ಆಮ್ಲಜನಕ ಸೌಲಭ್ಯವುಳ್ಳ ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ ಗೆ ಮುಖ್ಯಮಂತ್ರಿ ಚಾಲನೆ

Team Udayavani, May 19, 2021, 5:31 PM IST

ffffffffffffffffffffff

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಜೆಎಸ್‍ಡಬ್ಲ್ಯೂ ಸ್ಟೀಲ್ ಸಂಸ್ಥೆಯ ವತಿಯಿಂದ ಆಯೋಜಿಸಿರುವ 1,000 ಆಮ್ಲಜನಕ ಸೌಲಭ್ಯವುಳ್ಳ ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್’ ಅನ್ನು ಉದ್ಘಾಟಿಸಿದರು.

ವರ್ಚುವಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಕೋವಿಡ್-19ರ ಎರಡನೇ ಅಲೆಯ ನಿಒಯಂತ್ರಣ ಹಾಗೂ ಸೋಂಕಿತರ ಚಿಕಿತ್ಸೆಗಾಗಿ ಸರ್ಕಾರವು ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಸರ್ಕಾರದ ಈ ಪ್ರಯತ್ನದಲ್ಲಿ ಖಾಸಗಿ ಸಂಸ್ಥೆಗಳೂ ಕೈಜೋಡಿಸಿರುವುದು ಅತ್ಯಂತ ಶ್ಲಾಘನೀಯ ಎಂದು ತಿಳಿಸಿದರು.

ಕೋವಿಡ್ 2ನೇ ಅಲೆಯ ಸಂದರ್ಭದಲ್ಲಿ ಇಡೀ ದೇಶದಲ್ಲಿ ಎದುರಾಗಿದ್ದು, ಆಮ್ಲಜನಕದ ಕೊರತೆ. ಇಂತಹ ಸಂಕಟದ ಪರಿಸ್ಥಿತಿಯಲ್ಲಿ ಈ ಕೋವಿಡ್ ಕೇರ್ ಸೌಲಭ್ಯವು ಈ ಭಾಗದ ಸಂಜೀವಿನಿಯಾಗಲಿದೆ ಎಂಬ ಆಶಾಭಾವ ವ್ಯಕ್ತಪಡಿಸಿದರು.

ಈ ಆಸ್ಪತ್ರೆಗೆ ನಿರಂತರವಾಗಿ ಆಮ್ಲಜನಕ ಪೂರೈಸಲು ಜೆ.ಎಸ್.ಡಬ್ಲ್ಯು ಉಕ್ಕಿನ ಸ್ಥಾವರದಿಂದ 4.8 ಕಿ.ಮೀ. ಪೈಪ್‍ಲೈನ್ ವ್ಯವಸ್ಥೆ ಮಾಡಲಾಗಿದ್ದು, ಈ ಮೂಲ ಸೌಕರ್ಯವನ್ನು ದಾಖಲೆಯ ಕೇವಲ 15 ದಿನಗಳಲ್ಲಿ ನಿರ್ಮಿಸಲಾಗಿದೆ ಎಂದ ಮುಖ್ಯಮಂತ್ರಿಯವರು, ರೋಗಿಗಳಿಗೆ ನೇರ ಆಮ್ಲಜನಕ ಪೂರೈಸುವ ಈ ಪರಿಕಲ್ಪನೆಯನ್ನು ಸಾಕಾರಗೊಳಿಸಿದ ಜೆಎಸ್‍ಡಬ್ಲ್ಯು ಅಧ್ಯಕ್ಷ ಸಜ್ಜನ್ ಜಿಂದಲ್ ಅವರಿಗೆ ಅಭಿನಂದನೆಗಳನ್ನು ತಿಳಿಸಿದರು.

