Cheque Bounce; ಸಚಿವ ಮಧು ಅವರಿಗೆ ಕೋರ್ಟ್ ನಿಂದ ಭಾರಿ ದಂಡ,ತೆರದಿದ್ದರೆ ಜೈಲು
Team Udayavani, Dec 29, 2023, 5:50 PM IST
ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಶುಕ್ರವಾರ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ 6 ಕೋಟಿ 96 ಲಕ್ಷದ 70 ಸಾವಿರ ರೂ. ದಂಡ ವಿಧಿಸಿದ್ದು, ದಂಡ ತೆರಲು ವಿಫಲವಾದಲ್ಲಿ 6 ತಿಂಗಳು ಸೆರೆಮನೆ ವಾಸ ಅನುಭವಿಸಬೇಕು ಎಂದು ತೀರ್ಪು ನೀಡಿದೆ.
2011 ರಲ್ಲಿ ಮಧು ಬಂಗಾರಪ್ಪ ಅವರು ನೀಡಿದ್ದ ಚೆಕ್ ಬೌನ್ಸ್ ಆಗಿತ್ತು. ಅವರ ವಿರುದ್ಧ ರಾಜೇಶ್ ಎಕ್ಸ್ ಪೋರ್ಟ್ ಸಂಸ್ಥೆ ದೂರು ದಾಖಲಿಸಿತ್ತು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜೆ.ಪ್ರೀತ್ ತೀರ್ಪು ನೀಡಿದ್ದಾರೆ. 6 ಕೋಟಿ 96 ಲಕ್ಷದ 6 0 ಸಾವಿರ ರೂ. ದಂಡವನ್ನು ದೂರುದಾರ ಕಂಪೆನಿಗೆ ಮತ್ತು 10 ಸಾವಿರ ರೂ. ದಂಡವನ್ನು ಸರಕಾರಕ್ಕೆ ತೆರಬೇಕು ಎಂದು ತೀರ್ಪಿನಲ್ಲಿ ಹೇಳಲಾಗಿದೆ.
ಮಧು ಬಂಗಾರಪ್ಪ ಅವರು ಕೋರ್ಟ್ ನಲ್ಲಿ 50 ಲಕ್ಷ ರೂ. ನೀಡಿ ಉಳಿದ ಹಣ ಪಾವತಿಸಿಲ್ಲ. ಜನವರಿ 30 ರೊಳಗೆ ದಂಡ ಪಾವತಿಸುವುದಾಗಿ ಮಧು ಬಂಗಾರಪ್ಪ ಅವರು ಮುಚ್ಚಳಿಕೆ ಬರೆದು ನೀಡಿದ್ದು, ಕೋರ್ಟ್ ನಿರಾಕರಿಸಿದೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ
Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್ ಹುತಾತ್ಮ
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!
Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ
Mudhol: ಮರಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ; ಓರ್ವ ಸಾವು
Udupi: ಕೊಳಚೆಯಿಂದ ಕಂಗಾಲಾದ ನಿಟ್ಟೂರು, ಕಲ್ಮಾಡಿ
Diesel theft; ಗದಗ: ಕೆ.ಎಸ್.ಆರ್.ಟಿ.ಸಿ. ಬಸ್ ಗಳ ಡೀಸೆಲ್ ಕಳ್ಳತನ
Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್ ಹುತಾತ್ಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.