CID SIT Chargesheet; ಜಾತಿನಿಂದನೆ ಧ್ವನಿ ಮುನಿರತ್ನರದೇ: ಸಂಕಷ್ಟ
Team Udayavani, Dec 1, 2024, 6:45 AM IST
ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಪೂರ್ಣಗೊಳಿಸಿರುವ ಸಿಐಡಿ ಎಸ್‌ಐಟಿ ಅಧಿಕಾರಿಗಳು 82ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ 590 ಪುಟಗಳ ಆರೋಪಪಟ್ಟಿ ಸಲ್ಲಿಸಿದ್ದಾರೆ. ಈ ಮೂಲಕ ಮುನಿರತ್ನ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ.
ಗುತ್ತಿಗೆದಾರ ಚೆಲುವರಾಜು ಜತೆ ಮಾತನಾಡಿರುವ ಆಡಿಯೋದಲ್ಲಿರುವುದು ಶಾಸಕ ಮುನಿರತ್ನ ಅವರದೇ ಧ್ವನಿ ಎಂಬುದು ವಿಧಿವಿಜ್ಞಾನ ಪ್ರಯೋಗಾಲಯದ ವರದಿಯಲ್ಲಿ ದೃಢಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಮುನಿರತ್ನ ಸಾರ್ವ ಜನಿಕವಾಗಿ ಜಾತಿನಿಂದನೆ ಮಾಡಿರುವುದು, ಸಾಕ್ಷಿದಾರರಿಗೆ ಅವಾಚ್ಯ ಪದಗಳಿಂದ ನಿಂದಿಸಿ, ಬೆದರಿಕೆ ಹಾಕಿರುವುದು ಮತ್ತು ಜಾತಿ ಜಾತಿಗಳ ನಡುವೆ ವೈಷಮ್ಯ ಉಂಟು ಮಾಡಿರುವುದು ಸಾಬೀತಾಗಿದೆ ಎಂದು ಆರೋಪಪಟ್ಟಿಯಲ್ಲಿದೆ.
590 ಪುಟ, 53 ಸಾಕ್ಷಿಗಳ ಹೇಳಿಕೆ
ಗುತ್ತಿಗೆದಾರ ಚೆಲುವರಾಜು ಜತೆ ಮುನಿರತ್ನ ಮಾತನಾಡು ವಾಗ ಮತ್ತೂಬ್ಬ ಗುತ್ತಿಗೆದಾರ ವೇಲುನಾಯ್ಕರ್ ಅವರ ಜಾತಿಯ ಬಗ್ಗೆ ಕೀಳಾಗಿ ಮಾತನಾಡಿರುವುದು ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಪ್ರತ್ಯಕ್ಷ ಸಾಕ್ಷಿ ಚೆಲುವರಾಜು ಸೇರಿ ಮೂವರು ನ್ಯಾಯಾಧೀಶರ ಮುಂದೆಯೇ 164 ಅಡಿ ನೀಡಿರುವ ಹೇಳಿಕೆ, 53 ಮಂದಿಯ ಸಾಕ್ಷಿಗಳ ಹೇಳಿಕೆ ಹಾಗೂ ತಾಂತ್ರಿಕ ಸಾಕ್ಷ್ಯ ಸೇರಿ 157 ದಾಖಲೆಗಳು ಸೇರಿ 590 ಪುಟಗಳ ಆರೋಪ ಪಟ್ಟಿ ಸಲ್ಲಿಸಲಾಗಿದೆ ಎಂದು ಸಿಐಡಿ ಅಧಿಕಾರಿಗಳು ಹೇಳಿದ್ದಾರೆ.
ಏನಿದು ಪ್ರಕರಣ?
ಚೆಲುವರಾಜು ಜತೆ ಮಾತನಾಡುವ ವೇಳೆ ಶಾಸಕ ಮುನಿರತ್ನ ಜೀವ ಬೆದರಿಕೆ ಒಡ್ಡಿದ್ದಲ್ಲದೆ ಜಾತಿ ನಿಂದನೆ ಮಾಡಿದ್ದಾರೆಂದು ಆರೋಪಿಸಿ ವೇಲು ನಾಯ್ಕರ್ ಸೆ. 13ರಂದು ವೈಯಾಲಿಕಾವಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅಲ್ಲದೆ ಮುನಿರತ್ನ ನಿಂದನೆ ಮಾಡಿದ್ದ ಆಡಿಯೋವನ್ನು ಪೊಲೀಸರಿಗೆ ನೀಡಿದ್ದರು. ಪ್ರಕರಣದ ಸಂಬಂಧ ಸೆ. 14ರಂದು ಪೊಲೀಸರು ಕೋಲಾರ ಸಮೀಪದಲ್ಲಿ ಮುನಿರತ್ನ ಅವರನ್ನು ಬಂಧಿಸಿದ್ದರು.
ಚಾರ್ಜ್‌ಶೀಟ್‌ನಲ್ಲೇನಿದೆ?
ಗುತ್ತಿಗೆದಾರನ ಜತೆ ಮಾತನಾಡಿದ್ದ ಆಡಿಯೋದಲ್ಲಿ ಇರುವುದು ಮುನಿರತ್ನ ಧ್ವನಿ ಎಂಬುದು ಸಾಬೀತು
ವಿಧಿವಿಜ್ಞಾನ ಪ್ರಯೋಗಾಲಯದ ವರದಿಯಲ್ಲಿ ಇದು ದೃಢಪಟ್ಟ ಬಗ್ಗೆ ಉಲ್ಲೇಖ
ಮುನಿರತ್ನ ಸಾರ್ವಜನಿಕವಾಗಿ ಜಾತಿನಿಂದನೆ ಮಾಡಿದ್ದು ಸಾಬೀತು
ಸಾಕ್ಷಿದಾರರಿಗೆ ಅವಾಚ್ಯ ಪದಗಳಿಂದ ನಿಂದಿಸಿ, ಬೆದರಿಕೆ ಹಾಕಿರುವ ಬಗ್ಗೆ ವರದಿ
ಜಾತಿ ಜಾತಿಗಳ ನಡುವೆ ವೈಷಮ್ಯ ಉಂಟು ಮಾಡಿರುವುದು ಸಾಬೀತು: ತನಿಖಾಧಿಕಾರಿಗಳು
ಮತ್ತೊಬ್ಬ ಗುತ್ತಿಗೆದಾರ ವೇಲುನಾಯ್ಕರ್ ಅವರ ಜಾತಿ ಬಗ್ಗೆ ಕೀಳಾಗಿ ಮಾತನಾಡಿರುವುದು ಸಾಬೀತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.