BJP: ದಕ್ಷಿಣ ಕನ್ನಡಕ್ಕೆ ಚೌಟ, ಉಡುಪಿಗೆ ಕೋಟ? ಉತ್ತರ ಕನ್ನಡಕ್ಕೆ ಯಾರು ?

ಕೋಟ ಶ್ರೀನಿವಾಸ ಪೂಜಾರಿ ಕಣಕ್ಕಿಳಿಸಲು ವರಿಷ್ಠರ ಒಪ್ಪಿಗೆ

Team Udayavani, Mar 13, 2024, 6:30 AM IST

BJP: ದಕ್ಷಿಣ ಕನ್ನಡಕ್ಕೆ ಚೌಟ, ಉಡುಪಿಗೆ ಕೋಟ? ಉತ್ತರ ಕನ್ನಡಕ್ಕೆ ಯಾರು ?

ಬೆಂಗಳೂರು: ಬಿಜೆಪಿ ಟಿಕೆಟ್‌ ಹಂಚಿಕೆ ವಿಚಾರ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಹಾಲಿ ಸಂಸದರಿಗೆ ಟಿಕೆಟ್‌ ಕೈ ತಪ್ಪುವ ಭೀತಿಯ ಮಧ್ಯೆಯೇ ಕ್ಷೇತ್ರಾಂತರದ ಚರ್ಚೆ ಈಗ ಮುನ್ನೆಲೆಗೆ ಬಂದಿದೆ.

“ಗೋ ಬ್ಯಾಕ್‌ ಶೋಭಾ’ ಅಭಿಯಾನದ ಹಿನ್ನೆಲೆಯಲ್ಲಿ ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳೆರಡರಲ್ಲೂ ತೀವ್ರ ಮುಜುಗರ ಅನುಭವಿಸಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರನ್ನು ಕೊನೆ ಕ್ಷಣದಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ವರ್ಗಾಯಿಸುವ ಮಹತ್ವದ ನಿರ್ಧಾರವನ್ನು ಬಿಜೆಪಿ ವರಿಷ್ಠರು ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದ್ದು, ಇಲ್ಲಿನ ಹಾಲಿ ಸಂಸದ ಡಿ.ವಿ.ಸದಾನಂದ ಗೌಡ ಬಹುತೇಕ ರೇಸ್‌ನಿಂದ ಹೊರಗುಳಿದಿದ್ದಾರೆ. ಶೋಭಾಗೆ ಟಿಕೆಟ್‌ ನೀಡಲೇಬೇಕೆಂದು ಯಡಿಯೂರಪ್ಪ ಪಟ್ಟು ಹಿಡಿದಿದ್ದರು ಎನ್ನಲಾಗಿದೆ.

ಶೋಭಾ ಕ್ಷೇತ್ರಾಂತರ ಹಿನ್ನೆಲೆಯಲ್ಲಿ ಕರಾವಳಿಯ 3 ಜಿಲ್ಲೆಯಲ್ಲಿ ಜಾತಿ ಸಮೀಕರಣ ಬದಲಾಗಿದೆ. ಈ 3 ಜಿಲ್ಲೆಗಳಲ್ಲಿ ಬಹುಸಂಖ್ಯಾಕರಾಗಿರುವ ಬಿಲ್ಲವರು ಹಾಗೂ ನಾಮಧಾರಿ ಸಮುದಾಯದ ಆಕ್ರೋಶ ಶಮನ ಮಾಡುವುದಕ್ಕಾಗಿ ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಕಣಕ್ಕೆ ಇಳಿಸಲು ವರಿಷ್ಠರು ಒಪ್ಪಿಗೆ ಸೂಚಿಸಿದ್ದಾರೆ. ಆರಂಭದಲ್ಲಿ ಈ ಬಗ್ಗೆ ತುಸು ಅಳುಕು ಹೊಂದಿದ್ದ ಕೋಟ ಪೂಜಾರಿ ಅಂತಿಮವಾಗಿ ಒಪ್ಪಿಗೆ ಸೂಚಿಸಿದ್ದಾರೆ. ಇದು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಸತ್‌ ಪ್ರಾತಿನಿಧ್ಯಕ್ಕಾಗಿ ಹಕ್ಕೊತ್ತಾಯ ಮಂಡಿಸಿದ್ದ ಬಿಲ್ಲವ ಸಮುದಾಯದ ಆಕ್ರೋಶ ಶಮನ ಮಾಡುವ ಪ್ರಯತ್ನ ಎಂದು ವ್ಯಾಖ್ಯಾನಿಸಲಾಗುತ್ತಿದೆ.

