CET Results: ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶ
Team Udayavani, May 20, 2024, 1:25 PM IST
ಬೆಂಗಳೂರು: ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಫಲಿತಾಂಶ ಘೋಷಣೆಯಾದ ನಂತರವೇ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ-24) ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ. ಸೋಮವಾರ (ಮೇ 20) ಫಲಿತಾಂಶ ಪ್ರಕಟಿಸುತ್ತಾರೆ ಎಂದು ಕೆಲವರು ಸಾಮಾಜಿಕ ಮಾಧ್ಯಮಗಳಲ್ಲಿ ಹಾಕಿರುವುದು ಸತ್ಯಕ್ಕೆ ದೂರವಾದುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಅವರು ಸ್ಪಷ್ಟಪಡಿಸಿದ್ದಾರೆ.
ದ್ವಿತೀಯ ಪಿಯುಸಿಯ ವಿಜ್ಞಾನ ವಿಷಯಗಳಲ್ಲಿ ವಿದ್ಯಾರ್ಥಿಗಳು ಪಡೆದ ಶೇ.50 ರಷ್ಟು ಅಂಕಗಳನ್ನು ಸೇರಿಸಿಯೇ ಸಿಇಟಿ ರ‍್ಯಾಂಕ್ (Rank) ಪಟ್ಟಿಯನ್ನು ಪ್ರಕಟಿಸಬೇಕಾಗುತ್ತದೆ. ಇದು ಮೊದಲಿನಿಂದಲೂ ಪಾಲಿಸುತ್ತಿರುವ ನಿಯಮ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿಗೆ ಮೂರು ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಮೊದಲ ಎರಡು ಪರೀಕ್ಷೆಗಳ ಪೈಕಿ ಯಾವುದರಲ್ಲಿ ಹೆಚ್ಚು ಅಂಕ ಬಂದಿದೆಯೊ ಅವುಗಳನ್ನೇ ಸಿಇಟಿ ರ‍್ಯಾಂಕ್ ಗೆ (Rank) ಪರಿಗಣಿಸಬೇಕಾಗುತ್ತದೆ. ಹೀಗಾಗಿ ಎರಡನೇ ಪರೀಕ್ಷೆಯ ಫಲಿತಾಂಶಕ್ಕಾಗಿ ಕೆಇಎ ಕಾಯುವುದು ಅನಿವಾರ್ಯವಾಗಿದೆ ಎಂದು ಅವರು ವಿವರಿಸಿದ್ದಾರೆ.
ಬಿಎಸ್ಸಿ ಕೃಷಿ ಪದವಿಗೆ ಪ್ರವೇಶ ನೀಡಲು ಕೃಷಿ ವಿಶ್ವವಿದ್ಯಾಲಯ ಕೃಷಿ ಪ್ರಾಯೋಗಿಕ ಪರೀಕ್ಷೆಯನ್ನು ಮೇ 25ಕ್ಕೆ ನಿಗದಿ ಮಾಡಿದ್ದು, ಅದರ ಫಲಿತಾಂಶ ಕೂಡ ಬರಬೇಕಾಗುತ್ತದೆ. ಇದು ಸಿಇಟಿ ರ‍್ಯಾಂಕ್ ಗೂ (Rank) ಬೇಕಾಗುತ್ತದೆ ಎಂದು ಅವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.