ಮುಂಬಯಿ ಮಹಿಳೆಯರು, ಮಕ್ಕಳಿಗೆ ಸುರಕ್ಷಿತವಲ್ಲ?
Team Udayavani, Jan 19, 2019, 4:04 PM IST
ಮುಂಬಯಿ: ಮುಂಬಯಿಯನ್ನು ಮಹಿಳೆಯರಿಗೆ ಸುರಕ್ಷಿತವಾದ ನಗರವೆಂದು ಪರಿಗಣಿಸ ಲಾಗುತ್ತದೆ, ಆದರೆ ಇದೀಗ ದೇಶದ ವಾಣಿಜ್ಯ ರಾಜಧಾ ನಿಯು ದಿಲ್ಲಿಯಂತೆಯೇ ಮತ್ತೂಂದು ಅಸುರಕ್ಷಿತ ನಗರವಾಗುವ ಕಡೆಗೆ ಸಾಗುತ್ತಿದೆ. ನಗರವು ಕಳೆದ 5 ವರ್ಷಗಳಲ್ಲಿ ನಿರಂತರವಾಗಿ ಏರಿಕೆಯಾಗುತ್ತಿರುವ ಅತ್ಯಾಚಾರ ಪ್ರಕರಣಗಳ ಕಳವಳಕಾರಿ ಪ್ರವೃತ್ತಿಗೆ ಸಾಕ್ಷಿ ಯಾಗುತ್ತಿದೆ. ವಾಸ್ತವವಾಗಿ, ನಗರದಲ್ಲಿ ಅತ್ಯಾಚಾರ ಪ್ರಕರಣಗಳು ದ್ವಿಗುಣಗೊಂಡಿವೆ. ಆರ್‌ಟಿಐ ಕಾರ್ಯ ಕರ್ತ ಶಕೀಲ್ ಅಹ್ಮದ್ ಶೇಖ್ ಅವರು ಮಾಹಿತಿ ಹಕ್ಕು ಕಾಯಿದೆ ಅಡಿಯಲ್ಲಿ ಸಲ್ಲಿಸಿದ ಅರ್ಜಿ ಯೊಂದಕ್ಕೆ ಪ್ರತಿಕ್ರಿಯೆಯಾಗಿ ಮುಂಬಯಿ ಪೊಲೀಸರು ಒದಗಿಸಿದ ಮಾಹಿತಿಯಲ್ಲಿ ಈ ಆತಂಕಕಾರಿ ಅಂಶ ಬೆಳಕಿಗೆ ಬಂದಿದೆ.
ಲಭ್ಯವಾಗಿರುವ ಮಾಹಿತಿಯ ಪ್ರಕಾರ, 2013ರಲ್ಲಿ ನಗರವು 388 ಅತ್ಯಾಚಾರ ಪ್ರಕರಣಗಳನ್ನು ದಾಖಲಿಸಿಕೊಂಡಿತ್ತು. ಆದರೆ, 2017ರಲ್ಲಿ ಈ ಸಂಖ್ಯೆಯು ಮುಂಬಯಿಯಾದ್ಯಂತ ಇಂತಹ 751 ಪ್ರಕರಣಗಳು ವರದಿಯಾಗು ವುದರೊಂದಿಗೆ ದ್ವಿಗು ಣಗೊಂಡಿದೆ. ನಗರ ದಲ್ಲಿ ಅಪ್ರಾಪ್ತ ವಯಸ್ಕರು ಕೂಡ ಸುರಕ್ಷಿತವಾಗಿಲ್ಲ. 2018ರ ಮೊದಲ 9 ತಿಂಗಳಲ್ಲೇ ಪೋಕೊÕà ಕಾಯಿದೆಯ ಅಡಿಯಲ್ಲಿ ಒಟ್ಟು 842 ಪ್ರಕರಣಗಳು ದಾಖಲಾಗಿವೆ. ಅಂಕಿಅಂಶಗಳ ಪ್ರಕಾರ ಮುಂಬಯಿಯಲ್ಲಿ 2013ರ ನವೆಂಬರ್‌ನಿಂದ 2018ರ ತನಕ 4,046 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ.
ಮುಂಬಯಿ ಪೊಲೀಸ್ ವೆಬ್‌ಸೈಟ್‌ನಲ್ಲಿ ನೀಡಲಾ ಗಿರುವ ಮಾಹಿತಿಯ ಪ್ರಕಾರ 2018ರಲ್ಲಿ ಜನವರಿಯಿಂದ ಸೆಪ್ಟಂಬರ್ ತನಕ ಒಟ್ಟು 651 ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದವು. ನಗರದಲ್ಲಿ 2018ರಲ್ಲಿ ನವೆಂಬರ್ ತನಕ 2,401 ಲೈಂಗಿಕ ಕಿರುಕುಳದ ಪ್ರಕರಣಗಳು ದಾಖಲಾಗಿವೆ ಎಂದು ವರದಿ ಮಾಹಿತಿ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.