ಕೋವಿಡ್ ನಿರ್ವಹಣೆಯಲ್ಲಿ ಶುಶ್ರೂಷಕರ ಸೇವೆಗೆ ಮುಖ್ಯಮಂತ್ರಿ ಶ್ಲಾಘನೆ
Team Udayavani, May 31, 2021, 1:34 PM IST
ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಕೋವಿಡ್ ಕರ್ತವ್ಯ ನಿರ್ವಹಿಸುತ್ತಿರುವ ವಿವಿಧ ಜಿಲ್ಲೆಗಳ ಸ್ಟಾಫ್ ನರ್ಸ್ ಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಕೋವಿಡ್ 19ರ ಈ ಸಂಕಷ್ಟದ ಪರಿಸ್ಥಿತಿಯಲ್ಲಿ ಅಪಾಯವನ್ನು ಲೆಕ್ಕಿಸದೆ, ಸೋಂಕಿತರ ಶುಶ್ರೂಷೆಯಲ್ಲಿ ನಿರತರಾಗಿರುವ ಎಲ್ಲ ಸ್ಟಾಫ್ ನರ್ಸ್‍ಗಳನ್ನು ಮುಕ್ತ ಕಂಠದಿಂದ ಶ್ಲಾಘಿಸಿದರು.
ವೈಯಕ್ತಿಕ ಕಷ್ಟ-ನಷ್ಟಗಳನ್ನು ಬದಿಗೊತ್ತಿ, ಕುಟುಂಬದವರಿಂದ ಅಂತರ ಕಾಯ್ದುಕೊಂಡು ಕಾರ್ಯ ನಿರ್ವಹಿಸುತ್ತಿರುವ ಶುಷ್ರೂಷಕರ ಕರ್ತವ್ಯ ಪ್ರಜ್ಞೆ ಅನುಕರಣೀಯ ಎಂದು ಮುಖ್ಯಮಂತ್ರಿಗಳು ತಿಳಿಸಿದರು..
ಪ್ರಸ್ತುತ ರಾಜ್ಯದಲ್ಲಿ ಒಟ್ಟು 21,574 ಸ್ಟಾಫ್ ನರ್ಸ್‍ಗಳು ಕಾರ್ಯನಿರ್ವಹಿಸುತ್ತಿದ್ದಾರೆ, ಸ್ಟಾಫ್ ನರ್ಸ್‍ಗಳ ಕಾರ್ಯವನ್ನು ಸದಾ ಉತ್ತೇಜಿಸುವ ನಿಟ್ಟಿನಲ್ಲಿ ಮಾಸಿಕ ವೇತನದ ಜೊತೆಗೆ , ಹೆಚ್ಚುವರಿಯಾಗಿ ರೂ 8,000/- ವಿಶೇಷ ಕೋವಿಡ್ ಭತ್ಯೆಯನ್ನೂ ಸಹ ನೀಡಲಾಗುತ್ತಿದೆ ಎಂದರು.
ಕೋವಿಡ್ 19 ನಿಂದ ಮೃತಪಟ್ಟ ಸ್ಟಾಫ್ ನರ್ಸ್‍ಗಳಿಗೆ “ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ವಿಮಾ ಯೋಜನೆ” ಯ ಅಡಿಯಲ್ಲಿ ರೂ 50 ಲಕ್ಷಗಳನ್ನು ನೀಡುವ ಸೌಲಭ್ಯವಿದ್ದು, ಈ ವರೆಗೆ ಇಂತಹ ಆರು ಪ್ರಕರಣಗಳಿಗೆ ಅರ್ಜಿಯನ್ನು ಸ್ವೀಕರಿಸಲಾಗಿದೆ. ಇದರಲ್ಲಿ, ಮೂರು ಪ್ರಕರಣಗಳಿಗೆ ವಿಮಾ ಮೊತ್ತವನ್ನು ನೀಡಲಾಗಿದ್ದು, ಉಳಿದ ಮೂರು ಪ್ರಕರಣಗಳಿಗೆ ಶೀಘ್ರದಲ್ಲಿಯೇ ವಿಮಾ ಮೊತ್ತವನ್ನು ಬಿಡುಗಡೆ ಮಾಡಲಾಗುವುದು. ಕೋವಿಡ್ 19 ನಿಯಂತ್ರಣದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಸ್ಟಾಫ್ ನರ್ಸ್‍ಗಳ ಸುರಕ್ಷತೆಗಾಗಿ ಅಗತ್ಯ ತರಬೇತಿ, ಸ್ವಯಂ ರಕ್ಷಣಾ ಸಾಧನಗಳಾದ ಪಿ ಪಿ ಈ ಕಿಟ್, ಗ್ಲೋವ್ ಗಳು, ಮಾಸ್ಕ್, ಫೇಸ್ ಶೀಲ್ಡ್, ಹ್ಯಾಂಡ್ ಸ್ಯಾನಿಟೈಸರ್ ಗಳನ್ನು ಅಗತ್ಯ ಪ್ರಮಾಣದಲ್ಲಿ ಒದಗಿಸಲಾಗಿದೆ ಎಂದು ತಿಳಿಸಿದರು.
