ಸ್ವಾಭಿಮಾನವಿದ್ದರೆ ಸಚಿವ ಸ್ಥಾನಕ್ಕೆ ಮಹಾದೇವಪ್ಪ ರಾಜೀನಾಮೆ ನೀಡಲಿ: ನಾರಾಯಣಸ್ವಾಮಿ


Team Udayavani, Mar 16, 2024, 1:22 PM IST

ಸ್ವಾಭಿಮಾನವಿದ್ದರೆ ಸಚಿವ ಸ್ಥಾನಕ್ಕೆ ಮಹಾದೇವಪ್ಪ ರಾಜೀನಾಮೆ ನೀಡಲಿ: ನಾರಾಯಣಸ್ವಾಮಿ

ವಿಜಯಪುರ : ದಲಿತರಿಗೆ ಮೀಸಲಿಟ್ಟಿದ್ದ 25 ಸಾವಿರ ಕೋಟಿ ಹಣವನ್ನು ದಲಿತರಿಗೆ ಕಾಂಗ್ರೆಸ್ ಸರ್ಕಾರ ಮೋಸ ಮಾಡಿದ್ದರೂ ಧ್ವನಿ ಎತ್ತದೇ ದಲಿತ ಸಂಘಟನೆಗಳು ಎಲ್ಲಿ ಹೋದವು. ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಲೇ ದಲಿತ ಸಂಘಟನೆಗಳ ಧ್ವನಿಯೇ ಅಡಗಿಹೋಗಿದೆ. ದಲಿತ ಸಂಘಟನೆಗಳು ಈಗ ಎಲ್ಲಿ ಹೋಗಿವೆ ಹುಡುಕಿ ಕೊಡಿ ಎಂದು ಬಿಜೆಪಿ ವಕ್ತಾರ ಛಲವಾದಿ ನಾರಾಯಣಸ್ವಾಮಿ ಕುಟುಕಿದ್ದಾರೆ.

ಶನಿವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಲಿತರ ಬಗ್ಗೆ ಬಹಳ ಮಾತನಾಡುವ ಸಿದ್ಧರಾಮಯ್ಯ ದಲಿತರಿಗೆ ಮೀಸಲಿದ್ದ ಎಸ್‍ಇಪಿ-ಟಿಎಸ್‍ಪಿ ಹಣ ಬೇರೆ ಯಾವುದಕ್ಕೋ ಬಳಸಿಕೊಂಡಿದ್ದಾರೆ. ಇಷ್ಟಾದರೂ ಒಂದಿಬ್ಬರನ್ನು ಬಿಟ್ಟರೆ ದಲಿತ ಸಂಘಟನೆಗಳು, ಮುಖಂಡರು ಬಾಯಿ ಮುಚ್ಚಿಕೊಂಡಿರುವುದೇಕೆ ಎಂದು ಅವರೇ ಉತ್ತರ ಕೊಡಬೇಕು ಎಂದು ಆಗ್ರಹಿಸಿದರು.

ಓಟ್ ನಮ್ಮದು ನಾಯಕತ್ವ ಅವರದು ಎಂದು ಸಚಿವ ಮಹಾದೇವಪ್ಪ ಈಗ ಮಾತನಾಡುತ್ತಿದ್ದಾರೆ. ಈ ಹಿಂದೆ ಸಿದ್ಧರಾಮಯ್ಯ ಅವರಿಗೆ ನಮ್ಮ ಸಮುದಾಯಕ್ಕೂ ಎರಡೂವರೆ ವರ್ಷ ಮುಖ್ಯಮಂತ್ರಿ ಅವಕಾಶ ಕೊಡಿ ಎಂದು ನಾನು ಧ್ವನಿ ಎತ್ತಿದಾಗ ಇದೇ ಮಹದೇವಪ್ಪ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ ಎನ್ನುವ ಮೂಲಕ ಸಿದ್ಧರಾಮಯ್ಯ ಅವರನ್ನು ಬೆಂಬಲಿಸಿದ್ದರು ಎಂದು ತಿರುಗೇಟು ನೀಡಿದ್ದಾರೆ.

