ವಿಶ್ವಾದ್ಯಂತ ಸಂಭ್ರಮದ ಕ್ರಿಸ್‌ಮಸ್;ರಾಜ್ಯದಲ್ಲೂ ಸಡಗರ,ಶಾಂತಿ ಸಂದೇಶ
Team Udayavani, Dec 25, 2018, 3:55 PM IST
ಬೆಂಗಳೂರು: ವಿಶ್ವಾದ್ಯಂತ ಏಸು ಕ್ರಿಸ್ತ ಜನಿಸಿದ ದಿನವಾದ ಕ್ರಿಸ್‌ಮಸ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ರಾಜ್ಯದಲ್ಲೂ ಸಂಭ್ರಮ ಜೋರಾಗಿದೆ.
ಬೆಂಗಳೂರು, ಮಂಗಳೂರು, ಉಡುಪಿ,ಕಾರವಾರ ಸೇರಿದಂತೆ ರಾಜ್ಯದ ವಿವಿಧೆಡೆ ಚರ್ಚ್‌ಗಳಿಗೆ ವಿಶೇಷ ಅಲಂಕಾರಗಳನ್ನು ಮಾಡಲಾಗಿದ್ದು, ಕ್ರೈಸ್ತ ಧರ್ಮೀಯರು ವಿಶೇಷ ಪ್ರಾರ್ಥನೆಗಳನ್ನು ಸಲ್ಲಿಸಿದ್ದಾರೆ.
ಸೋಮವಾರ ಮಧ್ಯರಾತ್ರಿಯಿಂದಲೇ ಕ್ರೈಸ್ತರು ಸಮೀಪದ ಚರ್ಚ್‌ಗಳಿಗೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಸ್ನೇಹಿತರು, ಬಂಧು ಬಾಂಧವರೊಂದಿಗೆ ಶುಭಾಶಯ ವಿನಿಮಯ ಮಾಡಿಕೊಂಡರು.
ಯೇಸುವಿನ ಜನ್ಮ ದಿನದ ಪ್ರಯುಕ್ತ ಚರ್ಚ್‌ಗಳಲ್ಲಿ ಮಾಡಿದ್ದ ಗೋದಲಿ ಹಾಗೂ ಪುಟ್ಟ ಗೊಂಬೆಗಳ ಪ್ರದರ್ಶನ ಆಕರ್ಷಣೆಯ ಕೇಂದ್ರಬಿಂದುವಾಗಿದ್ದವು. ಏಸುಕ್ರಿಸ್ತನ ಜನ್ಮ ವೃತ್ತಾಂತವನ್ನು ಗೋದಲಿಯಲ್ಲಿ ಪುಟ್ಟ ಗೊಂಬೆಗಳ ಪ್ರದರ್ಶನದ ಮೂಲಕ ತೋರಿಸುವ ವ್ಯವಸ್ಥೆ ಮಾಡಲಾಗಿತ್ತು.
ಹಬ್ಬದ ಅಂಗವಾಗಿ ಚರ್ಚ್‌ಗಳಲ್ಲಿ ವಿಶೇಷ ಸಾಂಸ್ಕೃತಿಕ ಸಮಾರಂಭ, ಉಪನ್ಯಾಸ ಸೇರಿದಂತೆ ಹಲವು ಕಾರ್ಯಕ್ರಮ ಜರುಗಿದವು. ಮಕ್ಕಳ ಪ್ರೀತಿಗೆ ಪಾತ್ರನಾದ ಸಾಂತಾಕ್ಲಾಸ್ ವೇಷಧಾರಿಗಳು ಕ್ರಿಸ್ತನ ಸಂದೇಶಗಳನ್ನು ಬೋಧಿಸಿದರು. ಮಕ್ಕಳಿಗೆ ವಿವಿಧ ಪ್ರಕಾರದ ಸಿಹಿ ತಿನಿಸುಗಳು ಮತ್ತು ಕೊಡುಗೆಗಳನ್ನು ನೀಡಿ ಶುಭ ಹಾರೈಸಿದರು.
ಹಬ್ಬದ ಹಿನ್ನೆಲೆಯಲ್ಲಿ ಧರ್ಮಗುರುಗಳು ಏಸುಕ್ರಿಸ್ತನ ಸಂದೇಶ ಪಠಣ ಮಾಡಿದರು. ಜೀವನದಲ್ಲಿ ಏಸುಕ್ರಿಸ್ತನ ಸಂದೇಶ ಅಳವಡಿಸಿಕೊಳ್ಳುವ ಮೂಲಕ ವಿಶ್ವದಲ್ಲಿ ಶಾಂತಿ, ಸಹಬಾಳ್ವೆ ನೆಲೆಸುವಂತಾಗಬೇಕು ಎಂದು ಕರೆ ನೀಡಿದ್ದಾರೆ.
ಕೇಕ್ ಮತ್ತು ಸಿಹಿತಿಂಡಿಗಳನ್ನು ಹಂಚಿಕೊಂಡು ಪರಸ್ಪರ ಶುಭಕೋರಿಕೊಳ್ಳುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Surathkal: ಸಿಲಿಂಡರ್ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ
Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್ ಶಾಕ್: ಕಾರ್ಮಿಕನ ಸಾವು
Thokottu: ಸ್ಕೂಟರ್ ಪಲ್ಟಿಯಾಗಿ ಸವಾರ ಸಾವು
PAK Vs SA: ಸೆಂಚುರಿಯನ್ ಟೆಸ್ಟ್ ಪಾಕಿಸ್ಥಾನ 211ಕ್ಕೆ ಆಲೌಟ್
Test cricket: ಮ್ಯಾಚ್ ರೆಫರಿಯಾಗಿ ನೂರು ಟೆಸ್ಟ್ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.