ಚಿನ್ನಸ್ವಾಮಿ ಬಾಂಬ್ ಸ್ಫೋಟ ಪ್ರಕರಣ; ಮೂವರಿಗೆ 7 ವರ್ಷ ಜೈಲುಶಿಕ್ಷೆ
Team Udayavani, Jul 9, 2018, 5:17 PM IST
ಬೆಂಗಳೂರು: ಸುಮಾರು ಆರು ವರ್ಷಗಳ ಬಳಿಕ ಚಿನ್ನಸ್ವಾಮಿ ಸ್ಟೇಡಿಯಂ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪೊಪ್ಪಿಕೊಂಡ ಮೂವರು ಆರೋಪಿಗಳಿಗೆ ಬೆಂಗಳೂರಿನ ಎನ್ ಐಎ ವಿಶೇಷ ನ್ಯಾಯಾಲಯ ಸೋಮವಾರ 7 ವರ್ಷಗಳ ಜೈಲುಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
2010ರ ಏಪ್ರಿಲ್ 10ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಆರಂಭಕ್ಕೂ ಮುನ್ನ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ 15 ಮಂದಿ ಗಾಯಗೊಂಡಿದ್ದರು. ಪ್ರಕರಣದಲ್ಲಿ ತಪ್ಪೊಪ್ಪಿಕೊಂಡ ಕಮಲ್ ಹಸನ್, ಗೌಹಾರ್ ಅಜೀಜ್ ಖೊಮೆನಿ, ಕಪಿಲ್ ಅಖ್ತರ್ ಗೆ 7 ವರ್ಷಗಳ ಜೈಲುಶಿಕ್ಷೆ ನೀಡಿದೆ.
ಪ್ರಕರಣದ ವಾದ, ಪ್ರತಿವಾದ ಆಲಿಸಿದ ನಂತರ ಎನ್ ಐಎ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಿದ್ದಲಿಂಗ ಪ್ರಭು ತೀರ್ಪು ಪ್ರಕಟಿಸಿದರು.
ಸ್ಫೋಟ ಪ್ರಕರಣದ 5ನೇ ಆರೋಪಿಯಾಗಿರುವ ಗೌಹಾರ್ ಅಜೀಜ್ ಖೋಮೆನಿ, 12ನೇ ಆರೋಪಿ ಕಮಲ್ ಹಸನ್ ಅಲಿಯಾಸ್ ಕಮಲ್ ಹಾಗೂ 13ನೇ ಆರೋಪಿ ಮೊಹಮ್ಮದ್ ಕಫೀಲ್ ಅಖ್ತರ್ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದರು. ಉಳಿದ ಆರೋಪಿಗಳ ಬಗ್ಗೆ ತನಿಖೆ ನಡೆಯಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.