ಕಾಂಗ್ರೆಸ್ ಪಕ್ಷದ ಹೆಸರನ್ನು ಆ್ಯಂಟಿ ನ್ಯಾಶನಲ್ ಕ್ಲಬ್‍ಹೌಸ್ ಎಂದು ಬದಲಿಸಿ: ಕ್ಯಾ.ಕಾರ್ಣಿಕ್
Team Udayavani, Jun 12, 2021, 5:13 PM IST
ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರು, ಕಾಂಗ್ರೆಸ್ ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಜಮ್ಮು- ಕಾಶ್ಮೀರಕ್ಕೆ 370ನೇ ವಿಧಿಯಡಿ ವಿಶೇಷ ಸ್ಥಾನಮಾನ ಕೊಡುವ ಮಾತನ್ನಾಡಿದ್ದಾರೆ. ಇದು ಕಾಂಗ್ರೆಸ್ ಟೂಲ್‍ಕಿಟ್‍ನ ಇನ್ನೊಂದು ಭಾಗವಾಗಿದೆ ಎಂದು ರಾಜ್ಯ ಬಿಜೆಪಿ ಮುಖ್ಯ ವಕ್ತಾರ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದ್ದಾರೆ.
ದೇಶದ ಪ್ರತಿಷ್ಠೆ ಮಣ್ಣು ಪಾಲು ಮಾಡುವುದು, ಪ್ರಧಾನಿಯವರ ಘನತೆಗೆ ಧಕ್ಕೆ ತರುವ ದುರುದ್ದೇಶ ಇದರ ಹಿಂದಿದೆ. ಟೂಲ್‍ಕಿಟ್ ವಿಷಯದಲ್ಲಿ ಈಗಾಗಲೇ ಬಿಜೆಪಿ, ಕಾಂಗ್ರೆಸ್ಸಿಗರ ದುರುದ್ದೇಶವನ್ನು ಜನರ ಗಮನಕ್ಕೆ ತಂದಿದೆ. ದಿಗ್ವಿಜಯ್ ಸಿಂಗ್ ಹೇಳಿಕೆಯಿಂದ ಆ ಪಕ್ಷವು ಚೀನಾ- ಪಾಕಿಸ್ತಾನದ ಜೊತೆ ನಿಂತಿರುವುದು ಸ್ಪಷ್ಟಗೊಳ್ಳುತ್ತದೆ ಎಂದು ಅವರು ಆರೋಪಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಮುಖಂಡರು ಕ್ಲಬ್‍ಹೌಸ್ ಆ್ಯಪ್ ಮೂಲಕ ದೇಶವಿರೋಧಿ ಮಾತನ್ನಾಡುವ ನಾಚಿಗೆಗೆಟ್ಟ ಸಂದರ್ಶನ ನೀಡಿದ್ದು, ಆ ಪಕ್ಷವು ಪಾಕಿಸ್ತಾನದ ಪರ ಇರುವುದು ಸ್ಪಷ್ಟಗೊಳ್ಳುತ್ತಿದೆ. ಆದ್ದರಿಂದ ಕಾಂಗ್ರೆಸ್ ನ ಹೆಸರನ್ನು ಇಂಡಿಯನ್ ನ್ಯಾಶನಲ್ ಕಾಂಗ್ರೆಸ್ ಪಾರ್ಟಿ (ಐಎನ್‍ಸಿ) ಹೆಸರಿನ ಬದಲಾಗಿ “ಆ್ಯಂಟಿ ನ್ಯಾಶನಲ್ ಕ್ಲಬ್‍ಹೌಸ್” ಎಂದು ಬದಲಿಸಿಕೊಳ್ಳಲಿ ಎಂದು ಅವರು ಒತ್ತಾಯಿಸಿದ್ದಾರೆ.
