ವಸತಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಮುಖ್ಯಮಂತ್ರಿಗಳು
Team Udayavani, Jun 1, 2020, 5:13 PM IST
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ವಸತಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಜರುಗಿತು. ಪ್ರಗತಿಯಲ್ಲಿರುವ 9.74 ಲಕ್ಷ ಮನೆಗಳನ್ನು ಪೂರ್ಣಗೊಳಿಸಲು ಒಟ್ಟು 10,194 ಕೋಟಿ ರೂ.ಗಳ ಅನುದಾನದ ಮಂಜೂರಾತಿ ಬಗ್ಗೆ ಕ್ರಮವಹಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ನಕಲಿ ದಾಖಲೆಗಳನ್ನು ನೀಡಿ ಮನೆ ಪಡೆದುಕೊಳ್ಳುವ ಪ್ರಕರಣಗಳನ್ನು ಪತ್ತೆಹಚ್ಚಿ ಸರ್ಕಾರಕ್ಕೆ 8000 ಕೋಟಿ ರೂ.ಗಳನ್ನು ಉಳಿತಾಯ ಮಾಡಿರುವುದು ಶ್ಲಾಘನೀಯ ಎಂದು ಮುಖ್ಯಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿ ವಸತಿ ಯೋಜನೆಗಳ ಪಾರದರ್ಶಕ ಅನುಷ್ಠಾನಕ್ಕೆ ತಾಂತ್ರಿಕ ನೂನ್ಯತೆಗಳನ್ನು ಸರಿಪಡಿಸಿ, ಅನುದಾನ ದುರುಪಯೋಗ ತಡೆಯಲು ಅಭಿವೃದ್ಧಿಪಡಿಸಲಾಗಿರುವ ವಿಜಿಲ್ ಆ್ಯಪ್ ತಂತ್ರಾಂಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಕೊಡಗು ಪುನರ್ವಸತಿ ಯೋಜನೆಯಡಿ 115 ಮನೆಗಳನ್ನು ಹಂಚಿಕೆ ಮಾಡಲಾಗಿದೆ. ಪೂರ್ಣಗೊಂಡಿರುವ 405 ಮನೆಗಳನ್ನು ಶೀಘ್ರವಾಗಿ ಫಲಾನುಭವಿಗಳಿಗೆ ಹಸ್ತಾಂತರಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗ್ರಾಮೀಣ ಪ್ರದೇಶಗಳಲ್ಲಿ 1.24 ಲಕ್ಷ ನಿವೇಶನಗಳನ್ನು ಬಡವರಿಗೆ ನೀಡಲು ಗುರುತಿಸಲಾಗಿದ್ದು, 100 ಕೋಟಿ ರೂ.ಗಳು ಲಭ್ಯವಿದೆ. ನಿವೇಶನಗಳನ್ನು ಅಭಿವೃದ್ಧಿಪಡಿಸಿ ಹಂಚಿಕೆ ಮಾಡಲು ಸುಮಾರು 1000 ಕೋಟಿ ರೂ.ಗಳ ಅವಶ್ಯಕತೆ ಇದೆ ಎಂದು ವಸತಿ ಸಚಿವ ವಿ.ಸೋಮಣ್ಣ ವಿವರಿಸಿದರು.
ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ) ಸರ್ಕಾರದ ಜಮೀನಿನಲ್ಲಿರುವ ಕೊಳಚೆ ಪ್ರದೇಶಗಳ ನಿವಾಸಿಗಳಿಗೆ ಹಕ್ಕುಪತ್ರ ನೀಡಬೇಕಿದೆ. ಕೊಳಚೆ ಅಭಿವೃದ್ಧಿ ಮಂಡಳಿಗೆ ಬದಲಾಗಿ ರಾಜೀವ್ ಗಾಂಧಿ ವಸತಿ ನಿಗಮದಲ್ಲಿ ವಿಲೀನಗೊಳಿಸಿದರೆ ಕೊಳಗೇರಿಗಳ ಸಮಸ್ಯೆಗಳನ್ನು ವ್ಯವಸ್ಥಿತವಾಗಿ ಬಗೆಹರಿಸಬಹುದಾಗಿದೆ ಎಂದು ಸಚಿವರು ಸಲಹೆ ನೀಡಿದರು.
ಕರ್ನಾಟಕ ಗೃಹ ಮಂಡಳಿ ವತಿಯಿಂದ ಆನೇಕಲ್ ತಾಲ್ಲೂಕು ಜಿಗಣಿ ಹೋಬಳಿಯ ಕೋನಸಂದ್ರ, ಬೊಮ್ಮಂಡಹಳ್ಳಿ, ಕಾಡುಜಕ್ಕನಹಳ್ಳಿ ಮತ್ತು ಕಸಬಾ ಹೋಬಳಿಯ ಇಂಗ್ಲವಾಡಿ, ಬಗ್ಗನದೊಡ್ಡಿ ಗ್ರಾಮಗಳಲ್ಲಿ ಪ್ರಧಾನಮಂತ್ರಿ ವಸತಿ ಬಡಾವಣೆಯನ್ನು 1264 ಕೋಟಿ ರೂ,ಗಳ ಅಂದಾಜು ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು.
ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದಡಿ 4000 ಕ್ಕಿಂತ ಹೆಚ್ಚು ದೂರಗಳು ದಾಖಲಾಗಿದ್ದು ಸುಮಾರು 700 ಕ್ಕೂ ಹೆಚ್ಚು ದೂರುಗಳನ್ನು ವಿಲೇವಾರಿ ಮಾಡಲಾಗಿದೆ ಹಾಗೂ ದೂರು ವಿಲೇವಾರಿಗೆ ಹೆಚ್ಚಿನ ಸಿಬ್ಬಂದಿಯ ಅಗತ್ಯವಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಆರಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್ ಪ್ರಸಾದ್, ವಸತಿ ಇಲಾಖೆ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ, ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ
Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್
Congress; ಸುರ್ಜೇವಾಲ ವಿರುದ್ಧ ಸಚಿವರಿಂದಲೇ ದೂರು?: ಸತೀಶ್ ಜಾರಕಿಹೊಳಿ ಹೇಳಿದ್ದೇನು?
BJP Rift; ಯತ್ನಾಳ್ ಪರ ಬ್ಯಾಟಿಂಗ್ ಮಾಡಿದ ಶಾಸಕ ಬಿ.ಪಿ. ಹರೀಶ್
ಜ.21 ರಂದು ಬೆಳಗಾವಿ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ
MUST WATCH
ಹೊಸ ಸೇರ್ಪಡೆ
Padubidri: ಸ್ಕೂಟಿಗೆ ಈಚರ್ ವಾಹನ ಢಿಕ್ಕಿ; ಸವಾರನಿಗೆ ಗಾಯ
BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ
R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು
ಅಖಿಲ ಭಾರತ ಅಂತರ್ ವಿ.ವಿ.ವೇಟ್‌ಲಿಫ್ಟಿಂಗ್:ಮಂಗಳೂರು ವಿವಿ ರನ್ನರ್ ಅಪ್
Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.