ಕೈ ವಿರುದ್ಧ ಮನೆ ಮನೆಗೆ ಬಿಜೆಪಿ ಆರೋಪ ಪಟ್ಟಿ: ಬಿಎಸ್‌ವೈ
Team Udayavani, Aug 30, 2017, 7:35 AM IST
ಬೆಂಗಳೂರು: ರಾಜ್ಯ ಸರ್ಕಾರದ ಭ್ರಷ್ಟಾಚಾರ ಮತ್ತು ಹಗರಣಗಳ ಬಗ್ಗೆ ದಾಖಲೆಗಳ ಸಹಿತ ಆರೋಪಪಟ್ಟಿ ಬಿಡುಗಡೆ ಮಾಡಲು ಮುಂದಾಗಿರುವ ಬಿಜೆಪಿ, ಈ ಮಾಹಿತಿ ಯನ್ನು ಮನೆ ಮನೆಗಳಿಗೆ ಹಂಚಲು ತೀರ್ಮಾನಿಸಿದೆ. ಈ ನಿಟ್ಟಿನಲ್ಲಿ ಭ್ರಷ್ಟಾಚಾರ, ಹಗರಣಗಳ ಬಗ್ಗೆ ಎಲ್ಲಾ ದಾಖಲೆ ಗಳನ್ನು ಒಳಗೊಂಡಂತೆ ಮಾಹಿತಿ ಗಳನ್ನು ಸಂಗ್ರಹಿಸಲಾಗುತ್ತಿದ್ದು, ಈ ಬಗ್ಗೆ ಚರ್ಚೆಯೂ ನಡೆಯುತ್ತಿದೆ. ಶೀಘ್ರವೇ ಅವುಗಳನ್ನು ಕ್ರೋಢೀಕರಿಸಿ ಆರೋಪಪಟ್ಟಿ ಮುದ್ರಣ ಮಾಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದ ಭೂ ಹಗರಣ, ಸರ್ಕಾರದ ಖಜಾನೆ ಲೂಟಿ ಮಾಡಿ ಹಗಲು ದರೋಡೆ ಮಾಡಿರುವುದು, ಖಜಾನೆಯ ದುರುಪಯೋಗ, ಸಚಿವರಿಂದ ಬೆಲೆಬಾಳುವ ಭೂಮಿ ಕಬಳಿಕೆ ಸೇರಿದಂತೆ ಸರ್ಕಾರದ ಅಕ್ರಮಗಳ ಎಲ್ಲಾ ಸಂಗತಿಗಳು ಈ ಆರೋಪ ಪಟ್ಟಿಯಲ್ಲಿರುತ್ತದೆ ಎಂದು ತಿಳಿಸಿದರು. ಆರೋಪಪಟ್ಟಿಯನ್ನು ರಾಜ್ಯಾದ್ಯಂತ ಮನೆ ಮನೆಗಳಿಗೆ ತಲುಪಿಸುವುದರ ಜತೆಗೆ ಇಷ್ಟೊಂದು ಅಕ್ರಮ ಎಸಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರಿಯಲು ಹಕ್ಕಿಲ್ಲ, ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿ ದೊಡ್ಡ ಮಟ್ಟದ ಹೋರಾಟವನ್ನೂ ಆಯೋಜಿಸ ಲಾಗುವುದು. ನಾಲ್ಕಾರು ದಿನಗಳಲ್ಲಿ ಕಾರ್ಯಕ್ರಮದ ರೂಪುರೇಷೆ ಗಳನ್ನು ನಿರ್ಧರಿಸಿ ಪ್ರಕಟಿಸಲಾಗುವುದು ಎಂದರು.
ಬಿಜೆಪಿ ಹಮ್ಮಿಕೊಂಡಿರುವ ನವ ಕರ್ನಾಟಕ ನಿರ್ಮಾಣ ರಥಯಾತ್ರೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ ಟೀಕೆಗೆ ಪ್ರತಿಕ್ರಿಯಿಸಿಲು ನಿರಾಕರಿಸಿದ ಯಡಿಯೂರಪ್ಪ, ಟೀಕೆಗಳಿಗೆ ಉತ್ತರಿಸುವ ಅಗತ್ಯವಿಲ್ಲ. ಭವ್ಯ ಕರ್ನಾಟಕ ನಿರ್ಮಾಣದ ಪರಿಕಲ್ಪನೆ ಮುಂದಿಟ್ಟುಕೊಂಡು ರಥಯಾತ್ರೆ ಮಾಡುತ್ತಿದ್ದೇವೆ. ಜನರ ಸಂಕಷ್ಟಕ್ಕೆ ಸ್ಪಂದಿಸಿ ಅವರ ಸಮಸ್ಯೆಗಳನ್ನು ನಿವಾರಿಸುವ ಮೂಲಕ ಕರ್ನಾಟಕ ಹೇಗಿರಬೇಕು ಮತ್ತು ಅದಕ್ಕೆ ಏನು ಮಾಡಬೇಕು ಎಂಬುದು ಇದರ ಉದ್ದೇಶ. ಅದನ್ನು ಕಾರ್ಯರೂಪಕ್ಕೆ ತರುತ್ತೇವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
MUST WATCH
ಹೊಸ ಸೇರ್ಪಡೆ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
Protest: ಕಾಶ್ಮೀರ ಚರ್ಚೆ: ಆಕ್ಸ್‌ಫರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ
Chennai: ಲಾಟರಿ ಕಿಂಗ್ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ
Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು
Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್ ಠಾಕ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.