ರಾಜ್ಯದಲ್ಲಿ ಹಣಕಾಸು ಸ್ಥಿತಿ ಉತ್ತಮ: ಸಿಎಂ ಬಸವರಾಜ ಬೊಮ್ಮಾಯಿ
Team Udayavani, Mar 30, 2022, 6:55 AM IST
ಬೆಂಗಳೂರು: ರಾಜ್ಯದಲ್ಲಿ ಹಣಕಾಸು ಸ್ಥಿತಿ ಉತ್ತಮವಾಗಿದ್ದು, ಪ್ರಸಕ್ತ ಆರ್ಥಿಕ ವರ್ಷದಲ್ಲಿ ಕಳೆದ ಐದು ತಿಂಗಳಿನಿಂದ ಸಂಪನ್ಮೂಲ ಕ್ರೂಢೀಕರಣ ಉತ್ತಮವಾಗಿದೆ.
ಮುಂದಿನ ವರ್ಷವೂ ಎಪ್ರಿಲ್‌ನಿಂದಲೇ ತೆರಿಗೆ ಸಂಗ್ರಹಕ್ಕೆ ಒತ್ತು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಇಲಾಖಾವಾರು ಬೇಡಿಕೆಗಳ ಮೇಲಿನ ಚರ್ಚೆಗೆ ಉತ್ತರಿಸಿದ ಅವರು, ಕೊರೊನಾ ನಡುವೆಯೂ ರಾಜ್ಯ ಸರಕಾರವು ಆರ್ಥಿಕ ಶಿಸ್ತು ಪಾಲಿಸಿದೆ. ಬಜೆಟ್ ಪೂರ್ವದಲ್ಲಿ ಅಮೃತ ನಗರೋತ್ಥಾನ, ರೈತರ ಮಕ್ಕಳಿಗೆ ವಿದ್ಯಾನಿಧಿ ಸೇರಿ ಹಲವು ಯೋಜನೆಗಳನ್ನು ಜಾರಿಗೊಳಿಸಿ ಅಭಿವೃದ್ಧಿಗೂ ತೊಡಕಾಗದಂತೆ ನೋಡಿಕೊಳ್ಳಲಾಗಿದೆ ಎಂದು ತಿಳಿಸಿದರು.
ಪ್ರಸಕ್ತ ಆರ್ಥಿಕ ವರ್ಷದಲ್ಲಿ ತೆರಿಗೆಯಿಂದ 9,500 ಕೋಟಿ ರೂ. ಹಾಗೂ ತೆರಿಗೆಯೇತರ ಮೂಲದಿಂದ 2,000 ಕೋಟಿ ರೂ. ಹೆಚ್ಚುವರಿ ಸಂಗ್ರಹವಾಗಿದೆ ಎಂದು ಹೇಳಿದರು. ಮೋಟಾರು ವಾಹನ ತೆರಿಗೆ ಹೊರತುಪಡಿಸಿ ಉಳಿದ ಮೂಲದಿಂದ ಉತ್ತಮ ತೆರಿಗೆ ಸಂಗ್ರಹವಾಗಿದೆ.
ಇದನ್ನೂ ಓದಿ:ಬಿಸಿಲು ಮತ್ತಷ್ಟು ಹೆಚ್ಚಳ ರಾಯಚೂರಿನಲ್ಲಿ 42.8: ಕರಾವಳಿಯಲ್ಲಿ ಮಳೆ ಸಾಧ್ಯತೆ
ಪ್ರಸಕ್ತ ಸಾಲಿನಲ್ಲಿ 67,100 ಕೋಟಿ ರೂ. ಸಾಲ ಪಡೆಯಬಹುದಾಗಿದ್ದರೂ 63,100 ಕೋಟಿ ರೂ. ಸಾಲವನ್ನಷ್ಟೇ ಪಡೆಯಲಾಗಿದೆ. 2022-23ನೇ ಸಾಲಿನಲ್ಲಿ 2.65 ಲಕ್ಷ ಕೋಟಿ ರೂ. ಮೊತ್ತದ ಬಜೆಟ್ ಮಂಡಿಸಲಾಗಿದ್ದು, ಪ್ರಸಕ್ತ ವರ್ಷಕ್ಕೆ ಹೋಲಿಸಿದರೆ ಶೇ. 7.93ರಷ್ಟು ಹೆಚ್ಚಳವಾಗಿದೆ. ಮುಂದಿನ ಸಾಲಿನಲ್ಲಿ ತೆರಿಗೆಯಿಂದ 1.31 ಲಕ್ಷ ಕೋಟಿ ರೂ., ತೆರಿಗೆಯೇತರ ಮೂಲದಿಂದ 10,941 ಕೋಟಿ ರೂ., ಕೇಂದ್ರ ಸರಕಾರದಿಂದ ಸಹಾಯಧನ ರೂಪದಲ್ಲಿ 17,783 ಕೋಟಿ ರೂ., ಕೇಂದ್ರದ ತೆರಿಗೆ ಪಾಲಿನಲ್ಲಿ 29,783 ಕೋಟಿ ರೂ. ಸಂಗ್ರಹವಾಗುವ ಅಂದಾಜು ಮಾಡಲಾಗಿದೆ ಎಂದರು.
ಧನವಿನಿಯೋಗ-ಅನುಮೋದನೆ
ಬದ್ಧತಾ ವೆಚ್ಚವನ್ನು ಶೇ. 80ಕ್ಕಿಂತ ಕಡಿಮೆಗೊಳಿಸಬೇಕು ಎಂದು ಸಿದ್ದರಾಮಯ್ಯ ಸಲಹೆ ನೀಡಿದರು. ಬಳಿಕ ಧನವಿನಿಯೋಗ ಮಸೂದೆಗೆ ಧ್ವನಿ ಮತದ ಮೂಲಕ ಸದನ ಅನುಮೋದನೆ ನೀಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.