ಸಿದ್ದಾರಾಮಯ್ಯ-ಮಹಾದೇವಪ್ಪ ಮಧ್ಯೆ ಸಂಬಂಧ ಹಳಸಿರುವ ಕಾರಣಕ್ಕೆ ದಲಿತರು ಓಟ್ ಬ್ಯಾಂಕ್ ಎಂದು ಧ್ವನಿ ಎತ್ತಿದ್ದಾರೆ. ಮಹಾದೇವಪ್ಪ ಅವರಿಗೆ ಸ್ವಾಭಿಮಾನವಿದ್ದರೆ ಕಾಂಗ್ರೆಸ್ ಸರ್ಕಾರದಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿಯಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರ ಬರಲಿ ಎಂದು ಆಗ್ರಹಿಸಿದರು.

ಕಾಂಗ್ರೆಸ್ ಪಕ್ಷದ ಸ್ವಾತಂತ್ರ್ಯಾ ನಂತರ ಕರ್ನಾಟಕದಲ್ಲಿ ದಲಿತರನ್ನು ಓಟ್ ಬ್ಯಾಂಕ್ ಮಾಡಿಕೊಂಡೇ ಬಂದಿದೆ. ಬಿ.ಬಸವಲಿಂಗಪ್ಪ, ಕೆ.ಎಚ್.ರಂಗನಾಥ, ಮಲ್ಲಿಕಾರ್ಜುನ ಖರ್ಗೆ, ಡಾ.ಜಿ.ಪರಮೇಶ್ವರ, ಬಿ.ರಾಚಯ್ಯ ಅವರಂಥ ನಾಯಕರಿಗೆ ಮುಖ್ಯಮಂತ್ರಿ ಆಗುವ ಅವಕಾಶವನ್ನು ಕಾಂಗ್ರೆಸ್ ತಪ್ಪಿಸಿದೆ ಎಂದು ಕಿಡಿ ಕಾರಿದರು.

ಐಎನ್‍ಡಿಐಎ ಒಕ್ಕೂಟದಿಂದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಿಸುತ್ತಲೇ ವಿರೋಧಿಸಿದ್ದು ಇದೇ ಸಿದ್ಧರಾಮಯ್ಯ. ಡಾ.ಬಿ.ಆರ್.ಅಂಬೇಡ್ಕರ್ ಅವರನ್ನೇ ಅಂತ್ಯ ಕಾಲದಲ್ಲೂ ಅತ್ಯಂತ ಅವಮಾನಕರ ರೀತಿಯಲ್ಲಿ ನಡೆಸಿಕೊಂಡ ಕಾಂಗ್ರೆಸ್ ಇದೀಗ ಖರ್ಗೆ ಅವರನ್ನು ನಿಮ್ಮ ಮನೆ ಬಾಗಿಲು ಕಾಯಲು ಇರಿಸಿಕೊಂಡಿದೆ ಎಂದು ಟೀಕಿಸಿದರು.

ನಿಜಕ್ಕೂ ಡಾ.ಮಹದೇವಪ್ಪ ಅವರಿಗೆ ದಲಿತರ ಬಗ್ಗೆ ಕಾಳಜಿ ಇದ್ದರೆ ಸರ್ಕಾರದಿಂದ ಹೊರ ಬರಬೇಕು, ಇಲ್ಲವಾದಲ್ಲಿ ಓರ್ವ ಸ್ವಾರ್ಥಿ ಎನಿಸಿಕೊಳ್ಳಲಿದ್ದಾರೆ ಎಂದ ಚಲವಾದಿ ನಾರಾಯಣಸ್ವಾಮಿ, ಬಿಹಾರದಲ್ಲಿ ದಲಿತ ವ್ಯಕ್ತಿಯನ್ನು ಮುಖ್ಯಮಂತ್ರಿ ಮಾಡಿದ್ದು ನಮ್ಮದೇ ಬಿಜೆಪಿ ಪಕ್ಷ ಎಂದು ಸಮರ್ಥಸಿಕೊಂಡದರು.

ಇದನ್ನೂ ಓದಿ: Jammu-Kashmir ಅಂದು-ಇಂದು: ಕಾಶ್ಮೀರಿ ಜನರ ಮನಸ್ಥಿತಿ ಈಗ ಹೇಗಿದೆ ಗೊತ್ತಾ?

