ಸಿಇಟಿ ರಾಂಕಿಂಗ್: ಹೈಕೋರ್ಟ್ ತೀರ್ಪಿನ ಬಗ್ಗೆ ಚರ್ಚಿಸಲು ಸಚಿವರ ನಿವಾಸದಲ್ಲಿ ಮಹತ್ವದ ಸಭೆ
Team Udayavani, Sep 5, 2022, 9:13 AM IST
ಬೆಂಗಳೂರು: 2020-21ರಲ್ಲಿ ದ್ವಿತೀಯ ಪಿಯುಸಿ ತೇರ್ಗಡೆಯಾಗಿ ಈ ವರ್ಷವೂ ಸಿಇಟಿ ಬರೆದಿರುವ 24 ಸಾವಿರ ವಿದ್ಯಾರ್ಥಿಗಳ ಪಿಯುಸಿ ಅಂಕವನ್ನೂ ಪರಿಗಣಿಸುವಂತೆ ಹೈಕೋರ್ಟ್ ನೀಡಿರುವ ಆದೇಶ ಕುರಿತು ಚರ್ಚಿಸಲು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ನಿವಾಸದಲ್ಲಿ ಮಹತ್ವದ ಸಭೆ ಆರಂಭವಾಗಿದೆ.
ಈ ಸಭೆಯಲ್ಲಿ ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯ ಮತ್ತು ಕಾನೂನು ತಜ್ಞರು ಪಾಲ್ಗೊಳ್ಳಂಡಿದ್ದಾರೆ ಇದರಲ್ಲಿ ನ್ಯಾಯಾಲಯದ ತೀರ್ಪಿನ ಸಾಧಕ-ಬಾಧಕಗಳನ್ನು ಚರ್ಚಿಸಿ, ಮುಂದಿನ ಕ್ರಮ ಕುರಿತು ನಿರ್ಧರಿಸಲಾಗುವುದು ಎಂದು ತಿಳಿದು ಬಂದಿದೆ.
2020-21ರಲ್ಲಿ ಕೊರೋನಾ ಕಾರಣದಿಂದಾಗಿ ಪಿಯುಸಿ ಪರೀಕ್ಷೆ ನಡೆಸದೆ, ತೇರ್ಗಡೆ ಮಾಡಲಾಗಿತ್ತು. ನಂತರ ಸಿಇಟಿ ನಡೆಸಿ, ಎಸ್ಸೆಸ್ಸೆಲ್ಸಿ ಮತ್ತು ಪ್ರಥಮ ಪಿಯುಸಿ ಅಂಕಗಳನ್ನು ಪರಿಗಣಿಸಿ, ವೃತ್ತಿಪರ ಶಿಕ್ಷಣ ಕೋರ್ಸುಗಳಿಗೆ ಪ್ರವೇಶ ಕೊಟ್ಟಿದ್ದನ್ನು ಇಲ್ಲಿ ಸ್ಮರಿಸಬಹುದು.
ಆದರೆ, ಹೀಗೆ ಪ್ರವೇಶಾವಕಾಶ ಪಡೆದುಕೊಂಡ 24 ಸಾವಿರ ವಿದ್ಯಾರ್ಥಿಗಳು ಈ ಬಾರಿಯೂ ಸಿಇಟಿ ಬರೆದಿದ್ದರು. ಅಲ್ಲದೆ, ರ್ಯಾಂಕಿಂಗ್ ಪಟ್ಟಿಯಲ್ಲಿ ತಮ್ಮ ದ್ವಿತೀಯ ಪಿಯುಸಿ ಅಂಕಗಳನ್ನು ಕೂಡ ಪರಿಗಣಿಸಬೇಕು ಎಂದು ಕೋರ್ಟ್ ಮೆಟ್ಟಿಲೇರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
Bengaluru: ಕೇಂದ್ರದ ತೆರಿಗೆ ಅನ್ಯಾಯ ಮಧ್ಯೆಯೂ ಅಭಿವೃದ್ಧಿ: ಸಿಎಂ
MUST WATCH
ಹೊಸ ಸೇರ್ಪಡೆ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.