ನಿಗದಿಯಂತೆ ನಡೆಯಲಿದೆ ಸಿಇಟಿ ಪರೀಕ್ಷೆ; ಪಿಜಿಸಿಇಟಿ ಹಾಗೂ ಡಿಪ್ಲೊಮಾ ಸಿಇಟಿ ಮುಂದೂಡಿಕೆ
Team Udayavani, Jul 21, 2020, 5:33 PM IST
ಬೆಂಗಳೂರು: ಇದೇ ತಿಂಗಳ 30-31 ರಂದು ಸಿಇಟಿ ಪರೀಕ್ಷೆ ನಡೆಯಲಿದೆ. 127 ಸ್ಥಳದ 497 ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದೆ. ಒಟ್ಟು 1,94,356 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಡಿಸಿಎಂ ಅಶ್ವಥ್ ನಾರಾಯಣ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾಧಿಕಾರಿಗಳ ಮೇಲುಸ್ತುವಾರಿಯಲ್ಲಿ ಪರೀಕ್ಷೆ ನಡೆಯಲಿದೆ. ಈಗಾಗಲೇ ಎಸ್‌ಒಪಿ ತಂಡಗಳನ್ನು ರಚಿಸಲಾಗಿದೆ. ಥರ್ಮಲ್ ಸ್ಕ್ರೀನಿಂಗ್, ಮಾಸ್ಕ್ ಸೇರಿದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುವುದು. ಎರಡು ದಿನಗಳ ಮುಂಚೆಯೇ ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸ್ ಮಾಡಲಾಗುತ್ತದೆ. ಹೊರಗಡೆ ರಾಜ್ಯದಿಂದ ಪರೀಕ್ಷೆಗೆ ಬರುವ ವಿದ್ಯಾರ್ಥಿಗಳು ಪೋಷಕರಿಗೆ ವಿನಾಯತಿ ನೀಡಲಾಗುತ್ತದೆ ಎಂದರು.
ಕೋವಿಡ್ ಪಾಸಿಟಿವ್ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಆಂಬುಲೆನ್ಸ್ ಸೇರಿ ಎಲ್ಲ ತುರ್ತು ಅಗತ್ಯ ಸೇವೆ ಇರಲಿದೆ ಎಂದ ಅವರು, ರಾಜ್ಯದಲ್ಲಿ 30 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳನ್ನು ಬದಲಾಯಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ 83 ಕೇಂದ್ರಗಳಿವೆ. ಇಲ್ಲಿ 40,200 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಮಾಹಿತಿ ನೀಡಿದರು.
ಸಿಇಟಿ ಪರೀಕ್ಷೆ ವಿಳಂಬವಾಗಿರುವ ಹಿನ್ನೆಲೆಯಲ್ಲಿ ಇಂಜಿನಿಯರಿಂಗ್, ಮೆಡಿಕಲ್, ದಂತವೈದ್ಯ ಕೋರ್ಸುಗಳ ಅಡ್ಮಿಷನ್ ದಿನಾಂಕವನ್ನೂ ಮುಂದೂಡಲಾಗುತ್ತದೆ. ಯಾವ ವಿದ್ಯಾರ್ಥಿಗಳಿಗೂ ತೊಂದರೆ ಆಗದಂತೆ ಕ್ರಮವಹಿಸುತ್ತೇವೆ ಎಂದರು.
ಎಲ್ಲ ವಿವಿಗಳಲ್ಲಿ ಪದವಿಗೆ ದಾಖಲಾತಿ ಆರಂಭವಾಗಿದೆ. ಹೀಗಾಗಿ ಸಿಇಟಿ ಪರೀಕ್ಷೆ ಮುಗಿಸಿದ ಬಳಿಕ ಇಂಜಿನಿಯರಿಂಗ್ ಹಾಗೂ ಮೆಡಿಕಲ್ ದಾಖಲಾತಿಗೆ ಕಾಲವಕಾಶ ನೀಡಲಾಗುತ್ತದೆ ಎಂದರು.
ಹೊರರಾಜ್ಯಗಳಿಂದ 1891 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಬರುತ್ತಾರೆ. ಅವರಿಗೆ ಗಡಿ ಜಿಲ್ಲೆಗಳಲ್ಲಿ ಪರೀಕ್ಷಾ ಕೇಂದ್ರದ ವ್ಯವಸ್ಥೆ ಮಾಡಲಾಗಿದೆ. ಹೊರ ದೇಶದಿಂದ 30 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಒಂದು ತಿಂಗಳ ಹಿಂದೆಯೇ ಅವರಿಗೆ ನೋಟಿಸ್ ಕೊಡಲಾಗಿತ್ತು ಎಂದರು.
ಪಿಜಿಸಿಇಟಿ ಹಾಗೂ ಡಿಪ್ಲೊಮಾ ಸಿಇಟಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಆಗಸ್ಟ್ 8-9 ರಂದು ನಿಗದಿಯಾಗಿದ್ದ ಪಿಜಿಸಿಇಟಿ ಪರೀಕ್ಷೆ ಮುಂದೂಡಲಾಗಿದೆ ಎಂದು ಅಶ್ವಥ್ ನಾರಾಯಣ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.