ಟಾಪ್ ನ್ಯೂಸ್

Australia qualify for the WTC25 Final

World Test Championship: ಭಾರತದ ಕನಸು ಛಿದ್ರ; ಆಸೀಸ್ ಫೈನಲ್‌ ಸ್ಥಾನ ಭದ್ರ

rahul

IIT Madras: ಕಾಂಗ್ರೆಸ್ ಮತ್ತು ಬಿಜೆಪಿ ಹೇಗೆ ಭಿನ್ನ? ಉತ್ತರ ನೀಡಿದ ರಾಹುಲ್ ಗಾಂಧಿ

ಪೊಂಗಲ್‌ – ಸಂಕ್ರಾಂತಿಗೆ ಮನರಂಜನೆಯ ಹಬ್ಬದೂಟ: ಇಲ್ಲಿದೆ ರಿಲೀಸ್‌ ಆಗಲಿರುವ ಚಿತ್ರಗಳ ಪಟ್ಟಿ

ಪೊಂಗಲ್‌ – ಸಂಕ್ರಾಂತಿಗೆ ಮನರಂಜನೆಯ ಹಬ್ಬದೂಟ: ಇಲ್ಲಿದೆ ರಿಲೀಸ್‌ ಆಗಲಿರುವ ಚಿತ್ರಗಳ ಪಟ್ಟಿ

2-kunigal

Kunigal:ಮನೆಗೆ ನುಗ್ಗಿದ ದುಷ್ಕರ್ಮಿಗಳು; ರಾಡ್ ನಿಂದ ತಲೆಗೆ ಹೊಡೆದು ಮಾಂಗಲ್ಯಸರ ದೋಚಿ ಪರಾರಿ

Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ

Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ

Australia won the BGT 2024-25

INDvAUS: ಸಿಡ್ನಿಯಲ್ಲಿ ಸೋಲು; ದಶಕದ ಬಳಿಕ ಬಾರ್ಡರ್‌ ಗಾವಸ್ಕರ್‌ ಟ್ರೋಫಿ ಸೋತ ಭಾರತ

Private-Bus

Private Bus fare: ಶೀಘ್ರದಲ್ಲೇ ಖಾಸಗಿ ಬಸ್‌ ಪ್ರಯಾಣ ದರವೂ ಏರಿಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Private-Bus

Private Bus fare: ಶೀಘ್ರದಲ್ಲೇ ಖಾಸಗಿ ಬಸ್‌ ಪ್ರಯಾಣ ದರವೂ ಏರಿಕೆ?

BNG-winter

Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ

Womens-Commssion

Report: ಐಸಿಯು ಗಲೀಜು, ಟ್ಯಾಂಕ್‌ನಲ್ಲಿ ಪಾಚಿ: ಸರಕಾರಿ ಆಸ್ಪತ್ರೆಗಳ ದುಃಸ್ಥಿತಿ!

HDK

JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್‌.ಡಿ.ಕುಮಾರಸ್ವಾಮಿ

Kalaburagi-BJP-Protest

Contracter Case: ಗುತ್ತಿಗೆದಾರ ಆತ್ಮಹತ್ಯೆ: ಸಚಿವ ಪ್ರಿಯಾಂಕ್‌ ರಾಜೀನಾಮೆಗೆ ಬಿಜೆಪಿ ಆಗ್ರಹ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Australia qualify for the WTC25 Final

World Test Championship: ಭಾರತದ ಕನಸು ಛಿದ್ರ; ಆಸೀಸ್ ಫೈನಲ್‌ ಸ್ಥಾನ ಭದ್ರ

Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್‌, ಮತ್ತಿಬ್ಬರ ಮೇಲೆ ಕೇಸ್‌

Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್‌, ಮತ್ತಿಬ್ಬರ ಮೇಲೆ ಕೇಸ್‌

Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ

Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ

rahul

IIT Madras: ಕಾಂಗ್ರೆಸ್ ಮತ್ತು ಬಿಜೆಪಿ ಹೇಗೆ ಭಿನ್ನ? ಉತ್ತರ ನೀಡಿದ ರಾಹುಲ್ ಗಾಂಧಿ

Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ

Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.