Channapatna; ಯೋಗೇಶ್ವರ್‌ಗೆ ಮಣೆ ಹಾಕಲು ಕಾಂಗ್ರೆಸ್ ಸಿದ್ಧ?
Team Udayavani, Oct 21, 2024, 11:59 PM IST
ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಮಣಿಸುವುದಕ್ಕೆ ಎಲ್ಲ ಅಸ್ತ್ರಗಳನ್ನು ಬಳಸುವುದಕ್ಕೆ ಸಿದ್ಧವಾಗಿರುವ ಕಾಂಗ್ರೆಸ್ ಈಗ ಯೋಗೇಶ್ವರ್ ಪಕ್ಷ ಸೇರ್ಪಡೆಗೂ ಮುಹೂರ್ತ ನಿಗದಿಪಡಿಸಿಕೊಂಡಿದೆ. ಬುಧವಾರ ಯೋಗೇಶ್ವರ್ ಪಕ್ಷ ಸೇರ್ಪಡೆ ಹಾಗೂ ಶುಕ್ರವಾರ ನಾಮಪತ್ರ ಸಲ್ಲಿಕೆ ಬಗ್ಗೆ ಕಾಂಗ್ರೆಸ್‌ನಲ್ಲಿ ಸಿದ್ಧತೆಯಾಗಿದೆ.
ಸೋಮವಾರ ತಡರಾತ್ರಿ ನಡೆಯುವ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಇದು ಇತ್ಯರ್ಥವಾಗಲಿದೆ. ಮಂಡ್ಯ ಮೂಲದ ಇಬ್ಬರು ಕಾಂಗ್ರೆಸ್ ಶಾಸಕರು ಈ ಸಂಬಂಧ ಯೋಗೇಶ್ವರ್ ಜತೆ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ಮಂಗಳವಾರ ಬೆಳಗ್ಗೆ ಪ್ರಹ್ಲಾದ್ ಜೋಶಿ ಅವರಿಂದ ಬರುವ ಸಂದೇಶ ಆಧರಿಸಿ ತಮ್ಮ ನಿಲುವು ತೆಗೆದುಕೊಳ್ಳಲಾಗುವುದು ಎಂದು ಯೋಗೇಶ್ವರ್ ಈಗಾಗಲೇ ಕಾಂಗ್ರೆಸ್ ನಾಯಕರಿಗೆ ತಿಳಿಸಿದ್ದಾರೆ. ಒಂದೊಮ್ಮೆ ಅವರು ಪಕ್ಷೇತರವಾಗಿ ನಿಂತರೆ ಪರೋಕ್ಷ ಬೆಂಬಲದೊಂದಿಗೆ ಜೆಡಿಎಸ್ ಮಣಿಸಬೇಕೆಂಬ ಲೆಕ್ಕಾಚಾರವೂ ಕಾಂಗ್ರೆಸ್‌ನಲ್ಲಿ ನಡೆಯುತ್ತಿದೆ. ಒಟ್ಟಾರೆಯಾಗಿ ಕುಮಾರಸ್ವಾಮಿಗೆ ಎದಿರೇಟು ಕೊಡಲು ಬಿಜೆಪಿ, ಕಾಂಗ್ರೆಸ್‌ನ ಒಕ್ಕಲಿಗ ನಾಯಕರು ಸಿ.ಪಿ. ಯೋಗೇಶ್ವರ್ ಅವರನ್ನು ಅಸ್ತ್ರವಾಗಿ ಬಳಸಿಕೊಳ್ಳುತ್ತಿರುವಂತೆ ಕಾಣುತ್ತಿದೆ.