ಮುಖ್ಯಮಂತ್ರಿಯವರು, ಬೀದರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಸಂತೋಷ್, ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ವಹೀದಾ, ದಾವಣಗೆರೆ ಚಿಗಟೇರಿ ಆಸ್ಪತ್ರೆಯ ಎಂ.ಡಿ. ಶಾರದಾ, ಬದಾಮಿ ತಾಲ್ಲೂಕು ಆಸ್ಪತ್ರೆಯ ರೇಣುಕಾ ಗೂಗಿಹಾಳ, ಕೋಲಾರ ಎಸ್.ಎನ್.ಆರ್. ಜಿಲ್ಲಾ ಆಸ್ಪತ್ರೆಯ ಶಶಿಕಲಾ, ರಾಯಚೂರು ವೈದ್ಯಕೀಯ ಕಾಲೇಜಿನ ರಾಚೋಟಿ ವಾರದ, ಚಾಮರಾಜನಗರ ಜಿಲ್ಲಾ ಆಸ್ಪತ್ರೆಯ ಪ್ರದೀಪ್ ಕುಮಾರ್, ವಿಜಯಪುರ ಜಿಲ್ಲಾ ಆಸ್ಪತ್ರೆಯ ಪುಷ್ಪರಾಜ್, ಹರಿಹರ ಸಾರ್ವಜನಿಕ ಆಸ್ಪತ್ರೆಯ ಶ್ವೇತಾ ಆರ್., ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಯ ಸಂಧ್ಯಾರಾಣಿ ಅವರೊಂದಿಗೆ ಸಂವಾದ ನಡೆಸಿದರು.
ಈ ಸಂದರ್ಭದಲ್ಲಿ ಸ್ಟಾಫ್ ನರ್ಸ್ ಗಳ ಕರ್ತವ್ಯ ನಿರ್ವಹಣೆ, ಆರೋಗ್ಯದ ಸ್ಥಿತಿಗತಿ ಮತ್ತಿತರ ವಿಷಯಗಳ ಕುರಿತು ಮುಖ್ಯಮಂತ್ರಿಗಳು ಚರ್ಚಿಸಿದರು. ವೈದ್ಯಕೀಯ ಶಿಕ್ಷಣ ಇಲಾಖೆ ವ್ಯಾಪ್ತಿಯ ಸಿಬ್ಬಂದಿಗೂ ರಿಸ್ಕ್ ಅಲೊವೆನ್ಸ್ ಒದಗಿಸುವಂತೆ ಬೀದರ್ನ ಸಂತೋಷ್ ಅವರು ಮಾಡಿದ ಮನವಿಗೆ ಉತ್ತರಿಸಿದ ಮುಖ್ಯಮಂತ್ರಿಗಳು ಈಗಾಗಲೇ ಈ ಕುರಿತು ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದರು.
