ಚೀನಾ ಉತ್ಪನ್ನ: ಎಚ್ಡಿಕೆ ಟಾಂಗ್
Team Udayavani, Jun 20, 2020, 7:37 AM IST
ಬೆಂಗಳೂರು: ಗಡಿಯಲ್ಲಿ ಅಮಾಯಕರ ಬಲಿದಾನದ ನಂತರ ಕೆಲವರಿಗೆ ಚೀನಾದ ಉತ್ಪನ್ನಗಳನ್ನು ಬಹಿಷ್ಕರಿಸುವ ಬಗ್ಗೆ ಜ್ಞಾನೋದಯವಾಗಿದೆ. ಆದರೆ, ನನ್ನ ಅಧಿಕಾರದ ಅವಧಿಯಲ್ಲಿ ಈ ಬಗ್ಗೆ ಗಂಭೀರವಾಗಿ ಯೋಚಿಸಲಾಗಿತ್ತು. ಚೀನಾ ವಸ್ತುಗಳನ್ನು ಬಹಿಷ್ಕರಿಸುವುದು ಘೋಷವಾಕ್ಯದಷ್ಟು ಸುಲಭವಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿ, ಕಾಂಪೀಟ್ ವಿತ್ ಚೈನಾ ಯೋಜನೆ ಜಾರಿಗೆ ತರಲು ನನ್ನ ನೇತೃತ್ವದ ಮೈತ್ರಿ ಸರ್ಕಾರದ ಸಂಪುಟ ಸಭೆಯಲ್ಲಿ ತೀರ್ಮಾನಿಸಿ ಇದಕ್ಕಾಗಿ 9 ಜಿಲ್ಲೆಗಳಲ್ಲಿ ಕ್ಲಸ್ಟರ್ ಸ್ಥಾಪಿಸಲಾಗಿತ್ತು. ಸ್ಥಳೀಯರಿಗೆ ಉದ್ಯೋಗ, ಚೀನಾಕ್ಕೆ ಸಿಕ್ಕಿರುವ ಮಾರುಕಟ್ಟೆ ಕಸಿದು ನಮ್ಮವರಿಗೆ ಕೊಡುವುದು, ಆ ಮೂಲಕ ಚೀನಾ ಉತ್ಪನ್ನಗಳನ್ನು ಹೊರ ಹಾಕುವುದು ನನ್ನ ಉದ್ದೇಶವಾಗಿತ್ತು.
ಆದರೆ, ಆ ಯೋಜನೆಯನ್ನು ಈಗಿನ ಸರ್ಕಾರ ಮುಂದುವರಿಸಿದೆಯೋ, ಇಲ್ಲವೋ ತಿಳಿಯದು ಎಂದು ಹೇಳಿದ್ದಾರೆ. ಕೋವಿಡ್ 19 ಸಂಕಷ್ಟದ ಸಮಯದಲ್ಲಿ ಸಂಕಷ್ಟದಲ್ಲಿರುವವರ ರಕ್ಷಣೆಗೆ ಮುಖ್ಯಮಂತ್ರಿ ಮುಂದಾಗಬೇಕು. ಅವರು ಗಮನಹರಿಸುತ್ತಾರೆ ಎಂಬ ನಂಬಿಕೆ ನನ್ನದು ಎಂದು ಎಚ್ಡಿಕೆ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.