ರಾಜ್ಯದ ವಿವಿಗಳಲ್ಲಿ ಕುಲಪತಿ ಹುದ್ದೆ ಖಾಲಿ: ಹುದ್ದೆ ಭರ್ತಿಗೆ ಸರ್ಕಾರ ನಿರ್ಲಕ್ಷ್ಯ
Team Udayavani, Jul 10, 2022, 2:49 PM IST
ಬೆಂಗಳೂರು: ಕೊರೊನಾ ಕಾಲಘಟ್ಟದ ಬಳಿಕ ರಾಜ್ಯದಲ್ಲಿ ಸಂಪೂರ್ಣವಾಗಿ ಶೈಕ್ಷಣಿಕ ಚಟುವಟಿಕೆಗಳು ಪುನಾರಂಭಗೊಂಡಿವೆ. ಆದರೆ, ರಾಜ್ಯದ ಪ್ರಮುಖ ವಿಶ್ವವಿದ್ಯಾಲಯಗಳಾದ ಬೆಂಗಳೂರು, ತುಮಕೂರು, ದಾವಣಗೆರೆ, ಕೃಷಿ, ಜಾನಪದ ವಿವಿ ಸೇರಿದಂತೆ ಪ್ರಮುಖ ವಿವಿಗಳಲ್ಲಿ ಕುಲಪತಿಗಳೇ ಇಲ್ಲದೆ ಆಡಳಿತಾತ್ಮಕ ನಿರ್ಧಾರಗಳಿಗೆ ಹಿನ್ನಡೆಯಾಗುತ್ತಿದೆ.
ಪದವಿ ಕಾಲೇಜುಗಳ ಪ್ರವೇಶಾತಿ ಆರಂಭವಾಗಿದ್ದು, ಮೊದಲ ವರ್ಷದ ವಿದ್ಯಾರ್ಥಿಗಳು ಪ್ರವೇಶಾತಿ ಪಡೆಯುತ್ತಿದ್ದಾರೆ. 2 ಮತ್ತು 3ನೇ ವರ್ಷದ ತರಗತಿಗಳು ಆರಂಭವಾಗಿವೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನವಾಗುತ್ತಿದೆ. ಆದರೆ, ವಿಶ್ವ ವಿದ್ಯಾಲಯಗಳಲ್ಲಿ ಕುಲಪತಿಗಳಿಲ್ಲದೆ, ಪ್ರಭಾರ ಹುದ್ದೆಗಳಲ್ಲಿ ನಿರ್ವಹಣೆ ಮಾಡಲಾಗುತ್ತಿದೆ. ಇದು ಆಡಳಿತಾತ್ಮಕ ಮತ್ತು ಶೈಕ್ಷಣಿಕ ಚಟುವಟಿಕೆಗಳ ಮೇಲೆ ಪರಿಣಾಮ ಬೀರುತ್ತಿದೆ.
ವಿಶ್ವವಿದ್ಯಾಲಯಗಳು ಪ್ರತಿಯೊಂದನ್ನು ಆನ್ ಲೈನ್ ಮೂಲಕವೇ ನಡೆಸಬೇಕು ಎಂಬ ರೂಪಿಸಿದೆ. ಹೀಗಾಗಿ, ಎನ್‌ಇಪಿ ಜಾರಿಯಾಗಿರುವುದರಿಂದ ಮೊದಲ ಸೆಮಿಸ್ಟರ್ ಪರೀಕ್ಷೆಯ ಮೌಲ್ಯಮಾಪನ ಪ್ರಕ್ರಿಯೆ ತಾಂತ್ರಿಕವಾಗಿ ಸಮಸ್ಯೆಯಾಗಿದೆ. ಯುಯುಸಿಎಂ ಎಸ್‌ನಲ್ಲಿ ಮೌಲ್ಯಮಾಪನ ಸಮಸ್ಯೆ, ಕಾಲೇಜುಗಳ ಮಾನ್ಯತೆ, ವಿದ್ಯಾರ್ಥಿಗಳ ನೋಂದಣಿ ತೊಡಕುಗಳು ಉಂಟಾಗಿವೆ. ಇದು ವಿದ್ಯಾರ್ಥಿಗಳ ಮೇಲೆಯೂ ಪರಿಣಾಮ ಬೀರುತ್ತಿದೆ ಎಂದು ಶಿಕ್ಷಣ ತಜ್ಞರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: 81 ಮಂದಿ ಜೈಲು ಸಿಬ್ಬಂದಿಗೆ ಲಂಚ ನೀಡಿದ ಸುಕೇಶ್ ಚಂದ್ರಶೇಖರ್: ಪೊಲೀಸ್ ತನಿಖೆ
ಶೋಧನಾ ಸಮಿತಿ ವರದಿ ನೀಡಿ ತಿಂಗಳಾಯ್ತು
