ಚಡ್ಡಿ ಹಾಕುವ ಎಲ್ಲರನ್ನೂ ಅಪಮಾನಿಸಿದ ಸಿದ್ದರಾಮಯ್ಯ : ಛಲವಾದಿ ನಾರಾಯಣಸ್ವಾಮಿ
Team Udayavani, Jun 7, 2022, 5:44 PM IST
ಬೆಂಗಳೂರು: ಚಡ್ಡಿ ಹಾಕುವವರು ಮಿಲಿಟರಿಯಲ್ಲಿ, ಪೊಲೀಸ್ ವ್ಯವಸ್ಥೆಯಲ್ಲೂ ಹಿಂದೆ ಇದ್ದರು. ಕರ್ಮಚಾರಿಗಳೂ ಚಡ್ಡಿ ಹಾಕುತ್ತಾರೆ. ರೈತರೆಲ್ಲರೂ ಚಡ್ಡಿ ಧರಿಸುತ್ತಾರೆ. ಚಡ್ಡಿ ಹಾಕುವ ಎಲ್ಲರನ್ನೂ ಸಿದ್ದರಾಮಯ್ಯ ಅಪಮಾನ ಮಾಡಿದ್ದಾರೆ ಎಂದು ರಾಜ್ಯ ವಿಧಾನಪರಿಷತ್ ಸದಸ್ಯ ಮತ್ತು ಎಸ್.ಸಿ. ಮೋರ್ಚಾ ರಾಜ್ಯ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯವಾಡಿದರು.
ಬಿಜೆಪಿ ರಾಜ್ಯ ಎಸ್.ಸಿ. ಮೋರ್ಚಾ ವತಿಯಿಂದ ಇಂದು “ಜನರಿಂದ ಸಂಗ್ರಹಿಸಿದ ಚಡ್ಡಿಗಳನ್ನು ಸಿದ್ದರಾಮಯ್ಯ ಅವರ ಮನೆಗೆ ತಲುಪಿಸುವ ಆಂದೋಲನ”ದಲ್ಲಿ ಅವರು ಮಾತನಾಡಿದರು. ಮೋರ್ಚಾದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ನಗರದ ಗಾಂಧಿ ಭವನದಿಂದ ಸಿದ್ದರಾಮಯ್ಯರವರ ಮನೆಗೆ ತೆರಳುವ ಕಾರ್ಯಕ್ರಮ ಇದಾಗಿತ್ತು.
ವಿರೋಧ ಪಕ್ಷದ ನಾಯಕರು, ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯನವರು ಇತ್ತೀಚೆಗೆ ಚಡ್ಡಿ ಸುಡುವ ಆಂದೋಲನ ಮಾಡುವುದಾಗಿ ತಿಳಿಸಿದ್ದರು. ಆರೆಸ್ಸೆಸ್ ಅಥವಾ ಬಿಜೆಪಿಯನ್ನು ಗುರಿ ಮಾಡಿ ಹೀಗೆ ಹೇಳಿದ್ದಾರೆ. ಆರೆಸ್ಸೆಸ್‍ನವರು ಪ್ಯಾಂಟ್ ಹಾಕಲು ಆರಂಭಿಸಿ ಆರೇಳು ವರ್ಷಗಳಾಗಿವೆ. ಕಾಲ ಬಂದಂತೆ ನಾವು ಬದಲಾಗಿದ್ದೇವೆ. ಚಡ್ಡಿ ಎಂಬುದು ಮಾನವಕುಲದ ಗೌರವ ಕಾಪಾಡುತ್ತದೆ. ಇದನ್ನು ಅರ್ಥ ಮಾಡಿಕೊಳ್ಳಬೇಕಿತ್ತು ಎಂದು ತಿಳಿಸಿದರು.
