CID ಸೂರಜ್‌ಗೆ ಮುಂದುವರಿದ ಸಿಐಡಿ ಪ್ರಶ್ನೆಗಳ ಸುರಿಮಳೆ
Team Udayavani, Jul 1, 2024, 12:00 AM IST
ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ(Suraj Revanna)ಗೆ ಸಿಐಡಿ(CID) ಅಧಿಕಾರಿಗಳು ಡ್ರಿಲ್ ಮಾಡಿ ಅವರ ವಿರುದ್ಧದ ಆರೋಪದ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದು, ಕೆಲವೊಂದು ಸಾಕ್ಷ್ಯ ಮುಂದಿಟ್ಟು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.
ಅಧಿಕಾರಿಗಳ ಪ್ರಶ್ನೆಗಳ ಸುರಿಮಳೆಗೆ ಉತ್ತರಿಸಲಾಗದೆ ಸೂರಜ್(Suraj Revanna) ಚಿಂತೆಗೀಡಾಗಿದ್ದಾರೆ. ಇತ್ತ ಸಿಐಡಿ ಅಧಿಕಾರಿಗಳು ಸೂರಜ್‌ರಿಂದ ಸತ್ಯ ಬಾಯ್ಬಿಡಿಸಿ ಹೇಳಿಕೆ ದಾಖಲಿಸಿಕೊಳ್ಳಲು ವಿವಿಧ ಕಸರತ್ತು ನಡೆಸುತ್ತಿದ್ದಾರೆ. ಆದರೆ ಸೂರಜ್ ಮತ್ತೆ ಗೊಂದಲದ ಹೇಳಿಕೆ ನೀಡುತ್ತಿದ್ದಾರೆನ್ನಲಾಗಿದೆ.
ಈಗಾಗಲೇ ನಡೆಸಿರುವ ಸೂರಜ್ ವೈದ್ಯಕೀಯ ಪರೀಕ್ಷೆಯ ವರದಿ ಶೀಘ್ರದಲ್ಲೇ ಸಿಐಡಿ ಕೈ ಸೇರಲಿದ್ದು, ಪ್ರಕರಣದಲ್ಲಿ ಇದು ಮಹತ್ವದ ಸಾಕ್ಷ್ಯವಾಗಲಿದೆ ಎಂದು ಮೂಲಗಳು ತಿಳಿಸಿವೆ.
ಇಂದು ಕಸ್ಟಡಿ ಅಂತ್ಯ
ವ್ಯಕ್ತಿಯೊಬ್ಬನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಸಿಐಡಿ ಅಧಿಕಾರಿಗಳು ಎಂಎಲ್‌ಸಿ ಸೂರಜ್ ರೇವಣ್ಣ ಅವರನ್ನು ವಶಕ್ಕೆ ಪಡೆದ ಅವಧಿ ಸೋಮವಾರ (ಜು. 1) ಅಂತ್ಯ ಗೊಳ್ಳಲಿದ್ದು, ಇಂದು ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆಗಳಿವೆ. ಅಶ್ಲೀಲ ಪೆನ್‌ಡ್ರೈವ್ ಕೇಸ್‌ನಲ್ಲಿ ಸಿಲುಕಿ ಕೊಂಡಿರುವ ಸೂರಜ್ ಸಹೋದರ ಪ್ರಜ್ವಲ್ ಈಗಾಗಲೇ ಪರಪ್ಪನ ಅಗ್ರಹಾರದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.