ನಳಿನ್‌ ಹೊರಕ್ಕೆ?
ಈ ಎಲ್ಲ ಬೆಳವಣಿಗೆಯ ನಡುವೆ ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಕೂಡ ಕ್ಷೇತ್ರ ಕಳೆದುಕೊಳ್ಳುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ನಳಿನ್‌ ಬದಲಿಗೆ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ| ವೈ.ಭರತ್‌ ಶೆಟ್ಟಿ ಅಥವಾ ಕ್ಯಾಪ್ಟನ್‌ ಬೃಜೇಶ್‌ ಚೌಟ ಅವರಿಗೆ ಟಿಕೆಟ್‌ ಲಭಿಸುವ ಸಾಧ್ಯತೆ ನಿಚ್ಚಳವಾಗಿದೆ. ಅಭ್ಯರ್ಥಿ ಬದಲಾವಣೆಯ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೇಸರಿ ಪಾಳಯದಲ್ಲಿ ಸೃಷ್ಟಿಯಾಗಿದ್ದ ಭಿನ್ನಮತ ಶಮನಕ್ಕೆ ಪಕ್ಷ ಮುಂದಾಗಿದೆ.

ಉತ್ತರ ಕನ್ನಡಕ್ಕೆ ಯಾರು ?
ಉತ್ತರಕನ್ನಡ (ಕೆನರಾ) ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಾರೆಂಬುದು ಮಾತ್ರ ಇನ್ನೂ ರಹಸ್ಯವಾಗಿಯೇ ಉಳಿದಿದೆ. ಸೋಮವಾರ ದಿಲ್ಲಿಯಲ್ಲಿ ಪ್ರಧಾನಿ ಉಪಸ್ಥಿತಿಯಲ್ಲಿ ನಡೆದ ಸಿಇಸಿ ಸಭೆಯಲ್ಲಿ ಈ ಕ್ಷೇತ್ರದ ಅಭ್ಯರ್ಥಿ ವಿಚಾರವನ್ನು ಬಾಕಿ ಉಳಿಸಲಾಗಿದೆ. ಸಂಘದ ಹಿರಿಯರ ಜತೆಗೆ ಚರ್ಚೆ ನಡೆಸಿಯೇ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದ್ದು, ಬಹುತೇಕ ಬ್ರಾಹ್ಮಣ ಸಮುದಾಯದ ವ್ಯಕ್ತಿ ಅಭ್ಯರ್ಥಿಯಾಗಲಿದ್ದಾರೆ. ಈ ಮೂಲಕ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಪ್ರಬಲ ಮೂರು ಸಮುದಾಯಗಳನ್ನು ಸಮತೋಲನಗೊಳಿಸಲು ಬಿಜೆಪಿ ಮುಂದಾಗಿದೆ.

ಬಿಜೆಪಿ ಮೂಲಗಳ ಪ್ರಕಾರ ಹಾಲಿ ಸಂಸದ ಅನಂತಕುಮಾರ್‌ ಹೆಗಡೆಯವರಿಗೆ ಟಿಕೆಟ್‌ ಕೊಟ್ಟರೆ ಗೆಲ್ಲುವುದಕ್ಕೆ ಸಮಸ್ಯೆಯಿಲ್ಲ. ಎಂದಿನಂತೆ ಭಾರೀ ಅಂತರದಿಂದ ಅವರು ಗೆಲ್ಲುತ್ತಾರೆಂಬ ವರದಿಯನ್ನು ವರಿಷ್ಠರು ಪಡೆದುಕೊಂಡಿದ್ದಾರೆ. ಆದರೆ ಅವರ ಕೆಲವು ಹೇಳಿಕೆಗಳು ಹಾಗೂ ನಡಾವಳಿಗಳು ವರಿಷ್ಠರ ಬೇಸರಕ್ಕೆ ಕಾರಣವಾಗಿದೆ.

ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನ ಪ್ರಧಾನ ಕಾರ್ಯದರ್ಶಿಗಳು ಹೆಗಡೆ ಬಗ್ಗೆ ಬೇಸರ ಹೊಂದಿದ್ದಾರೆ. ಆದರೆ ಸಂಘ ಪರಿವಾರದ ಹಿರಿಯರು ಮಾತ್ರ ಅನಂತಕುಮಾರ್‌ ಪರವಾಗಿಯೇ ನಿಲ್ಲುವ ಸಾಧ್ಯತೆ ಇದೆ. ಒಂದೆಡೆ ಬದಲಿ ಅಭ್ಯರ್ಥಿ ಶೋಧ ನಡೆಯುತ್ತಿದ್ದರೂ ಕ್ಷೇತ್ರದಲ್ಲಿ ಹೆಗಡೆ ಭರದ ಸಿದ್ಧತೆ ನಡೆಸಿದ್ದಾರೆ. ಕಾರವಾರದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ “ಕರಿಮಣಿ ಮಾಲೀಕ ಯಾರಿಲ್ಲ’ ಎಂಬ ಹೇಳಿಕೆ ನೀಡಿ ಹಲವು ಸಂದೇಶ ರವಾನೆ ಮಾಡಿದ್ದಾರೆ. ಬಿಜೆಪಿ ಮೂಲಗಳ ಪ್ರಕಾರ ಈ ಕ್ಷೇತ್ರದ ಬಗ್ಗೆ ಕೊನೆಯಲ್ಲಿ ವರಿಷ್ಠರು ನಿರ್ಧಾರ ತೆಗೆದುಕೊಳ್ಳಬಹುದು ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

1-srrrr

English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

4

Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

3(1

Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.