ಗಾಂಧೀವಾದಿ ಮೀರಾತಾಯಿ ಕೊಪ್ಪೀಕರ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ
Team Udayavani, Aug 19, 2022, 7:24 PM IST
ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರ್ತಿ, ಗಾಂಧೀವಾದಿ ಮೀರಾತಾಯಿ ಕೊಪ್ಪಿಕರ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಗಾಂಧೀಜಿಯವರ ತತ್ವಾದರ್ಶಗಳನ್ನು ಇಂದಿಗೂ ಪಾಲಿಸುತ್ತ ಬದುಕಿದ ಮೀರಾತಾಯಿ ಕೊಪ್ಪಿಕರ್ ಅವರು ವಿನೋಬಾ ಭಾವೆಯವರ ಅನುಯಾಯಿಯಾಗಿದ್ದರು. ಬಾಗಲಕೋಟೆ ಜಿಲ್ಲೆ ಮುಧೋಳದಲ್ಲಿ ವಾತ್ಸಲ್ಯ ಧಾಮವನ್ನು ಕಟ್ಟಿಕೊಂಡಿದ್ದ ಮೀರಾತಾಯಿ ಅವರು ಸರಳ ಜೀವನ, ಶ್ರಮದಾನ, ಹೈನುಗಾರಿಕೆ ಹಾಗೂ ಸಾವಯವ ಕೃಷಿಯನ್ನೇ ನೆಚ್ಚಿಕೊಂಡು ಜೀವನ ನಡೆಸುತ್ತಿದ್ದರು ಎಂದು ಮುಖ್ಯಮಂತ್ರಿಗಳು ಸ್ಮರಿಸಿಕೊಂಡಿದ್ದಾರೆ.
ರಾಜ್ಯೋತ್ಸವ ಪ್ರಶಸ್ತಿಯೊಂದಿಗೆ ನೀಡಿದ್ದ ನಗದು ಬಹುಮಾನವನ್ನು ಬಡವರಿಗಾಗಿ ಬಳಸಿದ ನಿಸ್ವಾರ್ಥ ವ್ಯಕ್ತಿತ್ವ ಮೀರಾತಾಯಿ ಅವರದ್ದು. ಮೀರಾತಾಯಿ ಕೊಪ್ಪಿಕರ್ ಅವರ ನಿಧನದಿಂದ ಒಬ್ಬ ಶ್ರೇಷ್ಠ ಗಾಂಧೀವಾದಿಯನ್ನು ನಾಡು ಕಳೆಕೊಂಡಿದೆ. ದಯಾಮಯಿ ಭಗವಂತ ಮೃತರ ಆತ್ಮಕ್ಕೆ ಚಿರಶಾಂತಿಯನ್ನು ನೀಡಲಿ” ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ನಮ್ಮ ಕಾರ್ಯಕರ್ತರಿಗೂ ಕರೆ ನೀಡಬೇಕಾಗುತ್ತದೆ: ಡಿ.ಕೆ. ಶಿವಕುಮಾರ್ ಎಚ್ಚರಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.