ರಾ.ಹೆ.ಕಾಮಗಾರಿ ಪೂರ್ಣಗೊಳಿಸಲು ಕ್ರಮ: ನಿತಿನ್ ಗಡ್ಕರಿ
Team Udayavani, Jul 18, 2018, 6:00 AM IST
ಬೆಂಗಳೂರು: ರಾಜ್ಯದಲ್ಲಿ ಚಾಲ್ತಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಭರವಸೆ ನೀಡಿದ್ದಾರೆ. ದೆಹಲಿಯಲ್ಲಿ ತಮ್ಮನ್ನು ಭೇಟಿಯಾದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮತ್ತು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರೊಂದಿಗೆ ಸಮಾಲೋಚನೆ ನಡೆಸಿದ ಕೇಂದ್ರ ಸಚಿವರು, ರಸ್ತೆ ಕಾಮಗಾರಿಗಳು ಪೂರ್ಣಗೊಂಡಿರುವುದನ್ನು ಪುಷ್ಟೀಕರಿಸುವ ಬಳಕೆ ಪ್ರಮಾಣಪತ್ರ ಸಲ್ಲಿಸಿದ ತಕ್ಷಣವೇ ಕೇಂದ್ರದಿಂದ ರಾಜ್ಯದ ಪಾಲಿನ ಅನುದಾನ ಬಿಡುಗಡೆ ಮಾಡುವುದಾಗಿ ತಿಳಿಸಿದರು.
ಕಳೆದ ಜೂ.18ರಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ತಮ್ಮನ್ನು ಭೇಟಿಯಾಗಿದ್ದ ವೇಳೆ, ರಾಜ್ಯದಲ್ಲಿನ ವಿವಿಧ ಹೆದ್ದಾರಿ ಕಾಮಗಾರಿಗಳಿಗೆ ಅಡಚಣೆ ಉಂಟಾಗಿರುವ ಬಗ್ಗೆ ಪ್ರಸ್ತಾಪಿಸಿದ್ದ ನಿತಿನ್ ಗಡ್ಕರಿ, ವಿವಿಧ ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸಿ ಸಮಸ್ಯೆ ಬಗೆಹರಿಸುವಂತೆ ಕೋರಿದ್ದರು. ಅದರಂತೆ ಮಂಗಳವಾರ ಸಮನ್ವಯತೆ ಸಾಧಿಸಲು ರಾಜ್ಯ ಸರ್ಕಾರ ಕೈಗೊಂಡ ಕ್ರಮ
ಗಳನ್ನು ವಿವರಿಸಿದರು.
ಚನ್ನರಾಯಪಟ್ಟಣದಿಂದ ಹೊಳೇನರಸೀಪುರ -ಅರಕಲಗೂಡು-ಕೊಡ್ಲಿಪೇಟೆ ಮಾರ್ಗವಾಗಿ ಮಡಿಕೇರಿ ಸೇರುವ ರಸ್ತೆ, ಬಿಳಿಕೆರೆ-ಕೆ.ಆರ್. ನಗರ- ಹೊಳೆನರಸೀಪುರ- ಹಾಸನ ಮಾರ್ಗವಾಗಿ ಸಾಗುವ ಬೇಲೂರು ರಸ್ತೆ ಸೇರಿ ರಾಜ್ಯದಲ್ಲಿ ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿರುವ
ರಸ್ತೆಗಳ ಪ್ರಗತಿ ಕುರಿತಂತೆ ಮಾಹಿತಿ ನೀಡಿದ ಮುಖ್ಯಮಂತ್ರಿಗಳು, ಬೆಂಗಳೂರು-ಮೈಸೂರು ಹೆದ್ದಾರಿ ವಿಸ್ತರಣೆಗೆ ಹೆಚ್ಚಿನ ಆದ್ಯತೆ ನೀಡುವಂತೆ
ಮನವಿ ಮಾಡಿದರು.
