ಮೂರುವರ್ಷ ಯಡಿಯೂರಪ್ಪ ಅವರೇ ಸಿಎಂ: ಸವದಿ, ರವಿ, ಜೊಲ್ಲೆ ಅವರಿಂದ ಗೊಂದಲಕ್ಕೆ ತೆರೆ ಯತ್ನ
Team Udayavani, Jul 30, 2020, 6:25 AM IST
ಬೆಂಗಳೂರು: ಮುಂದಿನ ಮೂರು ವರ್ಷ ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿರಲಿದ್ದಾರೆ ಎಂದು ದಿಲ್ಲಿಗೆ ಭೇಟಿ ನೀಡಿ ಕುತೂಹಲಕ್ಕೆ ಕಾರಣರಾಗಿದ್ದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.
ದಿಲ್ಲಿ ಭೇಟಿ ಪೂರ್ವಯೋಜಿತವಾಗಿದ್ದು, ರಾಜಕೀಯ ಲೆಕ್ಕಾಚಾರ ಇಲ್ಲವೇ ಗೊಂದಲ ಮೂಡಿಸುವ ಅಗತ್ಯವಿಲ್ಲ ಎಂದು ಅವರು ಗೊಂದಲಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.
ಪಕ್ಷ ನನಗೆ ಎಲ್ಲವನ್ನೂ ಕೊಟ್ಟಿದೆ. ನಾನು ಯಾವುದಕ್ಕೂ ಆಸೆ ಪಟ್ಟವನಲ್ಲ. ಯಡಿಯೂರಪ್ಪ ಇರುವವರೆಗೆ ಯಾರೂ ಪ್ರಶ್ನೆ ಮಾಡುವಂತಿಲ್ಲ.
ಮುಂದೆ ಅವರ ನೇತೃತ್ವದಲ್ಲೇ ಚುನಾವಣೆ ಗೆಲ್ಲಲು ಸಂಕಲ್ಪ ಮಾಡುತ್ತೇವೆ. ಉಪಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಲು ದಿಲ್ಲಿಗೆ ತೆರಳಿದ್ದು ಎಂಬುದೂ ಸುಳ್ಳು ಎಂದರು.
ಬುಧವಾರ ಬೆಂಗಳೂರಿಗೆ ಆಗಮಿಸಿದ ಲಕ್ಷ್ಮಣ ಸವದಿ, ಇಲಾಖೆ ಕೆಲಸಕ್ಕೆ ದಿಲ್ಲಿಗೆ ತೆರಳಿದ್ದೆ. ಕಾಕತಾಳೀಯ ಎಂಬಂತೆ ರಾಜ್ಯಪಾಲರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಬಳಿಕ ದಿಲ್ಲಿಗೆ ತೆರಳಿದ್ದರಿಂದ ಹಲವು ವದಂತಿ ಹರಡಿದಾಡಿವೆ ಎಂದರು.
ಎಲ್ಲವೂ ಊಹಾಪೋಹ: ರವಿ
ಸವದಿಯವರ ದಿಲ್ಲಿ ಪ್ರವಾಸಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಈ ಹಂತದಲ್ಲಿ ಮುಖ್ಯಮಂತ್ರಿಗಳ ಬದಲಾವಣೆ ಎಂಬ ವಿಚಾರ ಸತ್ಯಕ್ಕೆ ದೂರವಾದುದು ಎಂದು ಸಚಿವ ಸಿ.ಟಿ. ರವಿ ಹೇಳಿದ್ದಾರೆ. ಸಿಎಂ ಬದಲಾವಣೆ ವಿಚಾರ ಯಾಕೆ ಬಂತು ಎಂಬುದೇ ಗೊತ್ತಿಲ್ಲ ಎಂದರು.
ಯಾವುದೇ ಬೆಳವಣಿಗೆ ನಡೆದಿಲ್ಲ: ಜೊಲ್ಲೆ
ನಾನು ಇಲಾಖೆ ಕಾರ್ಯದ ಹಿನ್ನೆಲೆಯಲ್ಲಿ ದಿಲ್ಲಿಗೆ ಹೋಗಿದ್ದೆ. ಅದನ್ನು ಸಚಿವ ಸ್ಥಾನ ಉಳಿಸಿಕೊಳ್ಳಲು ದಿಲ್ಲಿಗೆ ತೆರಳಿದ್ದಾರೆ ಎಂಬಂತೆ ಬಿಂಬಿಸಲಾಗಿದೆ. ಆ ರೀತಿಯ ಯಾವುದೇ ಬೆಳವಣಿಗೆ ನಡೆದಿಲ್ಲ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.
ಜನ ಹೊಡೆದಾರು: ಪ್ರಮೋದ್ ಮುತಾಲಿಕ್
ಈಗ ಸಿಎಂ ಬದಲಾಯಿಸಿದರೆ ಜನ ಬೆನ್ನು ಹತ್ತಿ ಹೊಡೆಯುತ್ತಾರೆ ಎಂದು ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಅಧ್ಯಕ್ಷರನ್ನು ಭೇಟಿಯಾಗಿದ್ದೆ
ದಿಲ್ಲಿಯಲ್ಲೂ ಬುಧವಾರ ಬೆಳಗ್ಗೆ ಪ್ರತಿಕ್ರಿಯಿಸಿ ಲಕ್ಷ್ಮಣ ಸವದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿಯಾಗಿದ್ದೆ. ಕೇಂದ್ರ ಸರಕಾರ ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಸಿಹಿ ನೀಡಿ ಶುಭ ಕೋರಿದ್ದೇನೆ. ಅವರೊಂದಿಗೆ ರಾಜಕೀಯ ಚರ್ಚಿಸಿಲ್ಲ. ಅಮಿತ್ ಶಾ ಭೇಟಿಗೆ ಅವಕಾಶ ಸಿಕ್ಕಿಲ್ಲ ಎಂದು ತಿಳಿಸಿದರು.
ಎಲೆಕ್ಟ್ರಿಕ್ ಬಸ್
ಎಲೆಕ್ಟ್ರಿಕ್ ಬಸ್ ಕುರಿತಂತೆ ಕೇಂದ್ರ ಸಚಿವ ಪ್ರಕಾಶ್ ಜಾಬ್ಡೇಕರ್ ಜತೆ ಚರ್ಚಿಸಿದ್ದೇನೆ. ಬೆಂಗಳೂರಿಗೆ 300 ಹಾಗೂ ಹುಬ್ಬಳ್ಳಿ- ಧಾರವಾಡಕ್ಕೆ 50 ಎಲೆಕ್ಟ್ರಿಕ್ ಬಸ್ ಕುರಿತಂತೆ ಮಾತುಕತೆ ನಡೆಸಲಾಗಿದೆ ಎಂದರು ಸವದಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Namma Metro; ಡಿಸೆಂಬರ್ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ
Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್”
Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.