ಇದನ್ನೂ ಓದಿ: 8 ವರ್ಷದಲ್ಲಿ ಮೋದಿ ಸರ್ಕಾರ ನಿರುದ್ಯೋಗಿ ಯುವ ಜನರಿಗೆ ನರಕ ತೋರಿಸಿದೆ : ಸಿದ್ದು ವಾಗ್ದಾಳಿ
ಕಾಂಗ್ರೆಸ್ ಪಕ್ಷದವರ ಎಲ್ಲವನ್ನೂ ಕಿತ್ತುಕೊಂಡಿದ್ದು, ಇರುವ ಚಡ್ಡಿಯನ್ನು ಮಾತ್ರ ಸುಟ್ಟು ನೀವ್ಯಾಕೆ ಬೆತ್ತಲಾಗುತ್ತೀರಿ ಎಂದು ಕೇಳಿದ್ದೆವು. ಆದರೂ ಅದನ್ನು ಕೇಳದೆ ಚಡ್ಡಿ ಸುಟ್ಟಿದ್ದಾರೆ. ಎಸ್‍ಸಿ ಮೋರ್ಚಾವು ರಾಜ್ಯದಾದ್ಯಂತ ಸಿದ್ದರಾಮಯ್ಯನವರ ಹೆಸರಿನಲ್ಲಿ ಚಡ್ಡಿಗಳನ್ನು ಸಂಗ್ರಹಿಸುತ್ತಿದೆ. ಸಾಂಕೇತಿಕವಾಗಿ ನಾವು ಇವತ್ತು ಚಡ್ಡಿಗಳನ್ನು ತಲುಪಿಸುತ್ತಿದ್ದೇವೆ ಎಂದು ತಿಳಿಸಿದರು.
ಇದು ಬಿಜೆಪಿ ಚಡ್ಡಿಯಲ್ಲ ಎಂದ ಅವರು, ಚಡ್ಡಿ ತಯಾರಿಕೆ ಹಿಂದಿನ ಶ್ರಮವನ್ನು ಅವರು ತಿಳಿದುಕೊಳ್ಳಬೇಕು. ಜನರು ಕೋವಿಡ್ ಸಾಂಕ್ರಾಮಿಕದ ಬಳಿಕ ಸಂಕಷ್ಟದಲ್ಲಿದ್ದಾರೆ. ಇಂಥ ಸಂದರ್ಭದಲ್ಲಿ ಚಡ್ಡಿ ಸುಟ್ಟರೂ ಮಾಲಿನ್ಯ ಉಂಟಾಗುತ್ತದೆ. ಆದ್ದರಿಂದ ಮಾಲಿನ್ಯ ನಿಯಂತ್ರಣ ಮಂಡಳಿಯ ಅನುಮತಿ ಪಡೆದು ಚಡ್ಡಿ ಸುಡಬೇಕು. ಇಲ್ಲವಾದರೆ ಮಾಲಿನ್ಯ ಉಂಟು ಮಾಡಿದ ಸಿದ್ದರಾಮಯ್ಯರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.
ಕಾಂಗ್ರೆಸ್‍ನವರಿಗೆ ಬೇರೇನೂ ಕೆಲಸ ಇಲ್ಲ. ಇನ್ನು ಚಡ್ಡಿ ಸುಟ್ಟುಕೊಂಡೇ ಇರಲಿ ಎಂದರಲ್ಲದೆ, ಈ ದೇಶದ ಗೌರವವನ್ನೂ ಈ ಚಡ್ಡಿ ಕಾಪಾಡುತ್ತದೆ. ಆರೆಸ್ಸೆಸ್‍ನಂಥ ಸಂಘಟನೆ ಇರದಿದ್ದರೆ ನಿಮ್ಮ ಚಡ್ಡಿ ಉಳಿಯುತ್ತಿರಲಿಲ್ಲ ಎಂದು ನುಡಿದರು. ಕಾಂಗ್ರೆಸ್ ಇದುವರೆಗೆ ದೇಶದಲ್ಲಿ ಅಧಿಕಾರದಲ್ಲಿ ಇರುತ್ತಿದ್ದರೆ ಅವರವರ ಚಡ್ಡಿಯನ್ನು ಅವರವರೇ ಹುಡುಕಾಡಿ ನೋಡಿಕೊಳ್ಳಬೇಕಾಗುತ್ತಿತ್ತು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
MUST WATCH
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.