ಈ ಆಸ್ಪತ್ರೆಯನ್ನು ಬಳ್ಳಾರಿ ಜಿಲ್ಲಾಡಳಿತ ನಿರ್ವಹಿಸಲಿದೆ. ವೈದ್ಯರು / ತಜ್ಞರು, ನರ್ಸ್, ಅರೆವೈದ್ಯಕೀಯ ಸಿಬ್ಬಂದಿ, ಮೇಲ್ವಿಚಾರಕರು ಮತ್ತು ವೈದ್ಯಕೀಯೇತರ ಸಿಬ್ಬಂದಿಯನ್ನು ಹೊಂದಿದ್ದು, ಅವರು ವಿವಿಧ ಪಾಳಿಗಳಲ್ಲಿ ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದ್ದಾರೆ. ರಾಜ್ಯದಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ ಕೋವಿಡ್ ನಿಯಂತ್ರಣದೊಂದಿಗೆಯೇ, ಸರ್ಕಾರಿ ಆಸ್ಪತ್ರೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.

ಆಸ್ಪತ್ರೆಗಳ ಮೂಲಸೌಕರ್ಯ ಬಲಪಡಿಸುವ ಪ್ರಕ್ರಿಯೆ ಇನ್ನೂ ಮುಂದುವರೆದಿದೆ. ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಆಕ್ಸಿಜನ್ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು ಸಹಾಯಧನ ನೀಡಲಾಗುತ್ತಿದೆ ಎಂದು ವಿವರಿಸಿದರು.

ರಾಜ್ಯದಲ್ಲಿ ಹೆಚ್ಚುತ್ತಿರುವ ಆಮ್ಲಜನಕದ ಬೇಡಿಕೆಯನ್ನು ಸರಿದೂಗಿಸಲು ಮೂರು ಅಂಶಗಳ ಕಾರ್ಯತಂತ್ರವನ್ನು ರೂಪಿಸಿದೆ. ಅದರಂತೆ ಲಿಕ್ವಿಡ್ ಆಕ್ಸಿಜನ್ ಪೂರೈಕೆ ಹೆಚ್ಚಳ, ಆಕ್ಸಿಜನ್ ಜನರೇಟರುಗಳ ಮೂಲಕ ಸ್ಥಳೀಯವಾಗಿ ಆಮ್ಲಜನಕ ಉತ್ಪಾದನೆ ಹೆಚ್ಚಳ ಹಾಗೂ ಆಕ್ಸಿಜನ್ ಕಾನ್ಸಂಟ್ರೇಟರುಗಳು ಹಾಗೂ ಸಿಲಿಂಡರುಗಳನ್ನು ಹೆಚ್ಚಾಗಿ ಖರೀದಿಸುವ ಮೂಲಕ ಆಮ್ಲಜನಕ ಕೊರತೆ ನೀಗಿಸಲು ಪ್ರಯತ್ನಿಸಲಾಗುತ್ತಿದೆ.

ಖಾಸಗಿ ಕಂಪೆನಿಗಳು, ಸ್ವಯಂ ಸೇವಾ ಸಂಸ್ಥೆಗಳು, ಧಾರ್ಮಿಕ ಸಂಸ್ಥೆಗಳು ಹಾಗೂ ನಾಗರಿಕ ಬಂಧುಗಳು ಕೋವಿಡ್ ನಿರ್ವಹಣೆಯಲ್ಲಿ ಕೈಜೋಡಿಸುತ್ತಿರುವುದು ಒಂದು ಮಾದರಿ ಬೆಳವಣಿಗೆಯಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಅವರು ಮಾತನಾಡಿ, ಈ ಕೋವಿಡ್ ಆಸ್ಪತ್ರೆಯು ಸ್ಥಳೀಯ ಜನರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಸಮಾರಂಭದಲ್ಲಿ ಮಾತನಾಡಿದ ಸಜ್ಜನ್ ಜಿಂದಲ್ ಅವರು ಈ ಆಸ್ಪತ್ರೆಯನ್ನು ಬಳ್ಳಾರಿ ಹಾಗೂ ಸುತ್ತಮುತ್ತಲ ಜಿಲ್ಲೆಗಳ ಗ್ರಾಮೀಣ ಜನರಿಗೆ ಅರ್ಪಿಸುವುದಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮೊದಲಾದವರು ಭಾಗವಹಿಸಿದ್ದರು.

ಟಾಪ್ ನ್ಯೂಸ್

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.