ಅಲ್ಲದೆ, ಕೇಂದ್ರ ರಸ್ತೆ ನಿಧಿಯ (ಸಿಆರ್‌ಎಫ್) ಅನುದಾನದಿಂದ ರಾಜ್ಯದಲ್ಲಿ ಹಲವಾರು ರಸ್ತೆ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಪೂರ್ಣಗೊಳಿಸಲಾಗಿದೆ. ಆದ್ದರಿಂದ ಕೇಂದ್ರದಿಂದ ರಾಜ್ಯದ ಪಾಲಿನ ಅನುದಾನ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳು ಕೋರಿದಾಗ,
ಕಾಮಗಾರಿ ಪೂರ್ಣಗೊಂಡಿರುವುದನ್ನು ಪುಷ್ಟೀಕರಿಸುವ ಬಳಕೆ ಪ್ರಮಾಣಪತ್ರ ಸಲ್ಲಿಸಿದ ತಕ್ಷಣವೇ ಅನುದಾನ ಬಿಡುಗಡೆ ಮಾಡುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿದ್ದಾರೆ.
ಎನ್‌ಎಚ್ 212ರ ಅರಣ್ಯದಲ್ಲಿ ಮೇಲ್ಸೇತುವೆ ನಿರ್ಮಾಣ?
ಕರ್ನಾಟಕ ಮತ್ತು ಕೇರಳವನ್ನು ಬೆಸೆಯುವ ರಾಷ್ಟ್ರೀಯ ಹೆದ್ದಾರಿ 212 ಮಾರ್ಗವು ವನ್ಯಜೀವಿ ಪ್ರದೇಶದಲ್ಲಿ ಹಾದುಹೋಗಿರುವುದರಿಂದ ರಸ್ತೆ ನಿರ್ಮಾಣ ವಿವಾದ ಸುಪ್ರೀಂಕೋರ್ಟ್‌ನಲ್ಲಿದೆ. ಈ ಮಾರ್ಗ ಮೈಸೂರು ಮೂಲಕ ಕೇರಳದ ಕೋಯಿಕ್ಕೋಡ್ ಸಂಪರ್ಕಿಸುತ್ತಿದ್ದು, ಮಾರ್ಗಮಧ್ಯೆ ಬಂಡೀಪುರ ರಾಷ್ಟ್ರೀಯ ಉದ್ಯಾನ ಬರುತ್ತದೆ. ಹೀಗಾಗಿ ಸುಮಾರು 5 ಕಿ.ಮೀ. ಮಾರ್ಗವನ್ನು ಮೇಲ್ಸೆತುವೆ ಹೆದ್ದಾರಿಯನ್ನಾಗಿಸಿ ಕೆಳಭಾಗದಲ್ಲಿ ಪ್ರಾಣಿಗಳಿಗೆ ಅಡಚಣೆ ಇಲ್ಲದಂತೆ ವಾಹನ ಸಂಚರಿಸಲು ಅನುಮಾಡಿಕೊಡಲು ಕೇಂದ್ರ ಸರ್ಕಾರ ಉತ್ಸುಕವಾಗಿದೆ. ಆದ್ದರಿಂದ ಎರಡೂ ರಾಜ್ಯಗಳು ಈ ಬಗ್ಗೆ ಚರ್ಚಿಸಿ ನ್ಯಾಯಾಲಯಕ್ಕೆ ಪ್ರಮಾಣಪತ್ರ ಸಲ್ಲಿಸಿ ವಿವಾದ ಇತ್ಯರ್ಥಪಡಿಸಿದರೆ ಮೇಲ್ಸೇತುವೆ ಮಾರ್ಗ ನಿರ್ಮಿಸಲಾಗುವುದು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಈ ಸಲಹೆಯನ್ನು ಸ್ವಾಗತಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ, ಸಂಬಂಧಿಸಿದವರಿಗೆ ಈ ಕುರಿತು ನಿರ್ದೇಶನ ನೀಡುವುದಾಗಿ ಭರವಸೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Delhi: ಕೇಜ್ರಿವಾಲ್ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ
2025 ‘ಸುಧಾರಣೆಗಳ ವರ್ಷ’ಎಂದು ಘೋಷಣೆ ಮಾಡಿದ ರಕ್ಷಣ ಸಚಿವಾಲಯ
Kaup: ಎಲ್ಲೂರು ಘಟಕದಲ್ಲಿ ಉಚ್ಚಿಲದ ತ್ಯಾಜ್ಯ ವಿಲೇವಾರಿ ಬೇಡಿಕೆ
Udupi: ಹುಲ್ಲು ಕೊಯ್ಯುವ ಯಂತ್ರಕ್ಕೆ ಸಿಲುಕಿದ್ದ ಹೆಬ್ಬಾವಿಗೆ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.