ಪ್ರಿಯಾಂಕ್ ಖರ್ಗೆ ಕ್ಷಮೆ ಕೇಳದಿದ್ದರೆ ಬಿಜೆಪಿಯಿಂದ ”ಚಿತ್ತಾಪುರ ಚಲೋ”


Team Udayavani, Aug 26, 2022, 5:02 PM IST

1-bjp

ಬೆಂಗಳೂರು: ಮಹಿಳೆಯರೆಲ್ಲರಿಗೆ ತಮ್ಮ ಹೇಳಿಕೆ ಮೂಲಕ ಅವಮಾನ ಮಾಡಿದ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಅವರು, ಕ್ಷಮೆ ಕೇಳದಿದ್ದರೆ ಚಿತ್ತಾಪುರ ಚಲೋ ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಗೀತಾ ವಿವೇಕಾನಂದ ಅವರು ಶುಕ್ರವಾರ ಎಚ್ಚರಿಸಿದ್ದಾರೆ. .

ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಪ್ರಿಯಾಂಕ್ ಖರ್ಗೆ ಹೇಳಿಕೆ ಖಂಡಿಸಿ 17 ಜಿಲ್ಲೆಗಳಲ್ಲಿ ಈಗಾಗಲೇ ಮಹಿಳಾ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಸಲಾಗಿದೆ ಆದರೆ, ಪ್ರಿಯಾಂಕ್ ಖರ್ಗೆ ಅವರು ಮನಪೂರ್ವಕವಾಗಿ ಕ್ಷಮೆ ಕೇಳಿಲ್ಲ. ಇದನ್ನು ರಾಜ್ಯ ಮತ್ತು ದೇಶದ ಮಹಿಳೆಯರೆಲ್ಲರ ಪರವಾಗಿ ಖಂಡಿಸುವುದಾಗಿ ತಿಳಿಸಿದರು.

ಸರಕಾರಿ ನೌಕರಿ ಪಡೆಯಲು ಮಹಿಳೆಯರು ಮಂಚ ಏರಬೇಕು ಹಾಗೂ ಯುವಕರು ಲಂಚ ಕೊಡಬೇಕೆಂದು ಪ್ರಿಯಾಂಕ್ ಖರ್ಗೆ ಹೇಳುವ ಮೂಲಕ ಕಾಂಗ್ರೆಸ್ ಪಕ್ಷದ ಕೀಳು ಮನಸ್ಥಿತಿಯನ್ನು ಅನಾವರಣಗೊಳಿಸಿದ್ದಾರೆ. ಇದು ಅತ್ಯಂತ ಖಂಡನಾರ್ಹ. ಅವರು ತಮ್ಮನ್ನು ಚಾಲ್ತಿಯಲ್ಲಿ ಇಡಲು ಇಂತ ಹೇಳಿಕೆ ನೀಡುತ್ತಿದ್ದಾರೆ. ಅವರು ಮಹಿಳೆಯರ ಕುರಿತ ಗೌರವದಿಂದ ಮಾತನಾಡಬೇಕೆಂದು ಆಗ್ರಹಿಸಿದರು. ಈ ರೀತಿಯ ಅಸಭ್ಯ ಪದ ಬಳಸಿದ ಅವರ ವಿರುದ್ಧ ಕಾಂಗ್ರೆಸ್ ಪಕ್ಷ ಉಗ್ರ ಕ್ರಮ ಕೈಗೊಳ್ಳಬೇಕಿತ್ತು. ಆದರೆ, ಹಾಗೆ ಮಾಡಿಲ್ಲ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದರು.

ಮಹಿಳಾ ಸರಕಾರಿ ನೌಕರರೆಲ್ಲರೂ ಉತ್ತಮ ಕುಟುಂಬದ ಹಿನ್ನೆಲೆಯನ್ನೇ ಹೊಂದಿದ್ದಾರೆ. ಅಲ್ಲದೇ ಪರಿಶ್ರಮದ ಮೂಲಕ ಕೆಲಸ ಪಡೆದು ಉನ್ನತ ಹುದ್ದೆಗಳನ್ನೇರಿದ್ದಾರೆ. ಇದನ್ನು ಅವರು ಅರ್ಥ ಮಾಡಿಕೊಳ್ಳಬೇಕಿತ್ತು ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷದ ಮುಖಂಡ ಅಧೀರ್ ರಂಜನ್ ಚೌಧರಿ ಕೆಲವೇ ದಿನಗಳ ಹಿಂದೆ ರಾಷ್ಟ್ರಪತಿಗಳನ್ನು ‘ರಾಷ್ಟ್ರಪತ್ನಿ’ ಎಂದು ಸಂಬೋಧಿಸಿ ಅವಮಾನ ಮಾಡಿದ್ದರು. ಇದೀಗ ಪ್ರಿಯಾಂಕ್ ಖರ್ಗೆ ಅದೇ ಮಾದರಿಯಲ್ಲಿ ಕಾಂಗ್ರೆಸ್ ಪಕ್ಷದವರ ಕೀಳು ಅಭಿರುಚಿಯನ್ನು ಮುಂದುವರೆಸುತ್ತಿರುವುದು ಅತ್ಯಂತ ಬೇಸರ ತಂದಿದೆ ಹಲವಾರು ಮಹಿಳೆಯರು ತಮ್ಮನ್ನು ಸಂಪರ್ಕಿಸಿ ಈ ಬಗ್ಗೆ ಬೇಸರ ತೋಡಿಕೊಂಡಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಬೆಂಗಳೂರು ಉತ್ತರ ಜಿಲ್ಲಾ ವಕ್ತಾರ ಎಸ್ ಹರೀಶ್, ಬೆಂಗಳೂರು ಉತ್ತರ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಶ್ರೀಮತಿ ಆಶಾ ರಾವ್, ಬೆಂಗಳೂರು ಕೇಂದ್ರ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಶ್ರೀಮತಿ ರೇಖಾ ಗೋವಿಂದ, ಬೆಂಗಳೂರು ದಕ್ಷಿಣ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಶ್ರೀಮತಿ ವಿಜಯಲಕ್ಷ್ಮಿ ಆನಂದ್ ಅವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.