ವೆನ್ಲಾಕ್ ಆಸ್ಪತ್ರೆಯ ವಹೀದಾ ಅವರು ಎರಡನೇ ಅಲೆಯ ಸಂದರ್ಭದಲ್ಲಿ ಯುವಕರು, ಮಧ್ಯವಯಸ್ಕರು ಹೆಚ್ಚಿನ ಸಂಖ್ಯೆಯಲ್ಲಿ ಬಲಿಯಾಗುತ್ತಿದ್ದಾರೆ. ಮೊದಲ ಅಲೆಯ ಸಂದರ್ಭದಲ್ಲಿ ಇತರ ಆರೋಗ್ಯ ಸಮಸ್ಯೆಗಳಿರುವ ಹಿರಿಯ ನಾಗರಿಕರ ಮರಣ ಪ್ರಮಾಣ ಹೆಚ್ಚಾಗಿತ್ತು ಎಂದು ತಮ್ಮ ಅನುಭವವನ್ನು ಹಂಚಿಕೊಂಡರು. ಜೊತೆಗೆ ಕೋವಿಡ್ ಕರ್ತವ್ಯ ನಿರ್ವಹಿಸುತ್ತಿರುವ ನಮ್ಮ ಮನೆಯವರಿಗೆ ಸೋಂಕು ತಗಲುವ ಅಪಾಯ ಹೆಚ್ಚಿರುವುದರಿಂದ ಕುಟುಂಬದವರಿಗೂ ವ್ಯಾಕ್ಸಿನ್ ಒದಗಿಸುವಂತೆ ಮನವಿ ಮಾಡಿದರು.
ದಾವಣಗೆರೆಯ ಚಿಗಟೇರಿ ಆಸ್ಪತ್ರೆಯ ಶಾರದಾ ಅವರು ಕೋವಿಡ್ ಸೋಂಕಿತರ ಹೆರಿಗೆ ಮಾಡಿಸಿದ ಅನುಭವವನ್ನು ಹಂಚಿಕೊಂಡರು. ಒಂದು ತಿಂಗಳಿಗೆ ಸುಮಾರು 8 ಸೋಂಕಿತರಿಗೆ ಶಸ್ತ್ರ ಚಿಕಿತ್ಸೆ ಹಾಗೂ 10-12 ಸೋಂಕಿತರಿಗೆ ಸಹಜ ಹೆರಿಗೆಗಳಾಗುತ್ತಿದ್ದು, ತಮ್ಮ ಆಸ್ಪತ್ರೆಯಲ್ಲಿ ಇಂತಹ ತಾಯಿ-ಮಗುವಿನ ಮರಣ ಪ್ರಮಾಣ ಕಡಿಮೆ ಇದೆ ಎಂದು ತಿಳಿಸಿದರು.
ಎರಡೂವರೆ ತಿಂಗಳ ಹಿಂದಷ್ಟೇ ಪತಿಯನ್ನು ಕಳೆದುಕೊಂಡ ಬದಾಮಿ ತಾಲ್ಲೂಕು ಆಸ್ಪತ್ರೆಯ ರೇಣುಕಾ ಗೂಗಿಹಾಳ ಅವರಿಗೆ ಸಾಂತ್ವನ ಹೇಳಿದ ಮುಖ್ಯಮಂತ್ರಿಗಳು ಮಗುವಿನ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಸಲಹೆ ನೀಡಿದರು.
ಜನರು ಭಾವನಾತ್ಮಕವಾಗಿ ವರ್ತಿಸುವುದರಿಂದ, ಕರ್ತವ್ಯ ನಿರ್ವಹಣೆಗೆ ಅಡೆತಡೆಯಾಗುತ್ತದೆ. ಆದರೆ ಮೇಲಾಧಿಕಾರಿಗಳು ಇಂತಹ ಸಮಸ್ಯೆಗಳನ್ನು ಬಗೆಹರಿಸಿ, ಧೈರ್ಯ ತುಂಬುತ್ತಾರೆ ಎಂದು ಕೋಲಾರದ ಎಸ್. ಎನ್. ಆರ್. ಆಸ್ಪತ್ರೆಯ ಶಶಿಕಲಾ ಅವರು ತಿಳಿಸಿದರು.
