Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ
ದಾದಾಪೀರ್ ಛಿಲ್ಲಾ , ಗಾದಿಯನ್ನು ಬದಲಿಸಲು ಈ ಹುನ್ನಾರ: ಆರೋಪ
Team Udayavani, Nov 25, 2024, 6:32 AM IST
ಚಿಕ್ಕಮಗಳೂರು: ಗುರು ದತ್ತಾ ತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಗುಹೆಯ ಎಡಭಾಗದಲ್ಲಿರುವ ಮಾಮಜಿಗ್ನಿ ಮತ್ತು ಬಲಭಾಗಲ್ಲಿ ಛಿಲ್ಲಾ ಹಾಗೂ ಗಾದಿ (ಧ್ಯಾನ ಸ್ಥಳ ಮತ್ತು ಪೀಠ)ಗೆ ಕೆಲವರು ಇತ್ತೀಚೆಗೆ ಕುಂಕುಮ ಲೇಪಿಸಿ ಸಮುದಾಯದವರ ಭಾವನೆಗೆ ಘಾಸಿ ಮಾಡಿದ್ದಾರೆ ಎಂದು ಬಾಬಾಬುಡನ್ ವಂಶಸ್ಥ ಸೈತದ್ ಫಕ್ರುದ್ದೀನ್ ಶಾ ಖಾದ್ರಿ ಆರೋಪಿಸಿದ್ದಾರೆ.
ಈ ಕುರಿತು ಪ್ರಕಟನೆ ನೀಡಿರುವ ಅವರು, ಈ ಆಚರಣೆ ಹಿಂದೆ ದಾದಾಪೀರ್ ಛಿಲ್ಲಾ ಹಾಗೂ ಗಾದಿಯನ್ನು ಬದಲಾಯಿಸುವ ಸಂಚು ಅಡಗಿದೆ. ನ್ಯಾಯಾಲಯದ ಆದೇಶ ಉಲ್ಲಂಘಿಸಿದವರ ವಿರುದ್ಧ ಜಿಲ್ಲಾಡಳಿತ ಮೃದು ಧೋರಣೆ ಅನುಸರಿಸುತ್ತಿದ್ದು, ಹೊಸ ಆಚರಣೆ ತಡೆಯುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.
ಗುರುದತ್ತಾತ್ರೇಯ ಬಾಬಾಬುಡನ್ ದರ್ಗಾವು ಮುಹ ಮ್ಮದೀಯ ಸಂಸ್ಥೆ ಎಂದು ಮುಜ ರಾಯಿ ಇಲಾಖೆಯ ಗೆಜೆಟಿ ಯರ್ ನಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ. ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದ ಮುಖಂಡರು ಗಮನಿಸಬೇಕಿದೆ ಎಂದು ತಿಳಿಸಿದ್ದಾರೆ.
ಶಾ ಖಾದ್ರಿ ವಂಶಸ್ಥರ ರಗಳೆ: ಮಹೇಂದ್ರ
ದತ್ತ ಪೀಠದಲ್ಲಿ ಕಳೆದ 2 ವರ್ಷಗಳಿಂದ ಯಾವುದೇ ಅಡೆತಡೆ ಯಿಲ್ಲದೆ ಕೋರ್ಟ್ ಆದೇಶದಂತೆ ನಡೆದುಕೊಂಡು ಬರುತ್ತಿದ್ದ ನಿತ್ಯ ಪೂಜಾ ಕಾರ್ಯಗಳಿಗೆ ನ. 19ರಂದು ಶಾ ಖಾದ್ರಿ ವಂಶಸ್ಥರೆಂದು ಕೊಂಡ ಒಂದು ಗುಂಪು ಪೊಲೀಸ್ ಬಿಗಿ ಭದ್ರತೆ ನಡುವೆಯೂ ದತ್ತಪೀಠದ ಆವರಣದೊಳಗೆ ನುಗ್ಗಿ ಅರ್ಚಕರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದೆ. ಕೂಡಲೇ ಜಿಲ್ಲಾಡಳಿತ ಈ ಗುಂಪಿನ ಮೇಲೆ ಸ್ವಯಂ ಪ್ರೇರಿತ ದೂರು ದಾಖಲಿಸಿ ಕ್ರಮ ಕೈಗೊಳ್ಳಬೇಕೆಂದು ವಿಶ್ವ ಹಿಂದೂ ಪರಿಷತ್ ಹಾಸನ ವಿಭಾಗ ಸಹ ಕಾರ್ಯದರ್ಶಿ ಆರ್.ಡಿ. ಮಹೇಂದ್ರ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್ಡಿಕೆ ವ್ಯಂಗ್ಯ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್ಡಿಕೆ ವ್ಯಂಗ್ಯ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.