BY Election: ಕಾಂಗ್ರೆಸ್‌ಗೆ ಚನ್ನಪಟ್ಟಣ, ಶಿಗ್ಗಾವಿಯೇ ಕಗ್ಗಂಟು
ಚನ್ನಪಟ್ಟಣದಿಂದ ಯೋಗೇಶ್ವರ್‌ಗೆ ಚಾನ್ಸ್ ತಪ್ಪಿದರೆ ರಘನಂದನ್ ಅಭ್ಯರ್ಥಿ?
Team Udayavani, Oct 23, 2024, 12:10 AM IST
ಬೆಂಗಳೂರು: ಶಿಗ್ಗಾವಿ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ನಿಂದ ಸ್ಪರ್ಧಿಸಲು ತೀವ್ರ ಪೈಪೋಟಿ ಇದ್ದು, “ಕೈ’ ನಾಯಕರು ಮೂವರ ಹೆಸರನ್ನು ಅಂತಿಮಗೊಳಿಸಿ ಹೈಕಮಾಂಡ್‌ಗೆ ಕಳುಹಿಸಿದ್ದಾರೆ ಎನ್ನಲಾಗಿದೆ.
ಶಾಸಕ ವಿನಯ ಕುಲಕರ್ಣಿ ಪುತ್ರಿ ವೈಶಾಲಿ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಸೋಮಣ್ಣ ಬೇವಿನಮರದ, ಮಾಜಿ ಶಾಸಕ ಮಂಜುನಾಥ ಕುನ್ನೂರು ಪುತ್ನ ರಾಜು ಕುನ್ನೂರು ಅವರ ಹೆಸರನ್ನು ಪಕ್ಷದ ಚುನಾವಣ ಸಮಿತಿಗೆ ಶಿಫಾರಸು ಮಾಡಲಾಗಿದೆ.
ಸಂಡೂರಿನಿಂದ ಸಂಸದ ಇ. ತುಕಾರಾಂ ಪತ್ನಿ ಅನ್ನಪೂರ್ಣ ಅಥವಾ ಪುತ್ರಿ ಸೌಪರ್ಣಿಕಾ ಅವರು ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ. ಇನ್ನು ಯೋಗೇಶ್ವರ್ ಅವರನ್ನು ಪಕ್ಷಕ್ಕೆ ಕರೆತಂದರೆ, ಅವರನ್ನೇ ಚನ್ನಪಟ್ಟಣದಿಂದ ಅಖಾಡಕ್ಕಿಳಿಸುವುದು. ಒಂದು ವೇಳೆ ಸಾಧ್ಯವಾಗದಿದ್ದರೆ, ರಘುನಂದನ್ ರಾಮಣ್ಣ ಅವರನ್ನು ಅಭ್ಯರ್ಥಿಯಾಗಿ ಘೋಷಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಯೋಗೇಶ್ವರ್ ಬರಮಾಡಿಕೊಳ್ಳಲು ಸಿದ್ಧತೆ ಮಾಡಿಕೊಂಡ ಕಾಂಗ್ರೆಸ್?
ಪರಿಷತ್ತಿನ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಯೋಗೇಶ್ವರ್ ಅವರೊಂದಿಗೆ ಬಿಜೆಪಿ ಇನ್ನೂ ಮಾತುಕತೆ ನಡೆಸಿರುವಾಗಲೇ ಆಡಳಿತಾರೂಢ ಕಾಂಗ್ರೆಸ್ ನಾಯಕರು ರತ್ನಗಂಬಳಿಯೊಂದಿಗೆ ಯೋಗೇಶ್ವರ್ ಅವರನ್ನು ಸ್ವಾಗತಿಸಲು ಭೂಮಿಕೆ ಸಿದ್ಧಪಡಿಸಿಕೊಳ್ಳುತ್ತಿದೆ. ಒಂದು ದಿನದ ಹಿಂದಷ್ಟೇ ಕಾದುನೋಡುವ ತಂತ್ರ ಅನುಸರಿಸುತ್ತಿದ್ದ ಕೈ ನಾಯಕರು ಮಂಗಳವಾರ ಇನ್ನೂ ಒಂದು ಹೆಜ್ಜೆ ಮುಂದೆಹೋಗಿ ಪಕ್ಷದ ತತ್ವ-ಸಿದ್ಧಾಂತ ಒಪ್ಪಿ ಬರುವುದಾದರೆ, ಯೋಗೇಶ್ವರ ಅವರಿಗೆ ಸ್ವಾಗತ ಎಂದು ಪರೋಕ್ಷವಾಗಿ ಆಹ್ವಾನ ನೀಡಿದೆ. ಮತ್ತೂಂದೆಡೆ ತೆರೆಮರೆಯಲ್ಲೇ ಸೈನಿಕನಿಗೆ ಗಾಳವನ್ನೂ ಹಾಕುತ್ತಿದೆ. ಆ ಮೂಲಕ ಮೈತ್ರಿಪಕ್ಷಗಳಿಗೆ ಸ್ಪಷ್ಟ ಸಂದೇಶ ರವಾನಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ
Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.