“ಚಂಬಲ್’ ಚಿತ್ರ ಪ್ರದರ್ಶನಕ್ಕೆ ತಡೆ ಕೋರಿ ಅರ್ಜಿ
Team Udayavani, Feb 20, 2019, 12:32 AM IST
ಬೆಂಗಳೂರು: ನೀನಾಸಂ ಸತೀಶ್ ನಟನೆಯ “ಚಂಬಲ್’ ಚಿತ್ರದ ಬಿಡುಗಡೆ ಮತ್ತು ಪ್ರದರ್ಶನಕ್ಕೆ ತಡೆ ನೀಡುವಂತೆ ಕೋರಿ ಮೃತ ಐಎಎಸ್ ಅಧಿಕಾರಿ ಡಿ.ಕೆ. ರವಿ ಅವರ ಹೆತ್ತವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಅರ್ಜಿಯ ವಿಚಾರಣೆ ನಡೆಸಿದ ನ್ಯಾ| ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಅರ್ಜಿಗೆ ಸಂಬಂಧಿಸಿದಂತೆ ನಟ ನೀನಾಸಂ ಸತೀಶ್ ಮತ್ತು ಚಿತ್ರ ತಂಡ, ಕೇಂದ್ರದ ಪ್ರಸಾರ ಮತ್ತು ಮಾಹಿತಿ ಸಚಿವಾಲಯ, ರಾಜ್ಯ ಗೃಹ ಇಲಾಖೆ, ಸೆನ್ಸಾರ್ ಮಂಡಳಿ ಪ್ರಾದೇಶಿಕ ಅಧಿಕಾರಿ ಸಹಿತ ಇತರ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೆ ಆದೇಶಿಸಿ ವಿಚಾರಣೆಯನ್ನು ಫೆ.21ಕ್ಕೆ ಮುಂದೂಡಿತು.
“ಚಂಬಲ್’ ಚಿತ್ರ ಫೆ.23ರಂದು ರಾಜ್ಯ ಹಾಗೂ ಹೊರ ರಾಜ್ಯಗಳ ಚಿತ್ರಮಂದಿರಗಳಲ್ಲಿ ಏಕಕಾಲಕ್ಕೆ ಬಿಡುಗೊಳ್ಳಲಿದೆ. ಚಿತ್ರದ “ಟ್ರೇಲರ್’ ಗಮನಿಸಿದರೆ ಅದು ತಮ್ಮ ಮಗನ ಜೀವನ ಆಧರಿಸಿ ಸಿನಿಮಾ ನಿರ್ಮಿಸಲಾಗಿದೆ ಎಂಬ ಶಂಕೆ ವ್ಯಕ್ತವಾಗುತ್ತದೆ. ಈ ಚಿತ್ರದಲ್ಲಿ ತಮ್ಮ ಮಗನ ವ್ಯಕ್ತಿತ್ವ ಹಾಗೂ ಚಾರಿತ್ರ್ಯಕ್ಕೆ ಧಕ್ಕೆ ಬರುವ ರೀತಿಯಲ್ಲಿ ತೋರಿಸಲಾಗಿದೆ. ಒಂದು ವೇಳೆ ಚಿತ್ರ ಬಿಡುಗಡೆಯಾಗಿ. ಪ್ರದರ್ಶನ ಕಂಡರೆ ಡಿ.ಕೆ. ರವಿ ಅವರ ಬಗ್ಗೆ ಸಾರ್ವಜನಿಕರಲ್ಲಿ ಕೆಟ್ಟ ಅಭಿಪ್ರಾಯ ಮೂಡುತ್ತದೆ. ಹಾಗಾಗಿ ಚಿತ್ರದ ಬಿಡುಗಡೆ ಹಾಗೂ ಪ್ರದರ್ಶನಕ್ಕೆ ತಡೆ ನೀಡಬೇಕು ಎಂದು ರವಿ ಪೋಷಕರು ನ್ಯಾಯಪೀಠಕ್ಕೆ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
RTO; ಫಿಟ್‌ನೆಸ್ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!
High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.