ದಿಗ್ವಿಜಯ್ ಸಿಂಗ್ ಅವರು ಈ ಹಿಂದೆ ಪುಲ್ವಾಮಾ ದಾಳಿ ಇದೇನೂ ಗಂಭೀರ ವಿಚಾರವಲ್ಲ ಎಂದು ಹೇಳಿ ಪಾಕಿಸ್ತಾನದ ಕ್ರಮವನ್ನೇ ಸಮರ್ಥಿಸಲು ಮುಂದಾಗಿದ್ದರು. ಇದು ಭಯೋತ್ಪಾದಕರ ದಾಳಿ ಎಂದು ಒಪ್ಪಿಕೊಳ್ಳಲು ಅವರು ಸಿದ್ಧರಿರಲಿಲ್ಲ. ವಿದೇಶದ ಮಾಧ್ಯಮ ಪ್ರತಿನಿಧಿ ಜೊತೆ ಸಂದರ್ಶನದಲ್ಲಿ “ನರೇಂದ್ರ ಮೋದಿ ಅವರ ಅಧಿಕಾರ ಕಳೆದುಕೊಂಡರೆ” ಎಂಬ ಊಹಾತ್ಮಕ ಪ್ರಶ್ನೆಗೆ ದಿಗ್ವಿಜಯ್ ಸಿಂಗ್ ಅವರು ಈ ಉತ್ತರ ನೀಡಿರುವುದು ಕಾಂಗ್ರೆಸ್‍ನ ಪಾಕ್ ಪರ- ಚೀನಾಪರ ನೀತಿಯ ಪ್ರತಿಬಿಂಬದಂತಿದೆ. ಅಲ್ಲದೆ, ಜಮ್ಮು ಕಾಶ್ಮೀರದಲ್ಲಿ ಶಾಂತಿಯುತ ವಾತಾವರಣ ಬೇಡ ಎಂಬುದರ ಪ್ರತೀಕದಂತಿದೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:SSLC ಬಹುಆಯ್ಕೆ ಪ್ರಶ್ನೆ ಮಾದರಿ ಪರೀಕ್ಷೆಗೆ ಬಹಿಷ್ಕಾರ ಎಚ್ಚರಿಕೆ: ವಿದ್ಯಾರ್ಥಿಗಳ ಪ್ರತಿಭಟನೆ
ನರೇಂದ್ರ ಮೋದಿ ಅವರನ್ನು ಅಧಿಕಾರದಿಂದ ಕೆಳಕ್ಕಿಳಿಸಬೇಕು ಮತ್ತು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಈ ಹಿಂದೆ ಕಾಂಗ್ರೆಸ್ ಮುಖಂಡರಾದ ಮಣಿಶಂಕರ್ ಅಯ್ಯರ್ ಅವರೂ ಪಾಕಿಸ್ತಾನದಲ್ಲಿ ಸಂದರ್ಶನವೊಂದರಲ್ಲಿ ತಿಳಿಸಿದ್ದರು. 2014ರಲ್ಲಿ ಅಯ್ಯರ್ ಅವರು ಈ ಸಂದರ್ಶನ ಕೊಟ್ಟಾಗ ಈ ಹೇಳಿಕೆ ಕೇಳಿ ಟಿ.ವಿ. ಆಂಕರ್ ಆತಂಕಗೊಂಡಿದ್ದರು. ಇದರಲ್ಲಿ ನಮ್ಮ ಪಾತ್ರ ಏನಿದೆ ಎಂಬ ಪ್ರಶ್ನೆ ಮುಂದಿಟ್ಟಿದ್ದರು. ಇದು ಕಾಂಗ್ರೆಸ್ಸಿಗರ ಷಡ್ಯಂತ್ರವಲ್ಲದೆ ಮತ್ತೇನು? ಪಾಕಿಸ್ತಾನ ಪರ ಕಾಂಗ್ರೆಸ್ ಇರುವುದಕ್ಕೆ ಇದಕ್ಕಿಂತ ದೊಡ್ಡ ಸಾಕ್ಷಿ ಬೇಕೇ ಎಂದು ಅವರು ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.