ಕಾದು ನೋಡುವ ತಂತ್ರ
ವಿಧಾನ ಪರಿಷತ್ತಿನ ಸದಸ್ಯತ್ವಕ್ಕೆ ಯೋಗೇಶ್ವರ ರಾಜೀನಾಮೆ ಬೆನ್ನಲ್ಲೇ ಚನ್ನಪಟ್ಟಣ ಉಪ ಚುನಾವಣೆ ಅಖಾಡ ರಂಗೇರಿದ್ದು, ಕಾಂಗ್ರೆಸ್ ಈಗ ಕಾದುನೋಡುವ ತಂತ್ರ ಅನುಸರಿಸುತ್ತಿದೆ. ಈ ಕುರಿತು ಸೋಮವಾರ ಸುದ್ದಿಗಾರರಿಗೆ ಸ್ವತಃ ಮಾಹಿತಿ ನೀಡಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಿ.ಪಿ. ಯೋಗೇಶ್ವರ್ ರಾಜೀನಾಮೆ ವಿಚಾರ ನನಗೆ ಗೊತ್ತಿಲ್ಲ. ಅವರ ಮುಂದಿನ ನಡೆ-ನುಡಿ ಬಗ್ಗೆ ಕಾದು ನೋಡೋಣ ಎಂದು ಹೇಳಿದರು.
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ದೇವೇಗೌಡರ ನಿವಾಸದಲ್ಲಿ ಸಭೆ ನಡೆಸುತ್ತಿರುವ ಬಗ್ಗೆ ಕೇಳಿದಾಗ, ಅವರ ಪಕ್ಷದ ಸಭೆ ಅವರು ಮಾಡುತ್ತಾರೆ. ಅವರ ಕ್ಷೇತ್ರದ ಬಗ್ಗೆ ಚರ್ಚೆ ಮಾಡುತ್ತಿ¨ªಾರೆ. ಅವರ ಸಭೆ ತಪ್ಪು ಎಂದು ಹೇಳಲು ಸಾಧ್ಯವೇ? ನಾವೂ ರವಿವಾರ ಮುಖ್ಯಮಂತ್ರಿ ನಿವಾಸದಲ್ಲಿ ಹಾಗೂ ಕೆಪಿಸಿಸಿ ಕಚೇರಿಯಲ್ಲಿ ಸಭೆ ಮಾಡಿದ್ದೇವೆ. ಅವರೂ ಅದೇ ರೀತಿ ಸಭೆ ಮಾಡುತ್ತಿದ್ದಾರಷ್ಟೇ ಎಂದು ಡಿಕೆಶಿ ಸ್ಪಷ್ಟಪಡಿಸಿದರು.
ಸಂಪರ್ಕದಲ್ಲಿ ಇಲ್ಲ: ಡಿ.ಕೆ. ಶಿವಕುಮಾರ್
ಚಿತ್ರದುರ್ಗ: ಸಿ.ಪಿ. ಯೋಗೇಶ್ವರ್ ನನ್ನ ಸಂಪರ್ಕದಲ್ಲಿಲ್ಲ. ಜೆಡಿಎಸ್ ಹಾಗೂ ಬೇರೆಯವರ ಸಂಪರ್ಕದಲ್ಲಿರಬಹುದು. ಈ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಗೆ ಏನೇನೋ ಮಾಹಿತಿ ಬರುತ್ತಿರಬಹುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಚಳ್ಳಕೆರೆಯಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಲೋಕಸಭೆ ಚುನಾವಣೆಗಿಂತ ಉಪ ಸಮರದಲ್ಲಿ ಗೆಲುವು ಸಾಧಿಸುವ ವಿಶ್ವಾಸ ಹೆಚ್ಚಾಗಿದೆ. ಮಳೆಯಿಂದ ಬೆಂಗಳೂರಿನಲ್ಲಿ ಅವಾಂತರ ಆಗಿದೆ. ಜನ ಗ್ರೌಂಡ್ ಲೆವೆಲ್‌ನಲ್ಲಿ ಮನೆ ಕಟ್ಟಿಕೊಂಡಿದ್ದಾರೆ. ಮಳೆ ಕಡಿಮೆಯಾಗುತ್ತಿದ್ದಂತೆ ಅದಕ್ಕೆ ಪರಿಹಾರ ಹುಡುಕುವ ಕಾರ್ಯ ಆಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.