ರಾಯಚೂರು ವೈದ್ಯಕೀಯ ಕಾಲೇಜಿನ ರಾಚೋಟಿ ವಾರದ ಅವರು ವೈದ್ಯಕೀಯ ಶಿಕ್ಷಣ ಇಲಾಖೆ ವ್ಯಾಪ್ತಿಯ ಸಿಬ್ಬಂದಿಗೆ ಜ್ಯೋತಿ ಸಂಜೀವಿನಿ ಸೌಲಭ್ಯ ವಿಸ್ತರಿಸುವ ಮೂಲಕ, ಕುಟುಂಬದವರು ಅನಾರೋಗ್ಯಕ್ಕೆ ಒಳಗಾದಾಗ ಚಿಕಿತ್ಸೆ ಒದಗಿಸಲು ನೆರವಾಗುವಂತೆ ಮನವಿ ಮಾಡಿದರು. ಈ ಕುರಿತು ಕ್ರಮ ವಹಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು. ನರ್ಸಿಂಗ್ ಸಿಬ್ಬಂದಿ ಲಸಿಕೆ ಪಡೆದ ಕಾರಣ, ಎರಡನೇ ಅಲೆಯಲ್ಲಿ ಸೋಂಕಿತರಾದ ಸ್ಟಾಫ್ ನರ್ಸ್ ಗಳ ಪ್ರಮಾಣ ಅತ್ಯಂತ ಕಡಿಮೆ. ಆದ್ದರಿಂದ ಸಾರ್ವಜನಿಕರ ಲಸಿಕೆ ಅಭಿಯಾನವನ್ನೂ ಸಹ ಬಲಪಡಿಸುವಂತೆ ಮನವಿ ಮಾಡಿದರು.
ಚಾಮರಾಜನಗರದ ಜಿಲ್ಲಾ ಆಸ್ಪತ್ರೆಯ ಪ್ರದೀಪ್ ಕುಮಾರ್ ಅವರು, ಸೋಂಕಿತರು ಸಕಾಲದಲ್ಲಿ ಚಿಕಿತ್ಸೆ ಪಡೆಯದೆ, ಆಸ್ಪತ್ರೆಗೆ ದಾಖಲಾಗದೆ ಸಾವನ್ನಪ್ಪುತ್ತಾರೆ. ಇದನ್ನು ತಪ್ಪಿಸಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು. ಈಗಾಗಲೇ ಗ್ರಾಮೀಣ ಪ್ರದೇಶದ ಸೋಂಕಿತರನ್ನು ಕೋವಿಡ್ ಕೇರ್ ಸೆಂಟರುಗಳಿಗೆ ದಾಖಲಿಸಲಾಗುತ್ತಿದ್ದು, ಆ ಮೂಲಕ ಸಕಾಲದಲ್ಲಿ ಚಿಕಿತ್ಸೆ ನೀಡುವುದನ್ನು ಖಾತರಿಪಡಿಸಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ವಿಜಯಪುರ ಜಿಲ್ಲೆಯ ಪುಷ್ಪರಾಜ್ ಅವರು ಸೋಂಕಿತರಿಗೆ ಔಷಧೋಪಚಾರದ ಜೊತೆಗೆ ಸ್ಥೈರ್ಯ ಮೂಡಿಸುವ ಮೂಲಕ ಚಿಕಿತ್ಸೆ ನೀಡಲಾಗುತ್ತದೆ. ಆಸ್ಪತ್ರೆಯಿಂದ ಬಿಡುಗಡೆ ಹೊಂದುವಾಗ ಅವರು ತೋರಿಸುವ ಕೃತಜ್ಞತೆಯ ಭಾವ ಸಾರ್ಥಕತೆಯನ್ನು ಮೂಡಿಸುತ್ತದೆ ಎಂದು ತಿಳಿಸಿದರು.
ಹರಿಹರ ಸಾರ್ವಜನಿಕ ಆಸ್ಪತ್ರೆಯ ಶ್ವೇತಾ ಆರ್. ಅವರು ನರ್ಸಿಂಗ್ ಸಿಬ್ಬಂದಿ ಸತತ ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುವ ಹಾಗೂ ಹತ್ತಿರದಿಂದ ಸಾವು-ನೋವುಗಳನ್ನು ಕಾಣುವ ಹಿನ್ನೆಲೆಯಲ್ಲಿ ಅವರಿಗೆ ಆಪ್ತ ಸಮಾಲೋಚನೆ ಸೌಲಭ್ಯ ಒದಗಿಸಬೇಕು ಎಂದು ಮನವಿ ಮಾಡಿದರು.
ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಯ ಸಂಧ್ಯಾರಾಣಿ ಅವರು ತಮ್ಮ ಆಸ್ಪತ್ರೆಯ ಸಿಬ್ಬಂದಿ ಕೊರತೆ ನೀಗಿಸುವಂತೆ ಮನವಿ ಮಾಡಿದರು.
ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್, ಆರೋಗ್ಯ ಇಲಾಖೆ ಆಯುಕ್ತ ಡಾ. ಕೆ.ವಿ. ತ್ರಿಲೋಕಚಂದ್ರ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.