೀಡುವಂತೆ ಅಥವಾ ಮರು ಪರೀಕ್ಷೆ ನಡೆಸುವಂತೆ ಮನವಿಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಸಮಿತಿ ರಚಿಸಲಾಗಿದೆ.
ಕೃಷಿ ಕೋಟಾ ಕ್ಲೇಮ್‌ಗೆ ಅವಕಾಶ
ಸಿಇಟಿ ಬರೆದಿರುವ ಅಭ್ಯರ್ಥಿಗಳಿಗೆ ಕೃಷಿಕರ ಕೋಟಾದ ಕ್ಲೇಮ್‌ಗಳನ್ನು ತಮ್ಮ ಆನ್‌ಲೈನ್ ಅರ್ಜಿಯಲ್ಲಿ ದಾಖಲಿಸಲು ಕರ್ನಾಟಕ ಪರೀûಾ ಪ್ರಾಧಿಕಾರ ಮತ್ತೂಂದು ಅವಕಾಶ ನೀಡಿದೆ. ಎ.23ರಂದು ಮಧ್ಯಾಹ್ನ 2ರಿಂದ ಎ.24ರ ಮಧ್ಯರಾತ್ರಿ 12 ಗಂಟೆವರೆಗೆ ಅವಕಾಶ ಇರುತ್ತದೆ. ಅಭ್ಯರ್ಥಿಗಳ ಕೋರಿಕೆ ಮೇರೆಗೆ ಈ ಅವಕಾಶ ನೀಡಿದ್ದು, ಸದುಪಯೋಗ ಪಡೆದುಕೊಳ್ಳಬಹುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.