ಕುಲಪತಿಗಳ ನೇಮಕ ಸಂಬಂಧ ರಾಜ್ಯ ಸರ್ಕಾರ ನೇಮಿಸಿದ್ದ ಶೋಧನಾ ಸಮಿತಿ ವರದಿ ನೀಡಿ ತಿಂಗಳು ಗಳೇ ಕಳೆದಿವೆ. ಆದರೂ ಕೂಡ ಸರ್ಕಾರ ಕುಲಪತಿಗಳ ನೇಮಕ ಮಾಡುವಲ್ಲಿ ವಿಳಂಬ ಮಾಡುತ್ತಿದೆ. ಬೆಂಗಳೂರು ವಿವಿ ವಿಶ್ರಾಂತ ಕುಲಪತಿ ಪ್ರೊ. ಕೆ.ಆರ್. ವೇಣುಗೋಪಾಲ್ ನೇತೃತ್ವದ ಶೋಧನಾ ಸಮಿತಿಯು ತುಮಕೂರು ವಿವಿ ಕುಲಪತಿ ನೇಮಕಾತಿಗೆ ಮೇ 30ರಂದು ವರದಿ ನೀಡಿದೆ. ದಾವಣಗೆರೆ ವಿವಿ ಕುಲಪತಿ ಗಳ ನೇಮಕಕ್ಕೆ ಅಕ್ಕಮಹಾದೇವಿ ವಿಶ್ವವಿದ್ಯಾಲಯ ಕುಲಪತಿ ಪ್ರೊ. ಬಿ.ಕೆ. ತುಳಸಿ ಮಾಲಾ ನೇತೃತ್ವದ ಸಮಿತಿಯು ಮೇ 30ರಂದು ಸರ್ಕಾರಕ್ಕೆ ವರದಿ ನೀಡಿದೆ. ಅದೇ ರೀತಿ ಬೆಂಗಳೂರು ವಿವಿಗೆ ಕರ್ನಾಟಕ ರಾಜ್ಯ ಮುಕ್ತ ವಿವಿ (ಕೆಎಸ್‌ಒಯು) ಕುಲಪತಿ ಡಾ. ಎಸ್. ವಿದ್ಯಾಶಂಕರ್ ನೇತೃತ್ವದ ಸಮಿತಿಯು ಜೂ.23ರಂದು ವರದಿ ನೀಡಿದೆ.
ಪ್ರಮುಖ ಹೆಸರುಗಳು: ಬೆಂಗಳೂರು ವಿಶ್ವವಿದ್ಯಾಲಯಕ್ಕೆ ರಾಜೀವಗಾಂಧಿ ವಿವಿ ಪ್ರಭಾರ ಕುಲಪತಿಗಳಾಗಿ ಅಧಿಕಾರ ನಿರ್ವಹಿಸಿರುವ ದಂತ ವೈದ್ಯ ಡಾ. ಜಯಕರಶೆಟ್ಟಿ, ಕೆಎಸ್‌ಒಯು ಕುಲಸಚಿವ ಪ್ರೊ. ಆರ್. ರಾಜಣ್ಣ ಹಾಗೂ ಯುವಿಸಿಇ ಪ್ರಾಂಶುಪಾಲರಾದ ಪ್ರೊ. ರಮೇಶ್ ಹೆಸರುಗಳು ಪ್ರಮುಖವಾಗಿ ಕೇಳಿಬರುತ್ತಿವೆ. ಕುಲಪತಿ ಹುದ್ದೆ ಖಾಲಿ ಇರುವ ವಿವಿಗಳು: ಹಾವೇರಿಯ ಜಾನಪದ ವಿವಿ, ಶಿವಮೊಗ್ಗ, ಬೀದರ್, ಧಾರವಾಡ ಕೃಷಿ ವಿವಿಗಳಲ್ಲಿ ಕುಲಪತಿ ಹುದ್ದೆಗಳು ಖಾಲಿ ಇವೆ. ಬೆಂಗಳೂರು ಕೃಷಿ ವಿವಿ ಕುಲಪತಿ ಪ್ರೊ. ರಾಜೇಂದ್ರ ಪ್ರಸಾದ್ ಇದೇ ವರ್ಷದ ಸೆ.30ಕ್ಕೆ ಮತ್ತು ರಾಯಚೂರು ಕೃಷಿ ವಿವಿ ಕುಲಪತಿ ಡಾ. ಕೆ.ಎನ್. ಕಟ್ಟಿಮನಿ ಅವಧಿ ಅ.17ರಂದು ಪೂರ್ಣಗೊಳ್ಳಲಿದೆ.
ವಿಶ್ವವಿದ್ಯಾಲಯಗಳಲ್ಲಿ ಕುಲಪತಿಗಳು, ಕುಲಸಚಿವರು ಮತ್ತು ಪ್ರಾಧ್ಯಾಪಕರ ಹುದ್ದೆಗಳು ಭರ್ತಿಯಾಗಿದ್ದಾಗ ಮಾತ್ರ ಶೈಕ್ಷಣಿಕ ಚಟುವಟಿಕೆಗಳು ಉತ್ತಮವಾಗಿ ಕಾರ್ಯ ನಿರ್ವಹಿಸಲು ಸಾಧ್ಯವಾಗಲಿದೆ. ಸರ್ಕಾರ ಈ ವಿಚಾರದಲ್ಲಿ ನಿರ್ಲಕ್ಷ್ಯ ತೋರಬಾರದು. -ಪ್ರೊ.ಎಂ.ಎಸ್. ತಿಮ್ಮಪ್ಪ, ಬೆಂ.ವಿವಿ ವಿಶ್ರಾಂತ ಕುಲಪತಿ
-ಎನ್.ಎಲ್.ಶಿವಮಾದು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸಿದ್ದರಾಮಯ್ಯ ಮಾಸ್ ಲೀಡರ್, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.